ಕೋವಿಡ್ ನಿಯಮಾವಳಿಯೊಂದಿಗೆ ಸರಳ ಕ್ರಿಸ್ಮಸ್ ಆಚರಣೆ: ಬಿಷಪ್
ಉಡುಪಿ, ಡಿ.20: ಕೋವಿಡ್ ಮೂರನೆಯ ಅಲೆ ಭೀತಿಯ ಹಿನ್ನೆಲೆಯಲ್ಲಿ ಡಿ.25ರಂದು ಕೋವಿಡ್ ನಿಯಮಾವಳಿ ಅನುಸರಿಸಿ ಸರಳವಾಗಿ ಕ್ರಿಸ್ಮಸ್ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೋಬೋ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವರ್ಷ ನಾವು ಪೂಜೆಗೆ ಹೆಚ್ಚು ಆದ್ಯತೆ ನೀಡಲಿದ್ದೇವೆ. ಜನದಟ್ಟಣೆ ಕಡಿಮೆ ಮಾಡಲು ಪೂಜೆಯ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ. ಪೂಜೆಯ ಬಳಿಕ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದೇವೆ ಎಂದರು.
ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಎಲ್ಲರೂ ಕೂಡ ಕೋವಿಡ್ ನಿಯಮಾವಳಿ ಅನುಸರಿಸಿ ಪೂಜೆಯಲ್ಲಿ ಭಾಗವಹಿಸುವಂತೆ ಈಗಾಗಲೇ ಸೂಚನೆ ನೀಡಿದ್ದೇವೆ. ಅದರಂತೆ ತುಂಬಾ ಸರಳವಾಗಿ ಈ ಹಬ್ಬವನ್ನು ಆಚರಿಸಲಾಗುವುದು ಎಂದು ಅವರು ಹೇಳಿದರು.
Next Story





