ತಂಬಾಕು ಉತ್ಪನ್ನ ವಶ : ದಂಡ ವಸೂಲಿ
ಉಡುಪಿ, ಡಿ.16: ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಗುರುವಾರ ಮಣಿಪಾಲ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, 28 ಪ್ರಕರಣ ದಾಖಲಿಸಿ ಒಟ್ಟು 6,400 ರೂ. ದಂಡ ವಸೂಲಿ ಮಾಡಲಾಯಿತು.
ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್, ಹಿರಿಯ ಆರೋಗ್ಯ ಮೇಲ್ವಿಚಾರಣಾ ಅಧಿಕಾರಿ ಸತೀಶ್ ರಾವ್, ದೇವಪ್ಪ ಪಟಗಾರ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕದ ಎಫ್‌ಎಲ್‌ಸಿ ರಾಜೇಶ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ವತಿುಂದ ಎನ್.ಟಿ.ಸಿ.ಪಿ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜ ಕಾರ್ಯಕರ್ತೆ ಶೈಲಾ ಶಾಮನೂರು, ಮಣಿಪಾಲ ಪೊಲೀಸ್ ಠಾಣೆಯ ಆರಕ್ಷಕರು ಹಾೂ ಮತ್ತಿತರರು ಉಪಸ್ಥಿತರಿದ್ದರು.
Next Story





