ಬುಡೋಳಿ; ಆಟೋ ರಿಕ್ಷಾ - ಬೈಕ್ ನಡುವೆ ಅಪಘಾತ

ಬಂಟ್ವಾಳ, ಡಿ.21: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಸಂಭವಿಸಿದೆ.
ಮಾಣಿಯಿಂದ ಗಡಿಯಾರ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ಉಪ್ಪಿನಂಗಡಿಯಿಂದ ಬಂದ ಬೈಕ್ ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ರಸ್ತೆಯಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Next Story





