ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ನ್ಯಾಯವಾದಿ ರಾಜೇಶ್ ಭಟ್ ಗೆ ಪೊಲೀಸ್ ಕಸ್ಟಡಿ

ಕೆ.ಎಸ್.ಎನ್. ರಾಜೇಶ್ ಭಟ್
ಮಂಗಳೂರು, ಡಿ.21: ಇಂಟರ್ನ್ಶಿಪ್ಗೆ ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡು ಪೊಲೀಸ್ ಇಲಾಖೆಗೆ ಸವಾಲಾಗಿದ್ದ ಆರೋಪಿ ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ಭಟ್ ಸೋಮವಾರ ನ್ಯಾಯಾಲಯಕ್ಕೆ ಶರಣಾಗಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದರೆ, ಮಂಗಳವಾರ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಮಂಗಳೂರಿನ ಜೆಎಂಎಫ್ಸಿ ನ್ಯಾಯಾಲಯವು ಆರೋಪಿಗೆ ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದೆ. ಅದರಂತೆ ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಪೊಲೀಸರು ಆರೋಪಿ ರಾಜೇಶ್ ಭಟ್ ನನ್ನು ಒಂದು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶೆ ಅಶ್ವಿನಿ ಕೋರೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಿ ಆದೇಶಿಸಿದರು.
ಲೈಂಗಿಕ ಕಿರುಕುಳ ಆರೋಪದಲ್ಲಿ ಎರಡು ತಿಂಗಳಿಂದ ತಲೆಮರೆಸಿಕೊಂಡು ಪೊಲೀಸ್ ಇಲಾಖೆಗೆ ಸವಾಲಾಗಿದ್ದ ಆರೋಪಿ ರಾಜೇಶ್ ಭಟ್ ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದನು. ಹಾಗೇ ನ್ಯಾಯಾಲಯವು ರಾಜೇಶ್ ಭಟ್ ನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಯಾಗಿದೆ.







