Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಧುಕರ್ ಶೆಟ್ಟಿ ನೆನಪಿಗಾಗಿ ಭ್ರಷ್ಟಾಚಾರ...

ಮಧುಕರ್ ಶೆಟ್ಟಿ ನೆನಪಿಗಾಗಿ ಭ್ರಷ್ಟಾಚಾರ ವಿರೋಧಿ ದಿನ ಜಾರಿಯಾಗಲಿ: ನ್ಯಾ.ಎನ್.ಕೆ.ಸುಧೀಂದ್ರರಾವ್

ವಾರ್ತಾಭಾರತಿವಾರ್ತಾಭಾರತಿ17 Dec 2021 10:07 PM IST
share
ಮಧುಕರ್ ಶೆಟ್ಟಿ ನೆನಪಿಗಾಗಿ ಭ್ರಷ್ಟಾಚಾರ ವಿರೋಧಿ ದಿನ ಜಾರಿಯಾಗಲಿ: ನ್ಯಾ.ಎನ್.ಕೆ.ಸುಧೀಂದ್ರರಾವ್

ಬೆಂಗಳೂರು, ಡಿ.17: ಐಪಿಎಸ್ ಅಧಿಕಾರಿ ಡಾ.ಕೆ.ಮಧುಕರ್ ಶೆಟ್ಟಿ ಅವರು ಮಾನವೀಯತೆ ಮತ್ತು ಪ್ರ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡಿದ್ದರು. ಅವರ ನೆನಪಿಗಾಗಿ ಈ ದಿನವನ್ನು ಭ್ರಷ್ಟಾಚಾರ ವಿರೋಧಿ ದಿನವನ್ನಾಗಿ ಆಚರಿಸುವ ಅವಶ್ಯಕತೆ ಇದೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರರಾವ್ ಅಭಿಪ್ರಾಯಪಟ್ಟಿದ್ದಾರೆ.   

ಶುಕ್ರವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಅಭಿಮಾನಿಗಳು ಹಾಗೂ ಸಹೋದ್ಯೋಗಿಗಳು ಆಯೋಜಿಸಿದ್ದ ಡಾ.ಕೆ.ಮಧುಕರ ಶೆಟ್ಟಿ ಅವರಿಗೆ ಪುಷ್ಪ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹೊಸ ವರ್ಷದ ದಿನಾಚರಣೆ, ಬ್ರದರ್ಸ್ ಡೇ, ಪರಿಸರ ದಿನ ಹೀಗೇ ಹಲವು ದಿನಾಚರಣೆಗಳನ್ನು ಆಚರಿಸುತ್ತೇವೆ. ಅದೇ ರೀತಿಯಾಗಿ ಡಾ.ಕೆ.ಮಧುಕರ್ ಶೆಟ್ಟಿ ಅವರ ನೆನಪಿಗಾಗಿ ಈ ದಿನವನ್ನು ಭ್ರಷ್ಟಾಚಾರ ವಿರೋಧಿ ದಿನವನ್ನಾಗಿ ಆಚರಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಸಮಾಜದ ಬಗ್ಗೆ ಬಹಳಷ್ಟು ಗೌರವವನ್ನಿಟ್ಟುಕೊಂಡಿದ್ದ ಮಧುಕರ್ ಶೆಟ್ಟಿ ಅವರು ಲೋಕಾಯುಕ್ತದಲ್ಲಿ ಎಸ್ಪಿ ಆಗಿದ್ದಾಗ ಸದ್ದು ಗದ್ದಲವಿಲ್ಲದೇ ಸೇವೆ ಸಲ್ಲಿಸಿದ್ದರು. ಭ್ರಷ್ಟರಿಗೆ ಶಿಕ್ಷೆ ಆಗುವತ್ತ ಗಮನ ಹರಿಸುತ್ತಿದ್ದರು. ಇಂತಹ ಅಧಿಕಾರಿಗಳು ಸಿಗುವುದೇ ಅಪರೂಪವಾಗಿದೆ ಎಂದರು. 

ಜಾತಿ ಮತ್ತು ಭ್ರಷ್ಟಾಚಾರ ಇವು ಎರಡೂ ಕ್ಯಾನ್ಸರ್ ಇದ್ದ ಹಾಗೆ. ಇವುಗಳಿಗೆ ಬೇಗ ಚಿಕಿತ್ಸೆ ನೀಡದಿದ್ದರೆ ಸಮಾಜಕ್ಕೆ ಹಾನಿಯೇ ಹೆಚ್ಚು ಎಂದ ಅವರು, ಶೆಟ್ಟಿ ಅವರು ಪ್ರತಿ ಕೆಲಸವನ್ನು ಶ್ರದ್ಧೆ ಮತ್ತು ಕಾಳಜಿಯಿಂದ ಮಾಡುತ್ತಿದ್ದರು ಎಂದು ಹೇಳಿದರು. 

ಐಎಎಸ್ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ಮಾತನಾಡಿ, ಮಧುಕರ್ ಶೆಟ್ಟಿ ಅವರಲ್ಲಿ ಸ್ಫೂರ್ತಿದಾಯಕ ವ್ಯಕ್ತಿತ್ವವನ್ನು ಹೊಂದಿದ್ದರು. ಹಿಡಿದ ಕೆಲಸವನ್ನು ಗುರಿ ಮುಟ್ಟುವತನಕ ಅವರು ನಿಲ್ಲಿಸುತ್ತಿರಲಿಲ್ಲ ಎಂದರು. 

ಐಎಸ್‍ಡಿ ವಿಭಾಗದ ಎಡಿಜಿಪಿ ಅರುಣ್ ಜೆ. ಚಕ್ರವರ್ತಿ ಮಾತನಾಡಿ, ಮಧುಕರ್ ಶೆಟ್ಟಿ ಅವರು ನ್ಯಾಷನಲ್ ಕಾಲೇಜಿನಿಂದಲೇ ನನಗೆ ಸ್ನೇಹಿತರಾಗಿದ್ದರು. ಯಾವುದೇ ವಿಷಯವನ್ನು ಆಗಲಿ ಆಳಕ್ಕೆ ಇಳಿದು ಮಾಹಿತಿಯನ್ನು ಸಂಗ್ರಹಿಸುತ್ತಿದ್ದರು. ಆ ಸಮಸ್ಯೆಗೆ ಪರಿಹಾರವನ್ನು ಕಂಡು ಹಿಡಿಯುತ್ತಿದ್ದರು ಎಂದು ಹೇಳಿದರು. 

ಮಧುಕರ್ ಶೆಟ್ಟಿ ಅವರ ಅಭಿಮಾನಿ ವರ್ಗವೇ ಇತ್ತು. ಆ ವರ್ಗ ಸೃಷ್ಟಿಯಾಗಲು ಅವರಲ್ಲಿದ್ದ ಸರಳತೆ ಹಾಗೂ ಪ್ರಾಮಾಣಿಕತೆಯೇ ಕಾರಣ ಎಂದು ಹೇಳಿದರು. 

ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರ ಸಂಪಾದನೆಯ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಬರಹಗಳ ‘ಬೇರೆಯೇ ಮಾತು’ ಕೃತಿ ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. 

ಕಾರ್ಯಕ್ರಮದಲ್ಲಿ ಮಧುಕರ್ ಶೆಟ್ಟಿ ಅವರ ಆಪ್ತ ಸ್ನೇಹಿತರು, ಕುಟುಂಬ ವರ್ಗದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X