ಮೈಸೂರಿನಲ್ಲಿ ಯುವಕನ ಹತ್ಯೆ

ಮೈಸೂರು,ಡಿ.16: ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ರಮ್ಮನಹಳ್ಳಿಯಲ್ಲಿ ನಡೆದಿದೆ.
ಹತ್ಯೆಯಾದ ಯುವಕನನ್ನು ಜೆಸಿಬಿ ಚಾಲಕನಾಗಿದ್ದ ಅರ್ಜುನ್ (24) ಎಂದು ಗುರುತಿಸಲಾಗಿದೆ. ಈತನನ್ನು ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ, ಬಳಿಕ ಹಳ್ಳಕ್ಕೆ ತಳ್ಳಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ನಡೆಸಿದ್ದಾರೆ ಎನ್ನಲಾಗಿದೆ.
ಪರಿಚಯಸ್ಥರೇ ಅರ್ಜುನ್‍ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಪಾತಕಿಗಳು ಕಳೆದ ರಾತ್ರಿ ಫೋನ್ ಮಾಡಿ ಕರೆಸಿಕೊಂಡು ಕೊಲೆ ಮಾಡಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಅಡಿಷನಲ್ ಎಸ್ ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





