Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಮಹಿಳೆ ಸಿದ್ಧಪಡಿಸಿದ...

ದಲಿತ ಮಹಿಳೆ ಸಿದ್ಧಪಡಿಸಿದ ಮಧ್ಯಾಹ್ನದೂಟಕ್ಕೆ ಮೇಲ್ವರ್ಗದ ವಿದ್ಯಾರ್ಥಿಗಳ ಬಹಿಷ್ಕಾರ !

ವಾರ್ತಾಭಾರತಿವಾರ್ತಾಭಾರತಿ21 Dec 2021 7:13 AM IST
share
ದಲಿತ ಮಹಿಳೆ ಸಿದ್ಧಪಡಿಸಿದ ಮಧ್ಯಾಹ್ನದೂಟಕ್ಕೆ ಮೇಲ್ವರ್ಗದ ವಿದ್ಯಾರ್ಥಿಗಳ ಬಹಿಷ್ಕಾರ !

ಡೆಹ್ರಾಡೂನ್: ದಲಿತ ಮಹಿಳೆ ಸಿದ್ಧಪಡಿಸಿದ ಬಿಸಿಯೂಟವನ್ನು ಹಿಂದೂ ಮೇಲ್ವರ್ಗದ ವಿದ್ಯಾರ್ಥಿಗಳು ಬಹಿಷ್ಕರಿಸಿದ ಘಟನೆ ಉತ್ತರಾಖಂಡದ ಚಂಪಾವತ್ ಜಿಲ್ಲೆಯಿಂದ ವರದಿಯಾಗಿದೆ.

ಇದು ರಾಜ್ಯದಲ್ಲಿ ವ್ಯಾಪಕವಾಗಿರುವ ಸಾಮಾಜಿಕ ತಾರತಮ್ಯ ಮತ್ತು ಜಾತಿ ಪೂರ್ವಾಗ್ರಹದ ಬಗ್ಗೆ ವಿವಾದ ಹುಟ್ಟುಹಾಕಿದೆ.

ಚಂಪಾವತ್ ಜಿಲ್ಲೆಯ ಸುಖೀಧಂಗ್ ಪ್ರದೇಶದ ಜೂಲ್ ಗ್ರಾಮದ ಸರ್ಕಾರಿ ಮಾಧ್ಯಮಿಕ ಶಾಲೆಯ ಭೋಜನ ಮಾತಾ ಹುದ್ದೆಗೆ ದಲಿತ ಮಹಿಳೆ ಸುನೀತಾ ದೇವಿಯವರನ್ನು ಇತ್ತೀಚೆಗೆ ನೇಮಕ ಮಾಡಲಾಗಿತ್ತು. ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಊಟ ಸಿದ್ಧಪಡಿಸುವ ಹೊಣೆಯನ್ನು ಇವರಿಗೆ ವಹಿಸಲಾಗಿತ್ತು.

"ಇವರು ಕರ್ತವ್ಯಕ್ಕೆ ಹಾಜರಾದ ದಿನ ಮೇಲ್ವರ್ಗದ ವಿದ್ಯಾರ್ಥಿಗಳು, ಇವರೇ ಸಿದ್ಧಪಡಿಸಿದ ಬಿಸಿಯೂಟ ಸವಿದಿದ್ದರು. ಆದರೆ ಮರುದಿನದಿಂದ ಊಟ ಬಹಿಷ್ಕರಿಸಿದರು" ಎಂದು ಸರ್ಕಾರಿ ಜಂಟರ್ ಕಾಲೇಜು ಪ್ರಾಂಶುಪಾಲ ಪ್ರೇಮ್‌ಸಿಂಗ್ ವಿವರಿಸಿದರು.

"ವಿದ್ಯಾರ್ಥಿಗಳು ಬಿಸಿಯೂಟ ಬಹಿಷ್ಕರಿಸಿದ್ದೇಕೆ ಎನ್ನುವುದು ನಮ್ಮ ಕಲ್ಪನೆಗೆ ನಿಲುಕದ್ದು. ಒಟ್ಟು 57 ವಿದ್ಯಾರ್ಥಿಗಳ ಪೈಕಿ ಪರಿಶಿಷ್ಟ ಜಾತಿಗೆ ಸೇರಿದ ಕೇವಲ 16 ವಿದ್ಯಾರ್ಥಿಗಳು ಮಾತ್ರ ಊಟ ಮಾಡುತ್ತಿದ್ದಾರೆ" ಎಂದು ವಿವರಿಸಿದರು.

ಶಾಲೆಯಲ್ಲಿ ಅಡುಗೆಯವರ ಎರಡು ಹುದ್ದೆಗಳಿದ್ದು, ಶಕುಂತಲಾ ದೇವಿ ಎಂಬ ಮಹಿಳೆ ನಿವೃತ್ತರಾದಾಗ ಸುನೀತಾ ದೇವಿಯವರನ್ನು ನೇಮಕ ಮಾಡಲಾಗಿತ್ತು. ಸರ್ಕಾರದ ನಿಯಮಾವಳಿ ಅನ್ವಯ ಅವರನ್ನು ನೇಮಕ ಮಾಡಲಾಗಿದೆ ಎಂದು ಸಿಂಗ್ ಸಮರ್ಥಿಸಿಕೊಂಡಿದ್ದಾರೆ.

"ಭೋಜನಮಾತಾ ಹುದ್ದೆಗೆ 11 ಅರ್ಜಿಗಳು ಬಂದಿದ್ದವು. ಪೋಷಕ ಶಿಕ್ಷಕ ಸಂಘದ ಮುಕ್ತ ಸಭೆಯಲ್ಲಿ ಮತ್ತು ಶಾಲಾ ನಿರ್ವಹಣಾ ಸಮಿತಿ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ" ಎಂದು ಹೇಳಿದ್ದಾರೆ.

ಶಾಲೆಯಲ್ಲಿ 230 ವಿದ್ಯಾರ್ಥಿಗಳಿದ್ದು, 6 ರಿಂದ 8ನೇ ತರಗತಿವರೆಗಿನ 66 ವಿದ್ಯಾರ್ಥಿಗಳ ಪೈಕಿ 40 ಮಂದಿ ಮೇಲ್ವರ್ಗದವರು. ಡಿಸೆಂಬರ್ 13ರಂದು ಸುನಿತಾ ದೇವಿ ಕರ್ತವ್ಯಕ್ಕೆ ಸೇರಿದ ಮರುದಿನದಿಂದ ಈ ವಿದ್ಯಾರ್ಥಿಗಳು ಬಿಸಿಯೂಟ ಬಹಿಷ್ಕರಿಸಿ, ಮನೆಯಿಂದ ಊಟ ತರುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

"ಎಲ್ಲ ಅರ್ಹತೆ ಇದ್ದ ಪುಷ್ಪಾ ಭಟ್ ಎಂಬ ಮಹಿಳೆಯನ್ನು ನಾವು ಆಯ್ಕೆ ಮಾಡಿದ್ದೆವು. ಅವರಿಗೆ ಅಗತ್ಯತೆಯೂ ಇತ್ತು. ಆದರೆ ಪ್ರಾಚಾರ್ಯರು ದಲಿತ ಮಹಿಳೆ ಸುನೀತಾ ದೇವಿಯನ್ನು ಈ ಹುದ್ದೆಗೆ ಆಯ್ಕೆ ಮಾಡಿದರು" ಎಂದು ಶಾಲಾ ಶಿಕ್ಷಕ ಪೋಷಕ ಸಂಘದ ಅಧ್ಯಕ್ಷ ನರೇಂದ್ರ ಜೋಶಿ ಆಪಾದಿಸಿದ್ದಾರೆ.

ಮೇಲ್ವರ್ಗದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಇರುವ ಕಾರಾಣ ಮೇಲ್ವರ್ಗದ ಮಹಿಳೆಯನ್ನೇ ನೇಮಕ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X