ಪುತ್ತೂರು: ರಸ್ತೆ ಅಪಘಾತಕ್ಕೆ ದ್ವಿಚಕ್ರ ವಾಹನ ಸವಾರ ಬಲಿ

ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ಸೋಮವಾರ ನಡೆದಿದೆ.
ಮೃತರನ್ನು ಸೆಲ್ವಂಕುಮಾರ್ ಎಂದು ಗುರುತಿಸಲಾಗಿದೆ.
ಸೆಲ್ವಂಕುಮಾರ್ ಅವರು ಕೊಲ್ಲಾಜೆ ಒಳರಸ್ತೆಯಿಂದ ಚಲಾಯಿಸಿಕೊಂಡು ಬರುತ್ತಿದ್ದ ದ್ವಿಚಕ್ರ ವಾಹನ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದ ವೇಳೆ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಎರಡೂ ದ್ವಿಚಕ್ರ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಗಾಯಗೊಂಡಿದ್ದರು.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
.jpeg)
Next Story





