ಕನ್ನಡ ಬಾವುಟಕ್ಕೆ ಅವಮಾನ: ಚಿತ್ರ ನಟರು ಪ್ರತಿಕ್ರಿಯಿಸಿದ್ದು ಹೀಗೆ...

ಸಾಂದರ್ಭಿಕ ಚಿತ್ರ
ಬೆಂಗಳೂರು: ಇತ್ತೀಚೆಗೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡದ ಬಾವುಟಕ್ಕೆ ಎಮ್ ಇ ಎಸ್ ಕಾರ್ಯಕರ್ತರು ಬೆಂಕಿ ಹಚ್ಚಿರುವ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ವಿಧಾನ ಸಭೆ ಅಧಿವೇಶನದಲ್ಲಿ ಈ ಬಗ್ಗೆ ಜೆಡಿಎಸ್ ಶಾಸಕ ಅನ್ನದಾನಿ ಮಹಾರಾಷ್ಟ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿತ್ರ ನಟರಾಗಿರುವ ಶಿವರಾಜಕುಮಾರ್, ಗಣೇಶ್, ದುನಿ ವಿಜಯ್ ಹಾಗೂ ದ್ರುವ ಸರ್ಜಾ ಈ ಕುರಿತು ಟ್ವೀಟ್ ಮಾಡಿ ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.
''ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ'' ಎಂದು ನಟ ಡಾ.ಶಿವರಾಜಕುರ್ ಒತ್ತಾಯಿಸಿದ್ದಾರೆ.
''ಅವರು ಸುಟ್ಟಿದ್ದು ಧ್ವಜವಲ್ಲ, ಕನ್ನಡಿಗರ ಸ್ವಾಭಿಮಾನದ ಕಿಚ್ಚು. ಭುವನೇಶ್ವರಿಯ ಮುಕುಟ ಎಂದೂ ಮುಕ್ಕಾಗದು. ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು'' ಎಂದು ಇನ್ನೋರ್ವ ನಟ ಗಣೇಶ್ ಸಿಎಂ ಬೊಮ್ಮಾಯಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.
''#ಭಾಷೆ ಅನ್ನೋದು ಒಂದು ನಾಡಿನ ಸ್ವಾಭಿಮಾನದ ಪ್ರತೀಕ.ಕನ್ನಡಧ್ವಜ ನಮ್ಮ #ಸಂಸ್ಕೃತಿಯ ತಿಲಕ. #ಕನ್ನಡಧ್ವಜ ವನ್ನು ಸುಟ್ಟಿದ್ದು ತೀವ್ರ ಬೇಸರ ತರಿಸಿದೆ! ಸರ್ಕಾರ ಈಕೂಡಲೇ ಇಂತಹ ನಾಡದ್ರೋಹಿಗಳ ಮೇಲೆ ನಿರ್ದಾಕ್ಷಿಣ್ಯಕ್ರಮ ಕೈಗೊಂಡು ಕನ್ನಡಿಗರ ಸ್ವಾಭಿಮಾನವನ್ನು ರಕ್ಷಿಸಬೇಕೆನ್ನುವುದು ನನ್ನಂತ ಕೋಟ್ಯಾಂತರ ಕನ್ನಡಿಗರ ಒತ್ತಯ ಜೈಆಂಜನೇಯ'' ಎಂದು ದ್ರುವ ಸರ್ಜಾ ಪ್ರತಿಕ್ರಿಯಿಸಿದ್ದಾರೆ.
ನಾಡು,ನುಡಿ,ಭಾಷೆ ನಮ್ಮ ಉಸಿರಾಟದ ಒಂದು ಭಾಗ.ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ ನಟ ದುನಿ ವಿಜಯ್ ಹೇಳಿದ್ದಾರೆ.
''ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ಮಹಾರಾಷ್ಟ್ರ ಮುಖ್ಯಮಂತ್ರಿ ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ''.
-ದರ್ಶನ್ ತೂಗುದೀಪ, ನಟ
ಇನ್ನು ಈ ಕುರಿತು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ ಕುಮಾರಸ್ವಾಮಿ ಅವರು ಕೂಡ ಪ್ರತಿಕ್ರಿಯಿಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ.#ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ#releasekannadaactivists@BSBommai @CMofKarnataka @JnanendraAraga @COPBELAGAVI pic.twitter.com/qcjOVdb4SS
— DrShivaRajkumar (@NimmaShivanna) December 15, 2021
ಅವರು ಸುಟ್ಟಿದ್ದು ಧ್ವಜವಲ್ಲ,
— Ganesh (@Official_Ganesh) December 16, 2021
ಕನ್ನಡಿಗರ ಸ್ವಾಭಿಮಾನದ ಕಿಚ್ಚು.
ಭುವನೇಶ್ವರಿಯ ಮುಕುಟ ಎಂದೂ ಮುಕ್ಕಾಗದು.
ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು @CMofKarnataka
ಜೈ ಕನ್ನಡಾಂಬೆ!! pic.twitter.com/YsITVrhQwe
#ಭಾಷೆ ಅನ್ನೋದು ಒಂದು ನಾಡಿನ ಸ್ವಾಭಿಮಾನದ ಪ್ರತೀಕ.ಕನ್ನಡಧ್ವಜ ನಮ್ಮ #ಸಂಸ್ಕೃತಿಯ ತಿಲಕ.
— Dhruva Sarja (@DhruvaSarja) December 16, 2021
#ಕನ್ನಡಧ್ವಜ ವನ್ನು ಸುಟ್ಟಿದ್ದು ತೀವ್ರ ಬೇಸರ ತರಿಸಿದೆ!
ಸರ್ಕಾರ ಈಕೂಡಲೇ ಇಂತಹ ನಾಡದ್ರೋಹಿಗಳ ಮೇಲೆ ನಿರ್ದಾಕ್ಷಿಣ್ಯಕ್ರಮ ಕೈಗೊಂಡು ಕನ್ನಡಿಗರ ಸ್ವಾಭಿಮಾನವನ್ನು ರಕ್ಷಿಸಬೇಕೆನ್ನುವುದು ನನ್ನಂತ ಕೋಟ್ಯಾಂತರ ಕನ್ನಡಿಗರ ಒತ್ತಯ ಜೈಆಂಜನೇಯ pic.twitter.com/iDr0pt0yk1
ನಾಡು,ನುಡಿ,ಭಾಷೆ ನಮ್ಮ ಉಸಿರಾಟದ ಒಂದು ಭಾಗ.ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ. pic.twitter.com/6K5IxYW3J9
— Salaga Vijay (@SalagaVijay) December 16, 2021







