ರಾಜ್ಯದಲ್ಲಿ ಶನಿವಾರ 335 ಕೊರೋನ ಪ್ರಕರಣ ದೃಢ, ಐವರು ಸೋಂಕಿಗೆ ಬಲಿ

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ರಾಜ್ಯದಲ್ಲಿ ಶನಿವಾರ 335 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಐವರು ಸೋಂಕಿಗೆ ಬಲಿಯಾಗಿದ್ದು, 286 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 30,02,127ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,287ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 7,120ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ಐವರ ಸಾವು: ಬೆಂಗಳೂರು ನಗರ 1, ಚಿತ್ರದುರ್ಗ 1, ದಕ್ಷಿಣ ಕನ್ನಡ 1, ಧಾರವಾಡ 1, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 335 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 1, ಬೆಳಗಾವಿ 2, ಬೆಂಗಳೂರು ನಗರ 225, ಚಿಕ್ಕಮಗಳೂರು 6, ದಕ್ಷಿಣ ಕನ್ನಡ 19, ಧಾರವಾಡ 5, ಹಾಸನ 8, ಕಲಬುರಗಿ 1, ಕೊಡಗು 25, ಕೋಲಾರ 5, ಮಂಡ್ಯ 2, ಮೈಸೂರು 14, ರಾಯಚೂರು 1, ರಾಮನಗರ 2, ಶಿವಮೊಗ್ಗ 2, ತುಮಕೂರು 2, ಉಡುಪಿ 6, ಉತ್ತರ ಕನ್ನಡ ಜಿಲ್ಲೆಯಲ್ಲಿ 9 ಪ್ರಕರಣ ಪತ್ತೆಯಾಗಿವೆ.





