ಕೆಎಸ್‍ಪಿಸಿಬಿ ಅಧ್ಯಕ್ಷರನ್ನಾಗಿ ಡಾ.ಶಾಂತ್ ಅವ್ವೇರಹಳ್ಳಿ ನೇಮಕ ಪ್ರಶ್ನಿಸಿ ಅರ್ಜಿ: ಹೈಕೋರ್ಟ್ ನೋಟಿಸ್

ಬೆಂಗಳೂರು, ಡಿ.20: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‍ಪಿಸಿಬಿ)ಯ ಅಧ್ಯಕ್ಷರನ್ನಾಗಿ ಡಾ.ಶಾಂತ್ ಅವ್ವೇರಹಳ್ಳಿ ತಿಮ್ಮಯ್ಯ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಡಾ.ಶಾಂತ್ ಅವ್ವೇರಹಳ್ಳಿ ತಿಮ್ಮಯ್ಯ ಅವರ ನೇಮಕವು ಜಲ(ಮಾಲಿನ್ಯ ನಿಯಂತ್ರಣ ಮತ್ತು ನಿರ್ವಹಣೆ) ಕಾಯ್ದೆಯ ಸೆಕ್ಷನ್ 6ರ ವಿರುದ್ಧವಾಗಿದೆ. ಕೆಎಸ್‍ಪಿಸಿಬಿ ಅಧ್ಯಕ್ಷರನ್ನಾಗಿ ಡಾ.ಶಾಂತ್ ಅವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಿ ಆದೇಶ ಹೊರಡಿಸಿರುವುದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.
Next Story





