ಅಂತರ್ ಜಿಲ್ಲಾ ಟೆನಿಸ್ ಟೂರ್ನಿಗೆ ಚಾಲನೆ
ಉಡುಪಿ, ಡಿ.20: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲಾ ಲಾನ್ ಟೆನಿಸ್ ಅಸೋಸಿಯೇಶನ್ ಜಂಟಿಯಾಗಿ ಆಯೋಜಿಸಿದ ಅಂತರ್ ಜಿಲ್ಲಾ ಟೆನಿಸ್ ಪಂದ್ಯಾವಳಿ ಅಜ್ಜರಕಾಡು ಟೆನಿಸ್ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.
ಟೆನಿಸ್ ಆಟಗಾರರೂ ಆಗಿರುವ ಮಾಹೆಯ ಪ್ರೊ ಚಾನ್ಸಲರ್ ಡಾ. ಎಚ್. ಎಸ್.ಬಳ್ಳಾಲ್ ಪಂದ್ಯಾಟವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ರೋಶನ್ ಕುಮಾರ್ ಶೆಟ್ಟಿ ಹಾಗೂ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಎಂ.ಚಂದ್ರಶೇಖರ್ ಹೆಗ್ಡೆ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಲಾನ್ ಟೆನಿಸ್ ಅಸೋಸಿಯೇಶನ್‌ನ ಅಧ್ಯಕ್ಷ ಸಿಎ ದೇವಾನಂದ ಅಧ್ಯಕ್ಷತೆ ವಹಿಸಿದ್ದರು.
ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರೆ, ಡಾ. ರಾಮಚಂದ್ರ ಪಾಟ್ಕರ್ ಕಾರ್ಯಕ್ರಮ ನಿರೂಪಿಸಿದರು.
Next Story





