Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಸುಲ್ತಾನ್ ಗೋಲ್ಡ್‌ನಲ್ಲಿ ಕಳವು...

ಉಡುಪಿ ಸುಲ್ತಾನ್ ಗೋಲ್ಡ್‌ನಲ್ಲಿ ಕಳವು ಪ್ರಕರಣ; ಮಹಾರಾಷ್ಟ್ರ ಮೂಲದ ದಂಪತಿ ಸಹಿತ ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ20 Dec 2021 7:18 PM IST
share
ಉಡುಪಿ ಸುಲ್ತಾನ್ ಗೋಲ್ಡ್‌ನಲ್ಲಿ ಕಳವು ಪ್ರಕರಣ; ಮಹಾರಾಷ್ಟ್ರ ಮೂಲದ ದಂಪತಿ ಸಹಿತ ಮೂವರ ಬಂಧನ

ಉಡುಪಿ, ಡಿ.20: ಕಳೆದ ತಿಂಗಳು ಉಡುಪಿಯ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಮೂಲದ ದಂಪತಿ ಸಹಿತ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಸೋಲಾಪುರ ನಯಿ ಝಿಂದಗಿ ನಿವಾಸಿಗಳಾದ ಆಸಿಫ್ ಅಸ್ಫಾಕ್ ಶೇಖ್ (32), ಆತನ ಪತ್ನಿ ನಾಝಿಯಾ (32), ಕುಂಬಾರಿ ಗ್ರಾಮದ ಸೌದಾಗರ್ ದಿಲೀಪ್ ಗೋಂದ್‌ ಕರ್(35) ಬಂಧಿತ ಆರೋಪಿಗಳು.

ನ.23ರಂದು ಇಬ್ಬರು ಬುರ್ಖಾ ಧರಿಸಿದ ಮಹಿಳೆಯವರು, ಓರ್ವ ಗಂಡಸು ಮಗುವಿನೊಂದಿಗೆ ಗ್ರಾಹಕರ ಸೋಗಿನಲ್ಲಿ ಉಡುಪಿಯ ಸುಲ್ತಾನ್ ಗೋಲ್ಡ್ ಗೆ ಬಂದು ಒಟ್ಟು 60 ಗ್ರಾಂ ತೂಕದ 3,00,000ರೂ. ಮೌಲ್ಯದ 4 ಚಿನ್ನದ ಬಳೆಗಳನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ತನಿಖೆ ನಡೆಸಿದ ಉಡುಪಿ ನಗರ ಪೊಲೀಸರು, ಜ್ಯುವೆಲ್ಲರಿ ಆಸುಪಾಸಿನ ಸಿಸಿ ಟಿವಿ ಪುಟೇಜ್ ಪರಿಶೀಲನೆ ನಡೆಸಿದಾಗ, ಎಂಎಚ್-13- ಎಫ್-4599ನೆ ನಂಬರಿನ ತವೇರಾ ಕಾರು ಕೃತ್ಯಕ್ಕೆ ಬಳಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದರು. ಹೀಗೆ ಆರೋಪಿಗಳ ಜಾಡು ಹಿಡಿದು ಮಹಾರಾಷ್ಟ್ರ ರಾಜ್ಯದ ಸೋಲಾಪುರಕ್ಕೆ ತೆರಳಿದ ಪೊಲೀಸರ ತಂಡ, ಡಿ.18ರಂದು ಸಂಜೆ ವೇಳೆ ಸೋಲಾಪುರದ ನಯಿ ಝಿಂದಗಿ ಎಂಬಲ್ಲಿ ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿತು.

ಆರೋಪಿಗಳನ್ನು ಡಿ.19ರಂದು ಸಂಜೆ ಠಾಣೆಗೆ ಕರೆತಂದು ಹಾಜರು ಪಡಿಸಲಾಯಿತು. ಬಂಧಿತರಿಂದ 1 ತವೇರಾ ವಾಹನ, 1 ಮೊಬೈಲ್ ಹಾಗೂ 2,99,792ರೂ. ಮೌಲ್ಯದ 4 ಚಿನ್ನದ ಬಳೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎಲ್ಲ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಉಡುಪಿ ಎಸ್ಪಿ ಎನ್.ವಿಷ್ಣುವರ್ಧನ್ ಆದೇಶದಂತೆ, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಡಿವೈಎಸ್ಪಿ ಸುಧಾಕರ ನಾಯ್ಕ್ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ ಕುಮಾರ್. ಎಸ್ಸೈ ವಾಸಪ್ಪ ನಾಯ್ಕ್, ಪ್ರೊಬೆಷನರಿ ಎಸ್ಸೈಗಳಾದ ಪ್ರಸಾದ, ಸುಹಾಸ್, ಸಿಬ್ಬಂದಿ ಸತೀಶ್, ಸಂತೋಷ್ ರಾಠೋಡ್, ಗಡ್ಡಯ್ಯ ಹೀರೆಮಠ್, ಮಲ್ಲಯ್ಯ, ನಾಗರತ್ನ, ಬಾಲಕೃಷ್ಣ, ಸುಷ್ಮ, ರಿಯಾಝ್ ಅಹ್ಮದ್, ಲೋಕೇಶ್, ಜೀವನ್ ಕುಮಾರ್, ಆನಂದ ಗಾಣಿಗ, ಹೇಮಂತ್, ಶಿವಕುಮಾರ್ ಹಾಗೂ ಚಾಲಕ ರಾಘವೇಂದ್ರ ಈ ಕಾರ್ಯಾಚರಣೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X