ವಿಕಲಚೇತನರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ, ಡಿ.20: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರಿ-ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್- www.disabilityaffairs.gov.in, www.scholorships.gov.in ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810/811ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





