ಉಡುಪಿ ಜಿಲ್ಲೆಯಲ್ಲಿ ಅನೈರ್ಮಲ್ಯ ಶೌಚಾಲಯಗಳಿಲ್ಲ : ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ
ಉಡುಪಿ, ಡಿ.22: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆಯನ್ನು ನಡೆಸಿ, ವರದಿ ನೀಡುವಂತೆ ಸೂಚಿಸಲಾಗಿದ್ದು, ಅದರಂತೆ ಜಿಲ್ಲೆಯ ಎಲ್ಲಾ 155 ಗ್ರಾಪಂಗಳ ವ್ಯಾಪ್ತಿಯಲ್ಲಿ ಅನೈರ್ಮಲ್ಯ ಶೌಚಾಲಯ ಬಗ್ಗೆ ಸಮೀಕ್ಷೆಯನ್ನು ಪೂರ್ಣಗೊಳಿಸಿದ್ದು, ಜಿಲ್ಲೆಯಲ್ಲಿ ಎಲ್ಲೂ ಅನೈರ್ಮಲ್ಯ ಶೌಚಾಲಯ ಕಂಡುಬಂದಿಲ್ಲ ಎಂದು ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಸಮೀಕ್ಷಾ ವರದಿಯನ್ನು ಗ್ರಾಪಂನಲ್ಲಿ ಮಂಡಿಸಿ, ಅನುಮೋದನೆಯನ್ನು ಪಡೆದು ಪಂಚ ತಂತ್ರಾಂಶದಲ್ಲಿ ಮಾಹಿತಿಯನ್ನು ಭರ್ತಿ ಮಾಡಲಾಗಿದ್ದು, ಸಮೀಕ್ಷಾ ವರದಿಯ ಪ್ರಕಾರ ಜಿಲ್ಲೆಯಲ್ಲಿ ಯಾವುದೇ ಅನೈರ್ಮಲ್ಯ ಶೌಚಾಲಯ ಕಂಡುಬಂದಿಲ್ಲ ಎಂದು ಸಿಇಓ ಕಚೇರಿ ಪ್ರಕಟಣೆ ತಿಳಿಸಿದೆ.
Next Story





