Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 290 ಆ್ಯಂಬುಲೆನ್ಸ್‌ಗಳ ಅವಶ್ಯಕತೆ - 40...

290 ಆ್ಯಂಬುಲೆನ್ಸ್‌ಗಳ ಅವಶ್ಯಕತೆ - 40 ಆ್ಯಂಬುಲೆನ್ಸ್‌ಗಳ ಖರೀದಿಗೆ ಸಹಮತಿ

ಜಿ. ಮಹಾಂತೇಶ್ಜಿ. ಮಹಾಂತೇಶ್20 Dec 2021 11:10 AM IST
share
290 ಆ್ಯಂಬುಲೆನ್ಸ್‌ಗಳ ಅವಶ್ಯಕತೆ - 40 ಆ್ಯಂಬುಲೆನ್ಸ್‌ಗಳ ಖರೀದಿಗೆ ಸಹಮತಿ

ತುರ್ತು ವೈದ್ಯಕೀಯ ಪ್ರತಿಕ್ರಿಯೆ ಸೇವೆ 108- ಆರೋಗ್ಯ ಕವಚ ಸೇವೆಯಡಿ ರಾಜ್ಯದಲ್ಲಿರುವ ಅಂದಾಜು    7 ಕೋಟಿ ಜನಸಂಖ್ಯೆಗೆ ತಕ್ಕಂತೆ ಇನ್ನೂ 290 ಆ್ಯಂಬುಲೆನ್ಸ್‌ಗಳು ಅವಶ್ಯಕತೆ ಇದ್ದರೂ ಕೇವಲ 40 ಆ್ಯಂಬುಲೆನ್ಸ್ ಗಳನ್ನು ಖರೀದಿಸಲು ಸಹಮತಿ ವ್ಯಕ್ತಪಡಿಸಿರುವ ಆರ್ಥಿಕ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ.

ರಾಜ್ಯದಲ್ಲಿ 2014-15ನೇ ಸಾಲಿನಲ್ಲಿದ್ದ ಜನಸಂಖ್ಯೆ ಆಧಾರದ ಮೇಲೆ 2021-22ರವರೆಗೆ 710 ಆ್ಯಂಬುಲೆನ್ಸ್‌ಗಳಿವೆ. ಆದರೆ ಕೇವಲ 489 ಮಾತ್ರ ಕಾರ್ಯನಿರ್ವ ಹಿಸುತ್ತಿವೆ. ಅನುಮೋದಿತ ಸಂಖ್ಯೆ ಪ್ರಕಾರ ಇನ್ನೂ 221 ಆ್ಯಂಬುಲೆನ್ಸ್‌ಗಳು ಕಾ ರ್ಯನಿರ್ವಹಿಸಬೇಕಿತ್ತು. ಅನುಮೋದಿತ ಸಂಖ್ಯೆಗಿಂತಲೂ ಕಡಿಮೆ ಸಂಖ್ಯೆಯಲ್ಲಿ ಆ್ಯಂಬುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿ  ುವ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್‌ಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡಲು ಅನುಮತಿ ನೀಡಬೇಕಿದ್ದ ಆರ್ಥಿಕ ಇಲಾಖೆಯು ಕೇವಲ 40 ಆ್ಯಂಬುಲೆನ್ಸ್‌ಗಳನ್ನು ಖರೀದಿಸಲು ಸಹಮತಿ ವ್ಯಕ್ತಪಡಿಸಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದೆ.

108-ಆರೋಗ್ಯ ಕವಚ ಸೇವೆ ಒದಗಿಸುವ ಆ್ಯಂಬುಲೆನ್ಸ್‌ಗಳ ಖರೀದಿ ಸಂಬಂಧ ಟೆಂಡರ್ ಪ್ರಕ್ರಿಯೆ ನಡೆಸುವ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ಆದೇಶ ಪರಿಪಾಲನೆ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಚಿವ ಸಂಪುಟಕ್ಕೆ ಸಲ್ಲಿಸಿರುವ ಪ್ರಸ್ತಾವನೆ ಮತ್ತು ಈ ಸಂಬಂಧದ ಸಮಗ್ರ ದಾಖಲೆಗಳು ‘ದಿ ಫೈಲ್’ಗೆ ಲಭ್ಯವಾಗಿವೆ.

ಮಾರ್ಗಸೂಚಿಯಲ್ಲೇನಿದೆ?

ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳ ಪ್ರಕಾರ ರಾಜ್ಯದ ಒಂದು ಲಕ್ಷ ಜನಸಂಖ್ಯೆಗೆ ಒಂದು ಬಿಎಲ್‌ಎಸ್‌ಆ್ಯಂಬುಲೆನ್ಸ್ ಮತ್ತು ಪ್ರತಿ ಐದು ಲಕ್ಷ ಜನಸಂಖ್ಯೆಗೆ ಒಂದು ಎಎಲ್‌ಎಸ್ ಆ್ಯಂಬುಲೆನ್ಸ್ ಒದಗಿಸಬೇಕು. ಹಾಗೆಯೇ ಯಾವುದೇ ಒಂದು ಆಂಬ್ಯಲೆಲ್ಸ್ ದಿನದ 24 ಗಂಟೆಗಳಲ್ಲಿ ನಾಲ್ಕಕ್ಕಿಂತ ಹೆಚ್ಚಿನ ತುರ್ತು ಪ್ರಕರಣಗಳನ್ನು ಸಾಗಿಸಿದರೆ ಮತ್ತು ಯಾವುದೇ ಆ್ಯಂಬ್ಯುಲೆನ್ಸ್ ದಿನದಲ್ಲಿದ 120 ಕಿ.ಮೀ.ಗಿಂತ ಹೆಚ್ಚಿನ ದೂರ ಕ್ರಮಿಸಿದ್ದಲ್ಲಿ ಅಂತಹ ಸ್ಥಳಗಳಿಗೆ ಮತ್ತೊಂದು ಆ್ಯಂಬುಲೆನ್ಸ್ ಒದಗಿಸಬೇಕು. ಈ ನಿಯಮಗಳ ಪ್ರಕಾರ ಸಾಕಷ್ಟು ಬದಲಿ ಆ್ಯಂಬುಲೆನ್ಸ್‌ಅಗತ್ಯತೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಮರ್ಥಿಸಿಕೊಂಡಿರುವುದು ಪ್ರಸ್ತಾವನೆಯ ಪ್ರತಿಯಿಂದ ಗೊತ್ತಾಗಿದೆ.

ಪ್ರಸ್ತಾವನೆಯಲ್ಲೇನಿದೆ?

ಪ್ರಸ್ತುತ 108 ಆರೋಗ್ಯ ಕವಚ ಸೇೆಯಲ್ಲಿ ಒಟ್ಟು 710 ಆ್ಯಂಬುಲೆನ್ಸ್‌ಗಳು ಸೇವೆ ಒದಗಿಸುತ್ತಿವೆ. ಈ ಸಂಖ್ಯೆಯನ್ನು 2014-15ನೇ ಸಾಲಿನ ಜನಸಂಖ್ಯೆ ಆಧಾರದ ಮೇಲೆ ನಿರ್ಧರಿಸಲಾಗಿತ್ತು. ಪ್ರಸ್ತುತ ಜನಸಂಖ್ಯೆ ಆಧಾರದ ಮೇಲೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಮಾರ್ಗಸೂಚಿಗಳನ್ವಯ ಹಾಲಿ ಇರುವ 710 ಅಂಬ್ಯುಲೆನ್ಸ್‌ಗಳ ಸಂಖ್ಯೆಯನ್ನು 1,000ಕ್ಕೆ ಹೆಚ್ಚಿಸಬೇಕಾಗಿದೆ. ಅಲ್ಲದೆ ಈಗಿರುವ ಕರೆ ಕೇಂದ್ರದ ಆಸನ ಸಂಖ್ಯೆಯನ್ನು 54ರಿಂದ 75ಕ್ಕೆ ಹೆಚ್ಚಿಸಿ ಆ್ಯಂಬುಲೆನ್ಸ್ 108 ಸೇವೆಯನ್ನು 1,698.44 ಕೋಟಿ ರೂ.ಗಳ ವೆಚ್ಚದಲ್ಲಿ 5 ವರ್ಷಗಳ ಅವಧಿಗೆ ಪಡೆಯಲು ಅರ್ಹ ಸೇವಾದಾರರನ್ನು ಆಯ್ಕೆ ಮಾಡಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸ್ತಾವನೆ ಸಲ್ಲಿಸಿತ್ತು.

ಈ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಆರ್ಥಿಕ ಇಲಾಖೆಯು ಆಡಳಿತ ಇಲಾಖೆಯ ಪ್ರಸ್ತಾವನೆಗೆ ಸಂಬಂಧಿಸಿದಂತೆ 108- ಆ್ಯಂಬುಲೆನ್ಸ್ ಸಂಖ್ಯೆಯನ್ನು 750ಕ್ಕೆ ಸೀಮಿತಗೊಳಿಸಿ ಹಾಗೂ 54 ಕರೆ ಕೇಂದ್ರದ ಆಸನ ಸಂಖ್ಯೆಯನ್ನು ಪ್ರಸ್ತಾಪಿಸಿದಂತೆ 75ಕ್ಕೆ ಹೆಚ್ಚಿಸಿ 1,260 ಕೋಟಿ ರೂ.ಗಳ ವೆಚ್ಚದಲ್ಲಿ 5 ವರ್ಷಗಳ ಅವಧಿಗೆ ಸೇವೆಯನ್ನು ಟೆಂಡರ್ ಮೂಲಕ ಪಡೆಯಲು ಸಹಮತಿಸಿದೆ ಎಂದು 2021ರ ಡಿಸೆಂಬರ್7ರಂದು ಆರ್ಥಿಕ ಇಲಾಖೆಯು ಆರೋಗ್ಯ ಇಲಾಖೆಗೆ ತಿಳಿಸಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಪ್ರಸಕ್ತ ಸಾಲಿನಲ್ಲಿರುವ ಅಂದಾಜು 7 ಕೋಟಿ ಜನಸಂಖ್ಯೆಗೆ ತಕ್ಕಂತೆ 1,000 ಅಂಬುಲೆನ್ಸ್‌ಗಳಿರಬೇಕು. ಈ ಸಂಖ್ಯೆಯನ್ನು ಹೆಚ್ಚಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವನೆ ಪೈಕಿ ಕೇವಲ 40 ಆ್ಯಂಬುಲೆನ್ಸ್‌ಗಳನ್ನು ಹೆಚ್ಚಿಸಲು ಅನುಮತಿ ನೀಡಿರುವ ಆರ್ಥಿಕ ಇಲಾಖೆಯು ಇನ್ನು 250 ಅಂಬುಲೆನ್ಸ್‌ಗಳ ಖರೀದಿಗೆ ಅನುಮತಿ ನೀಡದಿರುವುದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳ ನೇರ ಉಲ್ಲಂಘನೆಯಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಅಲ್ಲದೆ ಪ್ರಸಕ್ತ 710 ಆ್ಯಂಬುಲೆನ್ಸ್‌ಗಳಿಗೆ ಬದಲಾಗಿ 489 ಆ್ಯಂಬುಲೆನ್ಸ್ ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. 1,350 ಇಎಂಟಿ ಮತ್ತು ಪೈಲಟ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. 2020-21ನೇ ಸಾಲಿನಲ್ಲಿ 108 ಆ್ಯಂಬುಲೆನ್ಸ್ ಸೇವೆಗಾಗಿ ಒದಗಿಸಿದ ಮೊತ್ತದಲ್ಲಿ 86.31 ಕೋಟಿ ಮಾತ್ರ ವೆಚ್ಚವಾಗಿದೆ. ಇದು ಅಂದಾಜು ಮೊತ್ತದ ಶೇ.50ರಷ್ಟು ಮಾತ್ರ ವೆಚ್ಚವಾಗಿದೆ ಎಂಬುದು ಆರ್ಥಿಕ ಇಲಾಖೆಯ ಪತ್ರದಿಂದ ಗೊತ್ತಾಗಿದೆ.

ರಾಜ್ಯದಲ್ಲಿ ತುರ್ತು ವೈದ್ಯಕೀಯ ಪ್ರತಿಕ್ರಿಯೆ ಸೇವೆ 108- ಆರೋಗ್ಯ ಕವಚ ಸೇವೆಯನ್ನು 2008ರ ಆಗಸ್ಟ್14ರಂದು ಆರಂಭಿಸಲಾಗಿತ್ತು. ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಡಿಯಲ್ಲಿ ಟೆಂಡರ್ ಮೂಲಕ ಸಿಕಂದರಾಬಾದ್ ಮೂಲದ ಜಿವಿಕೆ-ಇಎಂಆರ್‌ಐ ಸಂಸ್ಥೆ ಮೂಲಕ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು.

ಈ ಸಂಸ್ಥೆಯೊಂದಿಗೆ 10 ವರ್ಷಗಳ ಅವಧಿಗೆ ಒಡಂಬಡಿಕೆ ಮಾಡಿಕೊಂಡಿತ್ತಾದರೂ ಸಂಸ್ಥೆಯ ಸೇವಾ ನ್ಯೂನತೆಗಳಿದ್ದುದರಿಂದ 2017ರ ಜುಲೈ 14ರಂದು ಒಡಂಬಡಿಕೆಯನ್ನು ಅವಧಿಗೆ ಮುನ್ನವೇ ರದ್ದುಗೊಳಿಸಲಾಗಿತ್ತು. ಆದರೂ 108-ಸೇವೆಯು ಅತ್ಯಂತ ಅವಶ್ಯಕ ಸೇವೆಯಾಗಿದ್ದುದರಿಂದ ಮುಂದಿನ ಸೇವೆದಾರರು ಆಯ್ಕೆಯಾಗುವವರೆಗೂ ಈ ಸಂಸ್ಥೆಯ ಸೇವೆಯನ್ನು ಮುಂದುವರಿಸಲಾಗಿದೆ.

ಪ್ರಸ್ತುತ ಅನುಷ್ಠಾನಗೊಂಡಿರುವ 108-ಸೇವೆಯ ತಂತ್ರಜ್ಞಾನವು ಸುಮಾರು 13 ವರ್ಷಗಳ ಹಿಂದಿನದು. ಇದನ್ನು ಈವರೆಗೂ ಮೇಲ್ದರ್ಜೆಗೇರಿಸದ ಕಾರಣ ಸಾರ್ವಜನಿಕರಿಗೆ ಸುಗಮ ಸೇವೆ ಒದಗಿಸುವುದು ಸರಕಾರಕ್ಕೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನರಿಗೆ ಗುಣಾತ್ಮಕ 108-ಸೇವೆಯನ್ನು ಖಾತರಿಪಡಿಸುವ ಉದ್ದೇಶದಿಂದ ಈ ವೈದ್ಯಕೀಯ ಸೇವೆಯ ಐ.ಟಿ.ತಂತ್ರಜ್ಞಾನವನ್ನು ಅಂತರ್‌ರಾಷ್ಟ್ರೀಯಮಟ್ಟಕ್ಕೆ ಸಜ್ಜುಗೊಳಿಸಲು ಸರಕಾರ ಮುಂದಾಗಿದೆ.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X