Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಂಇಎಸ್ ಬೆಳೆಯಲು ಬಿಜೆಪಿ ಕಾರಣ ಎಂಬ...

ಎಂಇಎಸ್ ಬೆಳೆಯಲು ಬಿಜೆಪಿ ಕಾರಣ ಎಂಬ ಆರೋಪಕ್ಕೆ ಅರ್ಥವಿಲ್ಲ : ಮಾಜಿ ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ19 Dec 2021 12:08 PM IST
share
ಎಂಇಎಸ್ ಬೆಳೆಯಲು ಬಿಜೆಪಿ ಕಾರಣ ಎಂಬ ಆರೋಪಕ್ಕೆ ಅರ್ಥವಿಲ್ಲ : ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ : ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೆಲವರು ಗಲಭೆ ಸೃಷ್ಟಿಸುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾಳು ಮಾಡುತ್ತಿರುವುದನ್ನು‌ ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಶಿಬಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ಥಳಿ ವಿಚಾರವಾಗಿ ನಾಳೆ ವಿಧಾನ ಮಂಡಲದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ. ಈ ರೀತಿ ಘಟನೆಗಳು ಮರುಕಳಿಸದಂತೆ ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ. ಅಪರಾಧಿಗಳು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು.

ಎಂಇಎಸ್ ಈ ಮಟ್ಟಿಗೆ ಬೆಳೆಯಲು ಹಿಂದೆ‌ ಬಿಜೆಪಿ ನೀಡಿದ್ದ ಬೆಂಬಲವೇ ಕಾರಣ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ, ಯಾರೋ ಕೆಲವರು ವಾಸ್ತವಿಕ ಸತ್ಯ ಸಂಗತಿಗಳು ತಿಳಿಯದವರು ಮಾಡಿದ ಆರೋಪಕ್ಕೆ‌ ಅರ್ಥವಿಲ್ಲ. ಯಾರೇ ಅಪರಾಧ ಮಾಡಿದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರ ಮೇಲೆ ಕ್ರಮ‌ ಜರುಗಿಸಿ ಜೈಲಿಗೆ ಕಳುಹಿಸಿರುವುದೇ ಇದಕ್ಕೆ‌ ಉದಾಹರಣೆ ಎಂದರು.

ಘಟನೆ ಬಗ್ಗೆ ಸಿಎಂ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ಸೂಚಿಸಿದ್ದಾರೆ. ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 23 ಜನರನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.ಈ ಘಟನೆಯಲ್ಲಿ ಇನ್ನೂ ಯಾರು ಯಾರು ಶಾಮೀಲಾಗಿದ್ದಾರೆಯೋ ಅವರನ್ನು ಬಂಧಿಸುವ ಕೆಲಸ ಮುಂದುವರಿಯುತ್ತದೆ ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ.ಈ ಬಗ್ಗೆ ಸಿಎಂ ಕೇಳಬೇಕು‌.ನನಗೆ ಗೊತ್ತಿರುವಂತೆ ಇದುವರೆಗೆ ಸಚಿವ ಸಂಪುಟ ವಿಸ್ತರಣೆಯ ಯಾವುದೇ ಸುದ್ದಿಗಳು ಇಲ್ಲ ಎಂದು ಹೇಳಿದರು.

ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅದು ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಟ್ಟ ವಿಚಾರ ಎಂದರು.

ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ ಎಸ್ ವೈ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ಪರಿಷತ್‌ನಲ್ಲೂ ನಮಗೆ ಬಹುಮತ ಸಿಗುತ್ತದೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದೇ ತರುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X