Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸರ ಮೇಲೆ ವಿಶ್ವಾಸ...

ಪೊಲೀಸರ ಮೇಲೆ ವಿಶ್ವಾಸ ಕಳೆದುಕೊಳ್ಳುವಂತಾಗಿದೆ: ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ದ.ಕ. ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್

ವಾರ್ತಾಭಾರತಿವಾರ್ತಾಭಾರತಿ17 Dec 2021 3:48 PM IST
share
ಪೊಲೀಸರ ಮೇಲೆ ವಿಶ್ವಾಸ ಕಳೆದುಕೊಳ್ಳುವಂತಾಗಿದೆ: ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ದ.ಕ. ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್

ಮಂಗಳೂರು, ಡಿ.17: ದ.ಕ. ಜಿಲ್ಲೆಯಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ ಪೊಲೀಸರ ಮೇಲೆ ನಂಬಿಕೆ, ವಿಶ್ವಾಸ ಕಳಕೊಳ್ಳುವಂತಾಗಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಬೇಸರ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ್ಪಿನಂಗಡಿಯ ಘಟನೆ ನಡೆಯುವುದಕ್ಕೂ ಮುನ್ನ ಇಳಂತಿಲದಲ್ಲಿ ನಡೆದಿದ್ದ ಘಟನೆಗೆ ಯಾರು ಕಾರಣ ? ಏಕಾಏಕಿ 20ಕ್ಕೂ ಹೆಚ್ಚು ಜನರು ಸೇರಿ ಒಂದು ಸಮುದಾಯವನ್ನು ಗುರಿಯಾಗಿರಿಸಿ ಹಲ್ಲೆ ನಡೆಸಿದ್ದು ಯಾಕೆ ಎಂದು ಪೊಲೀಸರು ಹೇಳಿಲ್ಲ. ಅದರಲ್ಲಿ ಆರೋಪಿಗಳನ್ನು ಬಂಧಿಸಿದರೆ ಶಾಸಕರು ಬಿಡಿಸಿಕೊಂಡು ಹೋಗಿದ್ದರು. ಪೊಲೀಸರ ತಾರತಮ್ಯ ನೀತಿಯಿಂದಾಗಿ ಈ ರೀತಿಯ ಬೆಳವಣಿಗೆ ಆಗಿದೆ. ಇಂತಹ ಘಟನೆಗಳಿಗೆ ಪೊಲೀಸರೇ ಹೊಣೆ ಎಂದು ಅವರು ಆರೋಪಿಸಿದರು.

ಉಪ್ಪಿನಂಗಡಿ ಠಾಣೆಯ ಮುಂದೆ ಪಿಎಫ್‌ಐ ಕಾರ್ಯಕರ್ತರಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡಿದ್ದು ಯಾಕೆ ? ಒಂದು ಕೋಮಿನವರು ಬೆಳಗ್ಗಿನಿಂದಲೂ ಪ್ರತಿಭಟನೆ ನಡೆಸುತ್ತಿದ್ದರೆ, ಸುಮ್ಮನಿದ್ದ ಪೊಲೀಸರು ರಾತ್ರಿ ವೇಳೆ ಲಾಠಿ ಎತ್ತಿದ್ದಾರೆ. ಲೈಟ್ ಆಫ್ ಮಾಡಿ ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಪೊಲೀಸರಿಗೆ ಚೂರಿ ಇರಿತ ಆಗಿದೆ ಎನ್ನುತ್ತಿದ್ದಾರೆ. ಚೂರಿ ಇರಿತ, ಪೊಲೀಸರ ಮೇಲಿನ ದಾಳಿ ಆಗಿದ್ದಕ್ಕೆ ಸಾಕ್ಷ್ಯಗಳಿದ್ದರೆ ಬಿಡುಗಡೆ ಮಾಡಲಿ ಎಂದು ಹೇಳಿದರು.

ಜಿಲ್ಲೆಯಲ್ಲಿ ನಡೆಯುವ ಇಂತಹ ಬೆಳವಣಿಗೆ ನೋಡಿದರೆ ಪೊಲೀಸರ ಮೇಲೆ ನಂಬಿಕೆ, ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ಈಗ ನಡೆಯುತ್ತಿರುವ ಘಟನೆ ಕೇವಲ ಸಂಘ ಪರಿವಾರ ಮತ್ತು ಎಸ್‌ಡಿಪಿಐ ನಡುವಿನ ಜಟಾಪಟಿ ಅಷ್ಟೆ. ಇದಕ್ಕೂ ಹಿಂದೂ-ಮುಸ್ಲಿಂ ಸಮುದಾಯಕ್ಕೂ ಸಂಬಂಧ ಇಲ್ಲ. ಇದನ್ನು ಹಾಗೆ ಬಿಂಬಿಸಿ ಕೆಲವರು ರಾಜಕೀಯ ಲಾಭ ಪಡೆಯಲು ಹೊರಟಿದ್ದಾರೆ ಎಂದರು.

ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಮುಖಂಡ ಜಿ.ಎ.ಬಾವ, ಪಾಲಿಕೆ ಸದಸ್ಯ ಅಬ್ದುಲ್‌ ರವೂಫ್, ನವೀನ್ ಡಿಸೋಜಾ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X