ಜಮಖಂಡಿ ಕರ್ನಾಟಕ ರಾಜ್ಯದಲ್ಲಿ ಇಲ್ಲವೇ?: ಶಾಸಕ ಆನಂದ್ ಸಿದ್ದು ನ್ಯಾಮಗೌಡ

photo: @SidduNyamagouda ( ಶಾಸಕ ಆನಂದ್ ಸಿದ್ದು ನ್ಯಾಮಗೌಡ)
ಬೆಳಗಾವಿ ಸುವರ್ಣವಿಧಾನಸೌಧ, ಡಿ. 17: ಸರಕಾರ ಎಸ್ಎಫ್ಸಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದು, ಜಮಖಂಡಿ ಕ್ಷೇತ್ರ ಕರ್ನಾಟಕ ರಾಜ್ಯದಲ್ಲಿ ಇದೆಯೋ ಅಥವಾ ಇಲ್ಲವೋ? ಎಂದು ಕಾಂಗ್ರೆಸ್ ಸದಸ್ಯ ಆನಂದ್ ಸಿದ್ದು ನ್ಯಾಮಗೌಡ ಪ್ರಶ್ನಿಸಿದ್ದಾರೆ.
ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಸಚಿವ ಎಂಟಿಬಿ ನಾಗರಾಜು ನೀಡಿದ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಬಾಗಲಕೋಟೆ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಸೂಕ್ತ ಪ್ರಮಾಣದಲ್ಲಿ ಅನುದಾನ ನೀಡಿಲ್ಲ ಎಂದು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಎಂಟಿಬಿ ನಾಗರಾಜು, ಕೋವಿಡ್ ಹಿನ್ನೆಲೆಯಲ್ಲಿ ಅನುದಾನ ತಡೆಹಿಡಿಯಲಾಗಿತ್ತು. ಇದೀಗ 640 ಕೋಟಿ ರೂ.ವಿಶೇಷ ಅನುದಾನ ಬಿಡುಗಡೆಗೆ ಈಗಾಗಲೇ ಸಿಎಂ ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದು, ಶೀಘ್ರದಲ್ಲೆ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಹಂಚಿಕೆ ಮಾಡಲಾಗುವುದು ಎಂದು ಸದನಕ್ಕೆ ತಿಳಿಸಿದರು.
Next Story





