Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಟೇಶ್ವರ-ಸೋಮೇಶ್ವರ ರಾಜ್ಯ ಹೆದ್ದಾರಿ...

ಕೋಟೇಶ್ವರ-ಸೋಮೇಶ್ವರ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ತೊಡಕು; ಅನಧಿಕೃತ ಕಟ್ಟಡ ತೆರವಿಗೆ ಗ್ರಾಮಸ್ಥರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Dec 2021 7:01 PM IST
share
ಕೋಟೇಶ್ವರ-ಸೋಮೇಶ್ವರ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ತೊಡಕು; ಅನಧಿಕೃತ ಕಟ್ಟಡ ತೆರವಿಗೆ ಗ್ರಾಮಸ್ಥರಿಂದ ಪ್ರತಿಭಟನೆ

ಕುಂದಾಪುರ, ಡಿ.16:ಕೋಟೇಶ್ವರ-ಸೋಮೇಶ್ವರ ರಾಜ್ಯ ಹೆದ್ದಾರಿಯಲ್ಲಿ ಕಾಳಾವರ ಬಸ್ಸು ನಿಲ್ದಾಣದ ಸಮೀಪದ ದೀರ್ಘ ತಿರುವನ್ನು ವೈಜ್ಞಾನಿಕವಾಗಿ ನೆರಗೊಳಿಸುವ ಕಾರ್ಯವನ್ನು ಕುಂದಾಪುರ ಉಪವಿಭಾಗ ಹಮ್ಮಿಕೊಂಡಿದ್ದು, ಇದಕ್ಕೆ ಅಡ್ಡಿಯಾಗಿರುವ ಖಾಸಗಿಯವರ ಅನಧಿಕೃತ ಕಟ್ಟಡವನ್ನು ತೆರವು ಗೊಳಿಸುವಂತೆ ಒತ್ತಾಯಿಸಿ ಕಾಳಾವರ ಗ್ರಾಮಸ್ಥರು ಗುರುವಾರ ಕಾಳಾವರ ಬಸ್ ನಿಲ್ದಾಣ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದನಿವೃತ್ತ ಮುಖ್ಯೋಪಾಧ್ಯಾಯ ರಾದ ರಘುವೀರ್ ಕೆ., ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಅಡ್ಡಿಯಾಗಿರುವ ಖಾಸಗಿಯವರ ಅನಧಿಕೃತ ಕಟ್ಟಡಗಳು ಮತ್ತು ಮರಗಳನ್ನು ತೆರವುಗೊಳಿಸಲು ಸರಕಾರದ ಆದೇಶವಿದೆ. ಅದರಂತೆ ಒಂದು ಕಟ್ಟಡವನ್ನು ಸಂಪೂರ್ಣವಾಗಿ ತೆರವು ಗೊಳಿಸಲಾಗಿದೆ. ಆದರೆ ಪ್ರಭಾವಿಗಳಾದ ಇನ್ನೊಬ್ಬರ ಅನಧಿಕೃತ ಕಟ್ಟಡ ವನ್ನು ಪೂರ್ಣವಾಗಿ ತೆರವುಗೊಳಿಸದೇ ಅರ್ಧಭಾಗವನ್ನು ಹಾಗೆ ಉಳಿಸಲಾಗಿದೆ ಎಂದರು.

 ಇದರಿಂದಾಗಿ ರಸ್ತೆಯ ತಿರುವು ಬೇಕಾದಷ್ಟು ನೇರವಾಗಿಲ್ಲ. ಅಲ್ಲದೆ ಮುಂದಿ ನಿಂದ ಬರುವ ವಾಹನಗಳು ಕಾಣಿಸುವುದಿಲ್ಲ. ಇದು ಅಪಘಾತಕ್ಕೆ ಕಾರಣವಾ ಗಲಿದೆ. ಅಲ್ಲದೆ ಮುಖ್ಯರಸ್ತೆಯಿಂದ ವಕ್ವಾಡಿ ಅಡ್ಡರಸ್ತೆಗೆ ಸಂಪರ್ಕವೂ ಸಮರ್ಪಕ ವಾಗಿಲ್ಲ. ಇದರಿಂದ ರಸ್ತೆಯ ಅಂದಕ್ಕೆ ಕುಂದುಂಟಾಗಿದೆ. ಆದ್ದರಿಂದ ಅನಧಿಕೃತ ಕಟ್ಟಡವನ್ನು ಕೊಡಲೇ ತೆರವುಗೊಳಿಸಬೇಕು. ಒಂದು ವೇಳೆ ತೆರವುಗೊಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಹೋರಾಟ ಮಾಡಲಾಗುವುದು ಎಂದು ರಘುವೀರ್ ಕೆ.ಎಚ್ಚರಿಸಿದರು.

ಆದಿದ್ರಾವಿಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ್‌ಚಂದ್ರ ಕಾಳಾವಕರ್ರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸುಂದರ ಕಾಳಾವರ ಮಾಡಬೇಕೆಂದು ಹತ್ತು ವರ್ಷಗಳಿಂದ ಕನಸು ಕಂಡವರು ನಾವು. ಈ ಭಾಗದ ಎಲ್ಲಾ ಕಟ್ಟಡಗಳು ತೆರವುಗೊಂಡರೆ ಅಪಘಾತ ವಲಯವನ್ನು ತಪ್ಪಿಸಬಹುದು ಎಂಬ ನಿರೀಕ್ಷೆಯಲ್ಲಿ 10 ವರ್ಷಗಳ ಹಿಂದೆಯೇ ಕಾಳಾವರ ಗ್ರಾಮ ಪಂಚಾಯತ್ ಗೆ ಮನವಿಯನ್ನು ನೀಡಿದ್ದೇವೆ. ಅದಕ್ಕೆ ಗ್ರಾಪಂ ಸೂಕ್ತ ಸ್ಪಂದನೆ ಕೂಡ ನೀಡಿದೆ. ಆದರೆ 10 ವರ್ಷದ ನಂತರ ರಸ್ತೆ ಅಗಲೀಕರಣ ಸಂದರ್ಭ ಬಂದಾಗ ಇಲ್ಲಿ ಇರುವ ಕಟ್ಟಡವನ್ನು ತೆರವುಗೊಳಿಸುವ ಸಂದರ್ಭದಲ್ಲಿ ಕೆಲವೊಂದು ಪ್ರಭಾವಿಗಳಿಂದ ತೊಡಕುಗಳು ಎದುರಾಗಿದ್ದು, ಇದರಿಂದ ರಸ್ತೆ ಅಗಲೀಕರಣ ಕಾರ್ಯ ಸ್ಥಗಿತಗೊಂಡಿದೆ ಎಂದು ವಿವರಿಸಿದರು.

ಆದ್ದರಿಂದ ಎಲ್ಲಾ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿದರೆ ನಿಜವಾಗಿ ಅಪಘಾತ ವಲಯವನ್ನು ತಪ್ಪಿಸಬಹುದು. ಅಡ್ಡಿ ಬರುವ ತೊಡಕುಗಳನ್ನು ದೂರ ಮಾಡುವ ಉದ್ದೇಶದಿಂದ ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಇದಕ್ಕೆ ಊರ ಕೆಲವೊಂದು ಸಂಘ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ. ನಮ್ಮ ಉದ್ದೇಶ ಕಾಳಾವರವನ್ನು ಸುಂದರಗೊಳಿಸಿ,ಸುಂದರವಾದ ಬಸ್ ನಿಲ್ದಾಣ ಮತ್ತು ಶೌಚಾಲಯವನ್ನು ನಿರ್ಮಿಸುವುದಾಗಿದೆ ಎಂದರು.

ಪ್ರತಿಭಟನಕಾರರು ಅನಧಿಕೃತ ಕಟ್ಟಡ ತೆರವುಗೊಳಿಸಿ, ಅಪಘಾತವನ್ನು ತಪ್ಪಿಸಿ, ಬಡವರಿಗೊಂದು ನ್ಯಾಯ ಬಲಿಷ್ಠರಿಗೊಂದು ನ್ಯಾಯ ಬೇಡ, ಮೂಲ ಯೋಜನೆಯಂತೆ ಕಾಮಗಾರಿ ನಡೆಯಲಿ, ಕಾನೂನುಬದ್ಧ ಹೋರಾಟಕ್ಕೆ ಸಹಕರಿಸಿಎಂದು ಘೋಷಣೆ ಕೂಗಿದರು. ಸ್ಥಳಕ್ಕಾಗಮಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಾಂಡುರಂಗ ಶೇಟ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಳವರ ಗ್ರಾಪಂ ಅಧ್ಯಕ್ಷೆ ಆಶಾಲತಾ ಶೆಟ್ಟಿ, ಗ್ರಾಪಂ ಸದಸ್ಯರಾದ ವಕ್ವಾಡಿ ರಮೇಶ್ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ, ಜ್ಯೋತಿ ಮೊಗವೀರ ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಎಸ್ಸಿ-ಎಸ್ಟಿ ಮೋರ್ಚಾದ ಅಧ್ಯಕ್ಷ ಮಹೇಶ್, ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ಮಹಾಬಲ, ನಿವೃತ್ತ ಅಧ್ಯಾಪಕ ಸಂಜು ಮಾಸ್ಟರ್, ಕಾರ್ಮಿಕ ಸಂಘದ ಅಧ್ಯಕ್ಷ ಮೋನಪ್ಪ, ನಮ್ಮ ಶಕ್ತಿ ಮಹಿಳಾ ಮಂಡಲದ ಅಧ್ಯಕ್ಷೆ ಶಶಿಕಲಾ ಹಾಗೂ ಸ್ಥಳೀಯರು ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X