ಕನ್ನಡ ಬಾವುಟಕ್ಕೆ ಬೆಂಕಿ: ಮೂವರು ಆರೋಪಿಗಳ ಸೆರೆ

ಬೆಳಗಾವಿ, ಡಿ.21: ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಂಜು ಗುರವ, ಸಚಿನ್ ಗುರವ ಹಾಗೂ ಗಣೇಶ ಪೆಡ್ನೇಕರ ಬಂಧಿತ ಆರೋಪಿಗಳು.
ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ ಕಿಡಿಗೇಡಿಗಳು ಕನ್ನಡ ಬಾವುಟ ಸುಟ್ಟಿದ್ದರಲ್ಲದೆ, ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸೆಗಣಿ ಎರಚಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ನಂದಗಡ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story





