ಯಕ್ಷಗಾನ ಕಲಾವಿದ ವಿಶ್ವನಾಥ ಗಾಣಿಗರಿಗೆ ‘ಕಾರ್ಕಡ ಶ್ರೀನಿವಾಸ ಉಡುಪ ಪ್ರಶಸ್ತಿ’

ವಿಶ್ವನಾಥ
ಕೋಟ, ಡಿ.22: ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ರಂಗನಟ, ಸಾಹಿತಿ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣಾ 2022ನೆ ಸಾಲಿನ ಪ್ರಶಸ್ತಿಗೆ ಯಕ್ಷಗಾನದ ನಡುತಿಟ್ಟಿನ ಹಾರಾಡಿ ಶೈಲಿಯ ಹಿರಿಯ ಕಲಾವಿದ ಕೋಡಿ ವಿಶ್ವನಾಥ ಗಾಣಿಗ ಅವರನ್ನು ಆಯ್ಕೆ ಮಾಡಲಾಗಿದೆ.
ಸ್ಥಾಪಕ ನಿರ್ದೇಶಕ ಎಚ್.ಶ್ರೀಧರ ಹಂದೆ, ಕಾರ್ಯಾಧ್ಯಕ್ಷ ಮಹೇಶ ಉಡುಪ, ಮಂದಾರ್ತಿ ಅಧ್ಯಕ್ಷ ಬಲರಾಮ ಕಲ್ಕೂರು, ಉಪಾಧ್ಯಕ್ಷ ಜನಾರ್ದನ ಹಂದೆ ಅವರನ್ನೊಗೊಂಡ ಸಮಿತಿಯು ಈ ಆಯ್ಕೆ ಮಾಡಿದೆ.
ಸ್ಥಾಪಕ ನಿರ್ದೇಶಕ ಎಚ್.ಶ್ರೀರಹಂದೆ,ಕಾರ್ಯ್ಯಾಕ್ಷ ಮಹೇಶ ಉಡುಪ, ಮಂದಾರ್ತಿ ಅ್ಯಕ್ಷಬಲರಾಮಕಲ್ಕೂರು,ಉಪ್ಯಾಕ್ಷ ಜನಾರ್ದನ ಹಂದೆ ಅವರನ್ನೊಳಗೊಂಡ ಸಮಿತಿಯು ಈ ಆಯ್ಕೆ ಮಾಡಿದೆ. ಕಮಲಶಿಲೆ ಮೇಳದಲ್ಲಿ ಗೆಜ್ಜೆ ಕಟ್ಟಿ, ಅಮೃತೇಶ್ವರಿ, ಸಾಲಿಗ್ರಾಮ, ಹಾಲಾಡಿ, ಸೌಕೂರು ಮೇಳಗಳಲ್ಲಿ ಹಲವು ಪಾತ್ರಗಳನ್ನು ನಿರ್ವಹಿಸಿದ ಕೋಡಿ ವಿಶ್ವನಾಥ್, ಅಟ್ಟೆ ಮುಂಡಾಸು ಕಟ್ಟುವುದರಲ್ಲಿ ದಾಖಲೆ ನಿರ್ಮಿಸಿದವರು.
ಫೆ.2ರಂದು ಕೋಟದ ಪಟೇಲರ ಮನೆಯಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೋಡಿಯವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಲಿಗ್ರಾಮ ಮಕ್ಕಳ ಮೇಳದ ಟ್ರಸ್ಟ್ ಕಾರ್ಯದರ್ಶಿ ಸುಜಯಿಂದ್ರ ಹಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





