Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳಾಶಕ್ತಿ ಮೂಲಕ ಸ್ವಚ್ಛ ಗ್ರಾಮ...

ಮಹಿಳಾಶಕ್ತಿ ಮೂಲಕ ಸ್ವಚ್ಛ ಗ್ರಾಮ ನಿರ್ಮಾಣ ಸಾಧ್ಯ: ಲಾಲಾಜಿ ಮೆಂಡನ್

ವಾರ್ತಾಭಾರತಿವಾರ್ತಾಭಾರತಿ18 Dec 2021 8:13 PM IST
share
ಮಹಿಳಾಶಕ್ತಿ ಮೂಲಕ ಸ್ವಚ್ಛ ಗ್ರಾಮ ನಿರ್ಮಾಣ ಸಾಧ್ಯ: ಲಾಲಾಜಿ ಮೆಂಡನ್

ಉಡುಪಿ, ಡಿ.18: ಮಹಿಳೆಯರಿಗೆ ತ್ಯಾಜ್ಯ ವಿಲೇವಾರಿ ಕುರಿತಂತೆ ಜಾಗೃತಿ ಮೂಡಿಸಿದಲ್ಲಿ, ಅವರು ತಮ್ಮ ತಮ್ಮ ಮನೆಗಳ ತ್ಯಾಜ್ಯವನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ, ಇಡೀ ಗ್ರಾಮವನ್ನು ಸ್ವಚ್ಛ ಗ್ರಾಮವಾಗಿ ರೂಪುಗೊಳ್ಳಲು ಇತರರಿಗೂ ಪ್ರೇರಣೆ ನೀಡಲಿದ್ದಾರೆ ಎಂದು ಕಾಪು ಶಾಸ ಲಾಲಾಜಿ ಆರ್ ಮೆಂಡನ್ ಹೇಳಿದ್ದಾರೆ.

ಹಿರಿಯಡ್ಕ ಸಮೀಪದ ಕೊಡಿಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ಶನಿವಾರ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ), ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಕೊಡಿಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ನಡೆದ ‘ಕೊಳಚೆ ಮುಕ್ತ ಗ್ರಾಮದಡೆ ಮಹಿಳಾ ಶಕ್ತಿ ನಡೆ: ದ್ರವ ತ್ಯಾಜ್ಯ ನಿರ್ವಹಣೆ’ ಮಾದರಿ ಗ್ರಾಮ ನಿರ್ಮಾಣದ ವಿಶೇಷ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ತ್ಯಾಜ್ಯವನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಅದು ದೊಡ್ಡ ಸಮಸ್ಯೆಯಾಗಲಿದ್ದು, ಇದರಿಂದ ಪರಿಸರಕ್ಕೆ ಸಹ ಹಾನಿಯಾಗಲಿದೆ. ನೈರ್ಮಲ್ಯದ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಜಿಲ್ಲೆಯಲ್ಲಿ ಈಗಾಗಲೇ ಒಣಕಸ ಸಂಗ್ರಹ ಉತ್ತಮವಾಗಿ ನಡೆಯುತ್ತಿದ್ದು, ಮನೆಯಲ್ಲಿ ಸಂಗ್ರಹವಾಗುವ ದ್ರವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಇಲ್ಲವಾದಲ್ಲಿ ಇದು ಜಲ ಮೂಲಗಳನ್ನು ಕಲುಷಿತಗೊಳಿಸಲಿದ್ದು, ಇದರಿಂದ ವಿವಿಧ ರೋಗಗಳ ಹರಡುವಿಕೆಗೆ ಕಾರಣವಾಗಲಿದೆ. ಗ್ರಾಮದ ಪ್ರತೀ ಮಹಿಳೆಯರಿಗೆ ದ್ರವ ತ್ಯಾಜ್ಯ ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಬೇಕು. ಮಹಿಳೆಯರು ಜಾಗೃತವಾದಲ್ಲಿ ಸಮರ್ಪಕ ರೀತಿಯಲ್ಲಿ ಇದರ ವಿಲೇವಾರಿ ಸಾಧ್ಯವಾಗಲಿದೆ ಎಂದು ಲಾಲಾಜಿ ಮೆಂಡನ್ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಜಿಲ್ಲೆಯ 7 ಗ್ರಾಮ ಪಂಚಾಯತ್‌ಗಳಲ್ಲಿ ಆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸಹಕಾರದೊಂದಿಗೆ ಕೊಳಚೆ ನೀರಿನ ಸಮರ್ಪಕ ನಿರ್ವಹಣೆ ಕುರಿತಂತೆ ಪ್ರಾಯೋಗಿಕವಾಗಿ ಅಭಿಯಾನ ಆರಂಭಿಸಿದ್ದು, ಒಂದು ತಿಂಗಳಿನ ಒಳಗೆ ಈ ಗ್ರಾಮಗಳನ್ನು ಕೊಳಚೆ ಮುಕ್ತ ಗ್ರಾಮಗಳನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ಕೊಳಚೆ ನೀರು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಲಿದೆ ಹಾಗೂ ಅದು ಜಲ ಮೂಲಗಳನ್ನು ಸೇರುವುದರಿಂದ ಕುಡಿಯುವ ನೀರು ಕಲುಷಿತಗೊಂಡು ವಿವಿಧ ಬಗೆಯ ರೋಗಗಳಿಗೆ ಕಾರಣವಾಗಲಿದೆ. ಕೊಳಚೆ ನೀರನ್ನು ಸೋಕ್‌ಪಿಟ್‌ಗೆ ಅಥವಾ ಕಿಚನ್ ಗಾರ್ಡನ್‌ಗೆ ಬಳಸಬಹುದಾಗಿದ್ದು, ಸೋಕ್‌ಪಿಟ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿಯಲ್ಲಿ 14,000 ರೂ. ಸಹಾಯ ಧನ ನೀಡಲಾ ಗುವುದು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳನ್ನು ಕೊಳಚೆ ಮುಕ್ತ ಗ್ರಾಮಗಳನ್ನಾಗಿ ಮಾಡಲು ಪಂಚಾಯತ್‌ಗಳು ಹಾಗೂ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದರು.

ಜಿಪಂನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೊಳಚೆ ಮುಕ್ತ ಗ್ರಾಮ ಕುರಿತು ಜಾಗೃತಿ ಮೂಡಿಸುವ ಸ್ಟಿಕ್ಕರ್ ಬಿಡುಗಡೆ ಹಾಗೂ ಸ್ವಚ್ಛತೆ ಕುರಿತು ಏರ್ಪಡಿಸಿದ್ದ ಸ್ಪರ್ಧೆ ಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಕೊಡಿಬೆಟ್ಟು ಗ್ರಾಮಪಂಚಾಯತ್ ಅಧ್ಯಕ್ಷೆ ಆಶಾ ಶೆಟ್ಟಿ,ಉಪಾಧ್ಯಕ್ಷ ಸದಾನಂದ ಪ್ರಭು ಮತ್ತಿತರರು ಉಪಸ್ಥಿತರಿದ್ದರು. ಪಿಡಿಓ ರೇವತಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X