ಕೊಳ್ಳೇಗಾಲ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಎರಡು ಮನೆಗಳಿಗೆ ಹಾನಿ

ಚಾಮರಾಜನಗರ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಸೂರಿನ ಎರಡು ಮನೆಗಳು ಹಾನಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಪರಿಶಿಷ್ಟ ಸಮುದಾಯದ ಕೋಟೆ ಬೀದಿಯ ಚಿಕ್ಕರಾವಳಯ್ಯ ಹಾಗೂ ಮಂಜು ಎಂಬುವರ ಮನೆಯು ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಬೆಂಕಿ ಕಾಣಿಸಿಕೊಂಡ ವೇಳೆ ಅಪಾಯ ಅರಿತ ಎರಡು ಮನೆಯ ಮಂದಿ ಹೊರಕ್ಕೆ ಧಾವಿಸಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಿಲಿಂಡರ್ ಸ್ಫೋಟದ ತೀವ್ರತೆ ಮನೆ ಯ ಮೇಲ್ಚಾವಣಿ ಹಾರಿಹೋಗಿದೆ. ಆನಂತರ ಸ್ಥಳಕ್ಕಾಗಾಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story





