ಸುಳ್ಯ: ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮಹಿಳೆಯರು ಮೃತ್ಯು

ಸುಳ್ಯ: ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ನಿಂತಿಕಲ್ಲು ಸಮೀಪದ ಕರಿಂಬಿಲ ನರ್ಲಡ್ಕ ಎಂಬಲ್ಲಿ ರವಿವಾರ ಬೆಳಗ್ಗೆ ಸಂಭವಿಸಿರುವುದಾಗಿ ವರದಿಯಾಗಿದೆ.
ನರ್ಲಡ್ಕ ನಿವಾಸಿ ಮುಹಮ್ಮದ್ ಎಂಬವರ ಪತ್ನಿ ಬಿಪಾತುಮ್ಮ ಹಾಗು ನೆಬಿಸಾ ಮೃತಪಟ್ಟವರು ಎಂದು ತಿಳಿದು ಬಂದಿದೆ.
ದುರಂತ ಸ್ಥಳಕ್ಕೆ ಬೆಳ್ಳಾರೆ ಎಸ್.ಐ ಆಂಜನೇಯ ರೆಡ್ಡಿ, ಮಾಜಿ ತಾಲ್ಲೂಕು ಪಂ. ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ ಮತ್ತು ಸ್ಥಳೀಯರು ಪರಿಹಾರ ಕಾರ್ಯದಲ್ಲಿ ಸಹಕರಿಸಿದರು.
Next Story





