Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರೀ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ...

ಭಾರೀ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ

ವಾರ್ತಾಭಾರತಿವಾರ್ತಾಭಾರತಿ21 Dec 2021 3:34 PM IST
share
ಭಾರೀ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ

ಬೆಳಗಾವಿ, ಡಿ. 21: ಆಮಿಷ, ಒತ್ತಾಯ, ಬಲವಂತ, ವಂಚನೆ ಸಾಧನೆಗಳ ಮೂಲಕ ಮತಾಂತರ ಮಾಡುವವರಿಗೆ ಮೂರು ವರ್ಷಗಳಿಂದ 10 ವರ್ಷಗಳ ವರೆಗೆ ಕಾರಾಗೃಹ ಶಿಕ್ಷೆ, 25 ಸಾವಿರ ರೂ.ನಿಂದ 5ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021ನ್ನು ಪ್ರತಿಪಕ್ಷಗಳ ತೀವ್ರ ಗದ್ದಲ-ಕೋಲಾಹಲದ ಮಧ್ಯೆ ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ.

ಮಂಗಳವಾರ ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದ್ದು, ರಾಜ್ಯದಲ್ಲಿ ಸಾರ್ವಜನಿಕ ವಲಯದಲ್ಲಿ ಕುತೂಹಲ ಸೃಷ್ಟಿಸಿದ್ದ ವಿವಾದಾಸ್ಪದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021ನ್ನು ಕೊನೆಗೂ ರಾಜ್ಯ ಸರಕಾರ ಮಂಡನೆ ಮಾಡಿದೆ.

ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷದ ಮೂಲಕ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ಮಾಡುವುದನ್ನು ನಿಷೇಧಿಸಲು ವಿಧೇಯಕ ನಿರ್ಬಂಧಿಸಲಿದೆ.

ನಗದು ರೂಪದಲ್ಲಾಗಲಿ ಅಥವಾ ವಸ್ತುವಿನ ರೂಪದಲ್ಲಿ ಉಡುಗೊರೆ, ಧಾರ್ಮಿಕ ಸಂಸ್ಥೆಗಳ ಶಾಲೆ-ಕಾಲೇಜುಗಳಲ್ಲಿ ಉಚಿತ ಶಿಕ್ಷಣ, ಉದ್ಯೋಗದ ಪ್ರಲೋಭನೆ, ಮದುವೆಯಾಗುವುದಾಗಿ ವಾಗ್ದಾನ ಮಾಡುವ ಮೂಲಕ ಮತಾಂತರ ಮಾಡುವುದನ್ನು ನಿಷೇಧಿಸಲಾಗಿದೆ.

ದೂರು ದಾಖಲಿಸಲು ಅವಕಾಶ: ಯಾರೇ ಮತಾಂತರಗೊಂಡ ವ್ಯಕ್ತಿ, ಆತನ ಪಾಲಕರು, ಸೋದರ, ಸೋದರಿ ಅಥವಾ ಆತನ ರಕ್ತ ಸಂಬಂಧಿ, ಮದುವೆ ಅಥವಾ ದತ್ತು ಮೂಲಕ ಸಂಬಂಧಿ ದೂರು ನೀಡಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಯಾವುದೇ ವ್ಯಕ್ತಿಯನ್ನು ಆಮಿಷ, ಬಲವಂತ, ಒತ್ತಾಯದ ಮೂಲಕ ಮತಾಂತರಕ್ಕೆ ಮೂರು ವರ್ಷಗಳಿಂದ 5 ವರ್ಷಗಳ ವರೆಗೆ ಕಾರಾಗೃಹ ಶಿಕ್ಷೆ, 25 ಸಾವಿರ ರೂ.ದಂಡ ವಿಧಿಸಬಹುದಾಗಿದೆ. ಅಪ್ರಾಪ್ತ ಅಥವಾ ಅಸ್ವಸ್ಥಚಿತ್ತ ವ್ಯಕ್ತಿ ಅಥವಾ ಮಹಿಳೆ ಅಥವಾ ಎಸ್ಸಿ-ಎಸ್ಟಿ ವರ್ಗಕ್ಕೆ ಸೇರಿದವರನ್ನು ಮತಾಂತರ ಮಾಡಿದರೆ 3 ವರ್ಷದಿಂದ 10 ವರ್ಷ ಜೈಲು ಶಿಕ್ಷೆ ಅಥವಾ 50ಸಾವಿರ ರೂ.ದಂಡ, ಸಾಮೂಹಿಕ ಮತಾಂತರಕ್ಕೆ 3ರಿಂದ 10ವರ್ಷ ಜೈಲು ಶಿಕ್ಷೆ, 1ಲಕ್ಷ ರೂ.ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಮದುವೆ ಅಸಿಂಧು: ಒಂದು ಧರ್ಮದ ಪುರುಷ ಮತ್ತೊಂದು ಧರ್ಮದ ಮಹಿಳೆಯೊಂದಿಗೆ ಮದುವೆಗೆ ಮುಂಚೆ ಅಥವಾ ನಂತರ ಆತನೆ, ಆಕೆಯೇ ಮತಾಂತರಗೊಳ್ಳುವ ಮೂಲಕ ಕಾನೂನು ಬಾಹಿರ ಮತಾಂತರ ಅಥವಾ ವಿಪರ್ಯಯದ ಏಕಮಾತ್ರ ಉದ್ದೇಶಕ್ಕಾಗಿ ಮಾಡಿದ ಮದುವೆ ಅಸಿಂಧು ಎಂದು ಘೋಷಿಸುವುದು.

ಉದ್ದೇಶ: ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಖಾತ್ರಿಗೊಳಿಸಲಾಗಿದೆ. ಯಾವುದೇ ವ್ಯಕ್ತಿ ತಮ್ಮ ಆಯ್ಕೆಯ ಯಾವುದೇ ಧರ್ಮವನ್ನು ಅಂಗೀಕರಿಸಲು, ಆಚರಿಸಲು ಮತ್ತು ಪ್ರಸಾರ ಮಾಡಲು ಮುಕ್ತ. ರಾಜ್ಯದಲ್ಲಿ ಆಮಿಷ, ಒತ್ತಾಯ, ಬಲವಂತದ ಮತಾಂತರ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿವೆ. ಹೀಗಾಗಿ ಇಂತಹ ಘಟನೆಗಳನ್ನು ತಡೆಗಟ್ಟಲು ಮತ್ತು ಇಂತ ಕೃತ್ಯಗಳಲ್ಲಿ ತೊಡಗಿರುವ ವ್ಯಕ್ತಿಗಳನ್ನು ಶಿಕ್ಷಿಸಲು ಅವಕಾಶ ಕಲ್ಪಿಸಲು ಈ ವಿಧೇಯಕವನ್ನು ತರಲಾಗಿದೆ ಎಂದು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X