Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ: ಕೊರೋನ ಸೋಂಕಿನಿಂದ ಮೃತರ ಸಂಖ್ಯೆ...

ಅಮೆರಿಕ: ಕೊರೋನ ಸೋಂಕಿನಿಂದ ಮೃತರ ಸಂಖ್ಯೆ 8 ಲಕ್ಷಕ್ಕೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ15 Dec 2021 11:53 PM IST
share
ಅಮೆರಿಕ: ಕೊರೋನ ಸೋಂಕಿನಿಂದ ಮೃತರ ಸಂಖ್ಯೆ 8 ಲಕ್ಷಕ್ಕೆ ಏರಿಕೆ

ನ್ಯೂಯಾರ್ಕ್, ಡಿ.15: ಅಮೆರಿಕದಲ್ಲಿ ಕೊರೋನ ಸೋಂಕಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 8 ಲಕ್ಷದ ಗಡಿ ತಲುಪಿದ್ದು , ಕೊರೋನ ಸೋಂಕಿನಿಂದ ಅತ್ಯಧಿಕ ಸಾವು ಸಂಭವಿಸಿದ ದೇಶಗಳ ಪಟ್ಟಿಯಲ್ಲಿ ಅಮೆರಿಕ ಅಗ್ರಸ್ಥಾನದಲ್ಲಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿವಿ ಬಿಡುಗಡೆಗೊಳಿಸಿದ ಅಂಕಿಅಂಶ ತಿಳಿಸಿದೆ. ಅಮೆರಿಕದಲ್ಲಿ ಸೋಂಕಿನಿಂದ ಮೃತಪಟ್ಟವರಲ್ಲಿ ಲಸಿಕೆ ಪಡೆಯದವರ ಪ್ರಮಾಣ ಹೆಚ್ಚು ಎಂದು ವರದಿ ಹೇಳಿದೆ. ‌

ವಿಶ್ವದ ಜನಸಂಖ್ಯೆಯ ಸುಮಾರು 4% ಜನ ಅಮೆರಿಕದಲ್ಲಿದ್ದಾರೆ. ಆದರೆ ಕೊರೋನ ಸೋಂಕಿನಿಂದ ಜಾಗತಿಕವಾಗಿ ದಾಖಲಾದ 5.3 ಮಿಲಿಯನ್ ಮರಣ ಪ್ರಕರಣಗಳ ಸುಮಾರು 15% ಮರಣ ಅಮೆರಿಕದಲ್ಲಿ ಸಂಭವಿಸಿದೆ ಎಂದು ಮಂಗಳವಾರ ಬಿಡುಗಡೆಯಾದ ವರದಿ ಹೇಳಿದೆ. ಕೊರೋನ ಸೋಂಕಿಗೆ ಸಂಬಂಧಿಸಿ 8 ಲಕ್ಷ ಅಮೆರಿಕನರ ಸಾವಿನ ದುರಂತ ಮೈಲುಗಲ್ಲಿನ ಗಡಿಯನ್ನು ನಾವಿಂದು ತಲುಪಿದ್ದು ಈ ಸಂದರ್ಭ ಪ್ರತಿಯೊಬ್ಬರನ್ನೂ ಸ್ಮರಿಸುತ್ತಾ ಅವರ ಕುಟುಂಬದವರು ಹಾಗೂ ನಿಕಟ ಬಂಧುಗಳ ಪರವಾಗಿ ಪ್ರಾರ್ಥಿಸುತ್ತೇವೆ . ಇನ್ನೇನು ಚಳಿಗಾಲ ಆರಂಭವಾಗಲಿದ್ದು ಜತೆಗೇ ಹೊಸ ರೂಪಾಂತರಿತ ಸೋಂಕು ದೃಢಪಟ್ಟಿರುವಾಗ, ಸೋಂಕಿನ ವಿರುದ್ಧ ಜತೆಗೂಡಿ ಹೋರಾಡಲು ಸಂಕಲ್ಪ ಮಾಡಬೇಕಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. 

ಡೆಲ್ಟಾ ರೂಪಾಂತರ ಉಲ್ಬಣಗೊಂಡ ಸಮಯದಲ್ಲಿ ಅಮೆರಿಕದಲ್ಲಿ ಲಸಿಕಾಕರಣ ಪ್ರಕ್ರಿಯೆ ವೇಗ ಪಡೆದಿದ್ದು ದೇಶದ ಜನಸಂಖ್ಯೆಯ 60%ಕ್ಕೂ ಅಧಿಕ, ಅಂದರೆ 332 ಮಿಲಿಯನ್ ಜನತೆ ಈಗ ಸಂಪೂರ್ಣ ಲಸಿಕೆ ಪಡೆದಿದ್ದಾರೆ. ಆದರೆ ಇತರ ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಈ ಪ್ರಮಾಣ ಅತ್ಯಂತ ಕಡಿಮೆಯಾಗಿದೆ. ಈಗ ಅಮೆರಿಕದ ಉತ್ತರ ರಾಜ್ಯಗಳಲ್ಲಿ ತೀವ್ರ ಚಳಿಯ ಸಮಯವಾದ್ದರಿಂದ ಜನತೆ ಒಳಾಂಗಣ ಪ್ರದೇಶಗಳಲ್ಲೇ ಹೆಚ್ಚಾಗಿ ಗುಂಪು ಸೇರುತ್ತಾರೆ. ಇದು ಸೋಂಕಿನ 5ನೇ ಅಲೆಗೆ ನಾಂದಿ ಹಾಡಬಹುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. 

ಈಗ ಅಮೆರಿಕದಲ್ಲಿ ದಾಖಲಾಗಿರುವ ಸಕ್ರಿಯ ಪ್ರಕರಣಗಳ ಸುಮಾರು 3%ದಷ್ಟು ಒಮೈಕ್ರಾನ್ ಸೋಂಕು ಪ್ರಕರಣವಾಗಿದ್ದು ಈ ಪ್ರಮಾಣ ತೀವ್ರಗತಿಯಲ್ಲಿ ಹೆಚ್ಚುವ ನಿರೀಕ್ಷೆಯಿದೆ. ಒಮೈಕ್ರಾನ್‌ನಿಂದ ಸೌಮ್ಯ ಪ್ರಮಾಣದ ಅನಾರೋಗ್ಯ ಉಂಟಾಗುತ್ತದೆ ಎಂದು ಆರಂಭಿಕ ಅಂಕಿಅಂಶ ತಿಳಿಸಿದ್ದರೂ, ಅದರ ಪ್ರಸರಣ ಸಾಮರ್ಥ್ಯ ಹೆಚ್ಚಿರುವುದು ಮತ್ತು ಪ್ರತಿರೋಧ ಶಕ್ತಿಯನ್ನು ಮೀರುವ ಸಾಮರ್ಥ್ಯದಿಂದ ಅತ್ಯಧಿಕ ಜನರಿಗೆ ಸೋಂಕು ತಗುಲಬಹುದು. ಆದ್ದರಿಂದ 16 ವರ್ಷ ಮೀರಿದ ಎಲ್ಲರೂ ಬೂಸ್ಟರ್ ಡೋಸ್ ಪಡೆದು ಪ್ರತಿರೋಧ ಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದು ಆರೋಗ್ಯ ಅಧಿಕಾರಿಗಳು ಆಗ್ರಹಿಸಿದ್ದಾರೆ. ಅಮೆರಿಕದಲ್ಲಿ ಕೊರೋನ ಸೋಂಕಿಗೆ ಸಂಬಂಧಿಸಿದ ಸಾವಿನ ಪ್ರಕರಣ 8 ಲಕ್ಷದ ಗಡಿ ದಾಟಿದ ವರದಿಯ ಬಳಿಕ ಅಮೆರಿಕದ ಸಂಸತ್ತಿನ ಸದಸ್ಯರು ಕ್ಯಾಪಿಟಲ್ ಬಿಲ್ಡಿಂಗ್‌ನ ಮೆಟ್ಟಿಲಿನ ಮೇಲೆ ನಿಂತು 1 ನಿಮಿಷದ ಮೌನ ಆಚರಿಸುವ ಮೂಲಕ ಮೃತರಿಗೆ ಸಂತಾಪ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X