ಸತತ ಮೂರನೇ ಅವಧಿಗೆ ಕೋಲ್ಕತಾ ಮಹಾನಗರ ಪಾಲಿಕೆ ಅಧಿಕಾರ ಉಳಿಸಿಕೊಳ್ಳುವತ್ತ ಟಿಎಂಸಿ

Photo: ANI
ಕೋಲ್ಕತ್ತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕೋಲ್ಕತಾ ಮಹಾನಗರ ಪಾಲಿಕೆ (ಕೆಎಂಸಿ)ಯಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದೆ. ಟಿಎಂಸಿ ಅಭ್ಯರ್ಥಿಗಳು 112 ವಾರ್ಡ್ಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಹಾಗೂ 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿಗಳು ಐದು ವಾರ್ಡ್ಗಳಲ್ಲಿ ಮುಂದಿದ್ದಾರೆ ಎಂದು ಎಸ್ಇಸಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ಯ 144 ವಾರ್ಡ್ಗಳ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಯಿತು.
"ಟ್ರೆಂಡ್ಗಳ ಪ್ರಕಾರ, ಟಿಎಂಸಿ 112 ವಾರ್ಡ್ಗಳಲ್ಲಿ ಮುನ್ನಡೆ ಸಾಧಿಸಿದೆ ಹಾಗೂ 13 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಐದು ವಾರ್ಡ್ಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಸಿಪಿಎಂಮತ್ತು ಕಾಂಗ್ರೆಸ್ ತಲಾ ಒಂದು ವಾರ್ಡ್ನಲ್ಲಿ ಮುನ್ನಡೆ ಸಾಧಿಸಿವೆ" ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿ ತಿಳಿಸಿದ್ದಾರೆ
Next Story