ಉಡುಪಿ: ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ

ಉಡುಪಿ, ಡಿ.19: ಉಡುಪಿ ಕೃಷ್ಣ ಮಠ ಪರ್ಯಾಯ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ‘ವಿಶ್ವಾರ್ಪಣಮ್’ ಕಾರ್ಯಕ್ರಮದ ಅಂಗ ವಾಗಿ ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ರವಿವಾರ ರಾಜಾಂಗಣದಲ್ಲಿ ಆಯೋಜಿಸಲಾಗಿತ್ತು.
ಉಡುಪಿ ಪ್ರಸಾದ್ ನೇತ್ರಾಲಯದ ಸಹಯೋಗದಲ್ಲಿ ಏರ್ಪಡಿಸಲಾದ ಶಿಬಿರವನ್ನು ಪರ್ಯಾಯ ಪೀಠಾಧೀಶ ಈಶಪ್ರಿಯತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣ ಪ್ರಸಾದ್, ಪರ್ಯಾಯ ಮಠದ ವ್ಯವಸ್ಥಾಪಕ ಗೋವಿಂದರಾಜ್ ಮೊದಲಾದವರು ಉಪಸ್ಥಿತರಿದ್ದರು.
Next Story





