ಡಿ.29-31: ರಾಜ್ಯ ಮಟ್ಟದ ಯುವಜನೋತ್ಸವ
ಉಡುಪಿ, ಡಿ.17: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಡಿ.29ರಿಂದ 31ರವರೆಗೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆಯಲಿದೆ.
ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ಹಾಗೂ ಗುಂಪು ವಿಭಾಗ ದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿದ್ದು, ಸ್ಪರ್ಧಿಗಳು ಡಿ. 29ರ ಬೆಳಗ್ಗೆ 10 ಗಂಟೆಯೊಳಗೆ ಪ್ರವೇಶ ಅರ್ಜಿಯೊಂದಿಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





