Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಿಂಗಳ ಅಂತ್ಯದೊಳಗೆ ವಿದ್ಯಾರ್ಥಿ ವೇತನ...

ತಿಂಗಳ ಅಂತ್ಯದೊಳಗೆ ವಿದ್ಯಾರ್ಥಿ ವೇತನ ಬಿಡುಗಡೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ22 Dec 2021 3:12 PM IST
share
ತಿಂಗಳ ಅಂತ್ಯದೊಳಗೆ ವಿದ್ಯಾರ್ಥಿ ವೇತನ ಬಿಡುಗಡೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಳಗಾವಿ, ಡಿ. 22:  ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ(ಎಸ್ಸಿ) ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ತಿಂಗಳ ಅಂತ್ಯದೊಳಗೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆ ಪ್ರಶ್ನೋತ್ತದ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ರಿಝ್ವಾನ್ ಅರ್ಶದ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಮೆಟ್ರಿಕ್ ನಂತರ 3.50ಲಕ್ಷ, ಮೆಟ್ರಿಕ್ ಪೂರ್ವದಲ್ಲಿ 10ಲಕ್ಷ ಒಟ್ಟು 13.50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಪೈಕಿ 10 ಲಕ್ಷ ವಿದ್ಯಾರ್ಥಿಗಳಿಗೆ ಎಂದರೆ ಶೇ.86ರಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡಗಡೆಯಾಗಿದೆ ಎಂದು ವಿವರ ನೀಡಿದರು.

ಕೆಲ ತಾಂತ್ರಿಕ ಕಾರಣಗಳಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ವಿಳಂಬವಾಗಿದೆ. ಇದೀಗ ಆ ತೊಂದರೆ ನಿವಾರಿಸಲು ಇಲಾಖೆಯಿಂದ ಅಭಿಯಾನವನ್ನೆ ಹಮ್ಮಿಕೊಳ್ಳಲಾಗಿತ್ತು. ಕೆಲವರಿಗೆ ಆಧಾರ್ ಕಾರ್ಡ್ ಇರಲಿಲ್ಲ. ಕೆಲವರಿಗೆ ಬ್ಯಾಂಕ್ ಖಾತೆ ಜೋಡಣೆ ಆಗಿರಲಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಅಭಿಯಾನ ಮಾಡಿದ್ದೆವು. ಈ ತಿಂಗಳೊಳಗೆ ಎಲ್ಲರಿಗೂ ವಿದ್ಯಾರ್ಥಿ ವೇತನ ತಲುಪಲಿದೆ ಎಂದು ತಿಳಿಸಿದರು.

ಅಲ್ಲದೆ, 13 ಸಾವಿರ ವಿದ್ಯಾರ್ಥಿಗಳು ಆಡಳಿತ ಮಂಡಳಿ ಕೋಟಾದಲ್ಲಿ ವಿವಿಧ ಕೋರ್ಸ್‍ಗಳಿಗೆ ಸೇರ್ಪಡೆಯಾಗಿದ್ದಾರೆ. ಇವರಿಗೂ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಕಟ್ಟಕಡೆಯ ವಿದ್ಯಾರ್ಥಿಗೂ ಈ ತಿಂಗಳೊಳಗೆ ವಿದ್ಯಾರ್ಥಿ ವೇತನ ಸಿಗಲಿದೆ ಎಂದು ತಿಳಿಸಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಹಿರಿಯ ಸದಸ್ಯ ಡಾ.ಜಿ.ಪರಮೇಶ್ವರ್, ಇಲಾಖೆ ವಿದ್ಯಾರ್ಥಿ ವೇತನವನ್ನು ಸಕಾಲಕ್ಕೆ ನೀಡದಿದ್ದರೆ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಊಟ ಹಾಕುವುದಿಲ್ಲ. ಎರಡು ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡಿಲ್ಲ. ಹೀಗಾದರೆ ಹೇಗೆ? ಕೂಡಲೇ ಎಲ್ಲರಿಗೂ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಧ್ವನಿಗೂಡಿಸಿದ ಬಿಎಸ್ಪಿ ಸದಸ್ಯ ಮಹೇಶ್, ಮೊದಲು ವಿದ್ಯಾರ್ಥಿ ವೇತನಕ್ಕೆ ಕಾಲೇಜುಗಳವರೇ ಮಾಹಿತಿಗಳನ್ನು ಅಪ್‍ಲೋಡ್ ಮಾಡುತ್ತಿದ್ದರು. ಈಗ ವಿದ್ಯಾರ್ಥಿಗಳೇ ಅಪ್‍ಲೋಡ್ ಮಾಡಬೇಕಿದೆ. ಇದನ್ನು ತಪ್ಪಿಸಿ. ಇದರಿಂದ ವಿಳಂಬವಾಗುತ್ತಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X