ಮುಖ್ಯಮಂತ್ರಿಯವರೇ, ಕ್ರಿಯೆಗೆ ಪ್ರತಿಕ್ರಿಯೆ ಮೊಂಡುವಾದ ಮಂಡಿಸದೆ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ
ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ ಪ್ರಕರಣ

ಬೆಂಗಳೂರು, ಡಿ.18: ಬೆಳಗಾವಿಯಲ್ಲಿ ಎಂಇಎಸ್ ಪುಂಡರು ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿರುವ ಕೃತ್ಯ ಖಂಡನೀಯ ಎಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂತಹ ಕೃತ್ಯಗಳಿಗೆಲ್ಲ 'ಕ್ರಿಯೆಗೆ ಪ್ರತಿಕ್ರಿಯೆ' ಎಂಬ ಮೊಂಡುವಾದ ಮಂಡಿಸಬೇಡಿ. ಕಠಿಣ ಕಾನೂನು ಕೈಗೊಳ್ಳಿ ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ.
ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಮುಖ್ಯಮಂತ್ರಿ ಪೊಲೀಸರಿಗೆ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿಯವರೇ, ಇದಕ್ಕೆಲ್ಲ 'ಕ್ರಿಯೆಗೆ ಪ್ರತಿಕ್ರಿಯೆ' ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ, ಸಂಯಮದಿಂದ ಶಾಂತಿ-ಸೌಹಾರ್ದ ಕಾಪಾಡಿಕೊಂಡು ಬರಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
.@CMofKarnataka ಅವರೇ,
— Siddaramaiah (@siddaramaiah) December 18, 2021
ಇದಕ್ಕೆಲ್ಲ
'ಕ್ರಿಯೆಗೆ ಪ್ರತಿಕ್ರಿಯೆ' ಎಂಬ ಮೊಂಡುವಾದ ಮಂಡಿಸಬೇಡಿ.
ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ.
ಇದೇ ವೇಳೆ ಕನ್ನಡ ಬಂಧುಗಳು
ಆವೇಶಕ್ಕೆ ಒಳಗಾಗದೆ, ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು ಬರಬೇಕೆಂದು
ಮನವಿ ಮಾಡುತ್ತೇನೆ.
2/2#ಸಂಗೊಳ್ಳಿರಾಯಣ್ಣ pic.twitter.com/UtmVyxZFlC







