Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಚಿವರೇ...

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಚಿವರೇ ಮಾತನಾಡಿಕೊಳ್ಳುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ20 Dec 2021 2:39 PM IST
share
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಚಿವರೇ ಮಾತನಾಡಿಕೊಳ್ಳುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಬೆಳಗಾವಿ, ಡಿ.20: ರಾಜ್ಯದಲ್ಲಿ ಯಾವ ಅಧಿಕಾರಿಗಳು ಮುಖ್ಯಮಂತ್ರಿ ಮಾತು ಕೇಳುತ್ತಿಲ್ಲ. ಸುವರ್ಣ ವಿಧಾನಸೌಧದ ಕಾರಿಡಾರ್ ಗಳಲ್ಲೇ ಸಚಿವರು ಸಿಎಂ ಬದಲಾಗುತ್ತಾರೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸೋಮವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ಕುಸಿತ ಕಂಡಿದೆ. ಬಿಜೆಪಿ ಎಷ್ಟಾದರೂ ಸಿಎಂಗಳನ್ನು ಬದಲಾವಣೆ ಮಾಡಿಕೊಳ್ಳಲಿ. ಯಡಿಯೂರಪ್ಪ ಅವರನ್ನೇ ಬೇಕಾದರೆ ಮತ್ತೆ  ಸಿಎಂ ಸ್ಥಾನದಲ್ಲಿ ಕೂರಿಸಲಿ. ನಮ್ಮ ಅಭ್ಯಂತರವಿಲ್ಲ ಎಂದರು.

ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ರಾಜ್ಯದಲ್ಲಿ ಶಾಂತಿ ಕಾಪಾಡುವುದೇ ಕಾಂಗ್ರೆಸ್ ಸಂಕಲ್ಪ. ಈ ಕೃತ್ಯವನ್ನು ಏಕಾಏಕಿಯಾಗಿ ಎಂಇಎಸ್ ಅಥವಾ ಇತರೆ ಸಂಘಟನೆ ಮಾಡಿದೆ ಎಂದು ಹೇಳಲು ಸಾಧ್ಯವಿಲ್ಲ. ಅದು ಸಾಬೀತಾಗಬೇಕು. ಕೆಲವು ಕಿಡಿಗೇಡಿಗಳು ಶಾಂತಿಭಂಗ ಮಾಡಲು ಈ ಕೃತ್ಯ ಎಸಗಿದ್ದಾರೆ. ಸರಕಾರ ಅಂತಹವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದರು.

ಸರಕಾರ ಮೊದಲಿನಿಂದಲೂ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಅವರದೇ ಪಕ್ಷದ ಹಲವರನ್ನು ಪ್ರಕರಣದಿಂದ ಮುಕ್ತಿಗೊಳಿಸಿದ್ದು, ಈ ಘಟನೆಗಳಿಗೆಲ್ಲಾ ಅದೇ ಮೂಲ ಕಾರಣವಾಗುತ್ತಿದೆ ಎಂದು ಶಿವಕುಮಾರ್ ಟೀಕಿಸಿದರು.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕನ್ನಡಪರ ಸಂಘಟನೆಗಳು, ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿಯವರು ಸೇರಿದಂತೆ ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಪೊಲೀಸ್ ಅಧಿಕಾರಿಗಳು ರಾಜಕಾರಣಿಗಳ ಮಾತು ಕೇಳುವುದನ್ನು ಬಿಟ್ಟು ತಮ್ಮ ಕೆಲಸ ತಾವು ಮಾಡಬೇಕು ಎಂದು ಅವರು ಹೇಳಿದರು.

ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ರಾಜ್ಯದಲ್ಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪೊಲೀಸ್ ಅಧಿಕಾರಿಗಳು ಠಾಣೆ ಮುಂದೆ ತಮ್ಮ ಸಮವಸ್ತ್ರ ಬಿಟ್ಟು ಕಾವಿ ಬಟ್ಟೆ ಹಾಕಿದರೆ ಪರಿಸ್ಥಿತಿ ಏನಾಗುತ್ತದೆ?' ಎಂದು ಕೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಕ್ಷೇತ್ರದಲ್ಲಿ ಭಾವನಾತ್ಮಕವಾಗಿ ಮಾತನಾಡಿದ್ದು, ಅದು ಸಹಜ. ನಾನು ಕೂಡ ನನ್ನ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ. ನಮ್ಮ ಜನರ ಎದುರು ನಮ್ಮ ಅಧಿಕಾರ ತೋರಲು ಆಗುವುದಿಲ್ಲ. ಹೀಗಾಗಿ ಅವರ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಅವರು ಹೇಳಿದರು.

ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನದಿಂದ ಬದಲಾಗುತ್ತಾರೆ. ಸಚಿವ ಮುರುಗೇಶ್ ನಿರಾಣಿ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಯಿಂದಾಗಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿದೆ. ನಿನ್ನೆ ಮುಖ್ಯಮಂತ್ರಿ ತಮ್ಮ ಜನರ ಮುಂದೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ನಿರಾಣಿ ಅವರು ಅದೇ ವೇದಿಕೆಯಲ್ಲಿ ಬೊಮ್ಮಾಯಿ ಕೇಂದ್ರ ಸಚಿವರಾಗುತ್ತಾರೆ ಎಂದು ಹೇಳಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X