ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

ಕೋಟ, ಡಿ.21: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ.ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡ ಮಾಡುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಕಾರ್ಯ ಕ್ರಮದ ಆಮಂತ್ರಣ ಪತ್ರಿಕೆಯನ್ನು ಡಿ.21ರಂದು ವಡ್ಡರ್ಸೆಯವರ ಮನೆಯಲ್ಲಿ ಬ್ರಹ್ಮಾವರ ಸ್ಟೋಟ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ ಬಿಡುಗಡೆ ಗೊಳಿಸಿದರು.
ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಮಾತನಾಡಿ ದರು. ಕುಂದಪ್ರಭ ವಾರಪತ್ರಿಕೆಯ ಸಂಪಾದಕ ಯು.ಎಸ್. ಶೆಣೈ ಈ ಬಾರಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಡಿ.26ರಂದು ಅಪರಾಹ್ನ 3.30ಕ್ಕೆ ಬ್ರಹ್ಮಾವರ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಚಿತೂ್ತರು ಪ್ರಭಾಕರ ಆಚಾರ್ಯ ತಿಳಿಸಿದರು.
ವಡ್ಡರ್ಸೆ ಗ್ರಾಪಂ ಅಧ್ಯಕ್ಷೆ ಸವಿತಾ ಪ್ರಕಾಶ್ ಆಚಾರ್ಯ, ಮಾಜಿ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮುಖ್ಯ ಶಿಕ್ಷಕ ಕೊತ್ತಾಡಿ ಸಂತೋಷ ಶೆಟ್ಟಿ, ಜಿಲ್ಲಾ ಸಂಘದ ಸದಸ್ಯ ಗಣೇಶ್ ಸಾಬ್ರಕಟ್ಟೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕ ವಸಂತ್ ಗಿಳಿಯಾರು ಪ್ರಾಸ್ತಾವಿಕ ಮಾತನಾಡಿದರು.
ಸಂಘದ ಜತೆ ಕಾರ್ಯದರ್ಶಿ ಕೆ.ಜಿ.ವೈದ್ಯ ಸ್ವಾಗತಿಸಿದರು. ಉಪಾಧ್ಯಕ್ಷ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪ್ರಭಾರ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ವಂದಿಸಿದರು.







