ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಯೋಜನೆಯಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ

ನವದೆಹಲಿ: ತುಳು ಭಾಷೆಯನ್ನು ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.
ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಲೋಕಸಭೆ ಸಂಸದ ರಾಜಮೋಹನ್ ಉನ್ನಿತಾನ್ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಸದ್ಯದಲ್ಲಿಯೇ ಯಾವುದೇ ಸೇರ್ಪಡೆಯ ಯೋಜನೆಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜಮೋಹನ್ ಉನ್ನಿತ್ತಾನ್ ಅವರು ತುಳು ಭಾಷೆಯನ್ನು 8 ನೇ ಶೆಡ್ಯೂಲ್‌ಗೆ ಸೇರಿಸುವ ಬಗ್ಗೆ ಸರ್ಕಾರದ ನಿಲುವನ್ನು ಕೇಳಿದ್ದರು. ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಸಚಿವರು “ಡಾ. ಸೀತಾಕಾಂತ್ ಮೊಹಾಪಾತ್ರ ಸಮಿತಿಯು ಎಂಟನೇ ಶೆಡ್ಯೂಲ್‌ನಲ್ಲಿರುವ ಭಾಷೆಗಳನ್ನು ಒಕ್ಕೂಟದ ಅಧಿಕೃತ ಭಾಷೆಗಳಾಗಿ ಗುರುತಿಸುವ ಬಗ್ಗೆ ಯಥಾಸ್ಥಿತಿಯನ್ನು ಮುಂದುವರಿಸಬೇಕು ಎಂದು ಶಿಫಾರಸು ಮಾಡಿತ್ತು. ಪ್ರಸ್ತುತ, ಅಧಿಕೃತ ಭಾಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಪ್ರಾಯೋಗಿಕ ಅಥವಾ ಆಡಳಿತಾತ್ಮಕವಾಗಿ ಕಾರ್ಯಸಾಧ್ಯವಲ್ಲ" ಎಂದು ಹೇಳಿಕೆ ನೀಡಿದ್ದಾರೆ.
Next Story





