ಡಿ. 24: ರಾಷ್ಟ್ರೀಯ ಗ್ರಾಹಕ ದಿನಾಚರಣೆ
ಮಂಗಳೂರು, ಡಿ.21: ದ.ಕ.ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ), ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಡಿ.24ರಂದು ರಾಷ್ಟ್ರೀಯ ಗ್ರಾಹಕ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 10:30ಕ್ಕೆ ನಗರದ ಬಿಜೈನ ಆನೆಗುಂಡಿ ರಸ್ತೆಯಲ್ಲಿರುವ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅಧ್ಯಕ್ಷತೆ ವಹಿಸುವರು. ಜಿಲ್ಲಾಗ್ರಾಹಕ ವ್ಯಾಜ್ಯ ವಿಲೇವಾರಿ ಆಯೋಗದ ಅಧ್ಯಕ್ಷಪ್ರಕಾಶ್ ಕೆ. ಕಾರ್ಯಕ್ರಮ ಉದ್ಘಾಟಿಸಲಿದ್ದು, ನಿವೃತ್ತ ಸಹ ಪ್ರಾಧ್ಯಾಪಕಿ ಡಾ.ಸುಧಾ ಕೆ. ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





