Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸದನ ಕಲಾಪದ ಅವಧಿ ವಿಸ್ತರಣೆಗೆ ಆಡಳಿತ...

ಸದನ ಕಲಾಪದ ಅವಧಿ ವಿಸ್ತರಣೆಗೆ ಆಡಳಿತ -ಪ್ರತಿಪಕ್ಷ ಸದಸ್ಯರ ಒತ್ತಾಯ

ವಿಧಾನಸಭೆ ಅದಿವೇಶನ

ವಾರ್ತಾಭಾರತಿವಾರ್ತಾಭಾರತಿ22 Dec 2021 9:00 PM IST
share
ಸದನ ಕಲಾಪದ ಅವಧಿ ವಿಸ್ತರಣೆಗೆ ಆಡಳಿತ -ಪ್ರತಿಪಕ್ಷ ಸದಸ್ಯರ ಒತ್ತಾಯ

ಬೆಳಗಾವಿ(ಸುವರ್ಣವಿಧಾನಸೌಧ), ಡಿ. 22: ಸದನದ ನೀತಿ-ನಿಯಮಗಳನ್ನು ಬದಿಗಿಟ್ಟು ಸದಸ್ಯರು ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದ್ದು, ವಿಧಾನಸಭೆಯಲ್ಲಿ ಕೆಲಕಾಲ ಗಂಭೀರ ಚರ್ಚೆಗೆ ಗ್ರಾಸವಾಯಿತು. ಅಲ್ಲದೆ, ಕಲಾಪದ ಅವಧಿ ವಿಸ್ತರಣೆಗೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಒಕ್ಕೂರಲಿನಿಂದ ಆಗ್ರಹಿಸಿದ ಪ್ರಸಂಗಕ್ಕೆ ವಿಧಾನಸಭೆ ಸಾಕ್ಷಿಯಾಯಿತು.

ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿ ಬಳಿಕ ಶೂನ್ಯವೇಳೆಯಲ್ಲಿ ಜೆಡಿಎಸ್ ಸದಸ್ಯ ಶಿವಲಿಂಗೇಗೌಡ ಪ್ರಸ್ತಾಪಿಸಿದ ವಿಷಯಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಉತ್ತರಿಸುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಕಾನೂನು ಸಚಿವ ಮಾಧುಸ್ವಾಮಿ, ಸದನದಲ್ಲಿ ನಾವೇ ನಿಯಮಗಳನ್ನು ರೂಪಿಸಿದ್ದು, ಸದಸ್ಯರು ಅನಗತ್ಯ ವಿಚಾರಗಳನ್ನು ಪ್ರಸ್ತಾಪಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಮುಂದಿನ ದಿನಗಳಲ್ಲಿ ಅವಧಿ ವಿಸ್ತರಣೆ: ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಕಾಗೇರಿ, ಎಲ್ಲ ಸದಸ್ಯರಿಗೆ ಅವಕಾಶ ಕಲ್ಪಿಸಬೇಕು. ಹೀಗಾಗಿ ಅಧಿವೇಶನದ ಅವಧಿ ವಿಸ್ತರಣೆ ಮಾಡುವ ಅಗತ್ಯವಿದೆ. ಬಳಿಕ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಂಟಿ ಅಧಿವೇಶನ ಮತ್ತು ಬಜೆಟ್ ಅಧಿವೇಶನ ಅವಧಿ ಹೆಚ್ಚಳಕ್ಕೆ ಸರಕಾರ ಬದ್ಧ ಎಂದರು.

ಸದನ ನಿಯಮಾವಳಿಗಳ ಪ್ರಕಾರ ನಡೆದರೆ ತೊಂದರೆಯಾಗುವುದಿಲ್ಲ. ಎರಡೂ ಸದನಗಳಿಗೂ ಪರಂಪರೆ ಇದೆ. ಸದನದಲ್ಲಿ ವಿಪಕ್ಷಕ್ಕೆ ಆದ್ಯತೆ ನೀಡುವುದು ಪ್ರಜಾಪ್ರಭುತ್ವ ವ್ಯವಸ್ಥೆ. ಜೊತೆಗೆ ಆಯಾ ಪಕ್ಷಗಳ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಲೋಕಸಭೆ ಮಾದರಿಯಲ್ಲಿ ಕಾಲಮಿತಿ ನಿಗದಿಪಡಿಸುವುದು ಸೂಕ್ತ ಎಂದು ಅವರು ಸಲಹೆ ನೀಡಿದರು.

ಸದನ ಕಲಾಪದ ಗಂಭೀರತೆ ಅರಿಯದೆ ಸದಸ್ಯರು ಮನೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಒಬ್ಬ ಶಾಸಕರು ಪ್ರಸ್ತಾಪಿಸಿದಾಗ ಎಲ್ಲರೂ ಮಾತನಾಡಲು ಮುಂದಾಗುತ್ತಾರೆ. ಸದನದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಪುನರ್ ಪರಿಶೀಲಿಸಬೇಕು. ಆಗ ಅಧಿವೇಶನ ಹೆಚ್ಚು ಫಲಪ್ರದವಾಗಲು ಸಾಧ್ಯ ಎಂದು ಬೊಮ್ಮಾಯಿ ತಿಳಿಸಿದರು.

ಹೆಚ್ಚು ಅವಮಾನಕ್ಕೆ ಗುರಿಯಾಗುವುದು ಸ್ಪೀಕರ್ ಪೀಠ: ಆರಂಭದಲ್ಲಿ ಮಾತನಾಡಿದ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಆಯ್ಕೆಯಾಗಿ ನಾಲ್ಕು ವರ್ಷ ಕಳೆದರೂ ಸದಸ್ಯರು ಸದನದ ನಿಯಮಾವಳಿಗಳನ್ನು ಪಾಲನೆ ಮಾಡುತ್ತಿಲ್ಲ. ಸದಸ್ಯರು ಸಹಿ ಹಾಕಿದರೂ ಸದನಕ್ಕೆ ಬರುತ್ತಿರಲಿಲ್ಲ. ಸದನಕ್ಕೆ ಬರಲು ಆಗದಿದ್ದರೆ ಚುನಾವಣೆಗೆ ಏಕೆ ನಿಲ್ಲಬೇಕು? ಸದನ ಹಗುರವಾದ ವಿಚಾರವಲ್ಲ, ಇದು ಸರಿಯಾ? ಸದನದ ಗೌರವವನ್ನು ಕಾಪಾಡಬೇಕಿದೆ ಎಂದು ಹೇಳಿದರು.

ನಾನು ಕೆಲ ದಿನಗಳಿಂದ ಮೌನಕ್ಕೆ ಶರಣಾಗಿದ್ದೆ. ಇದೀಗ ಅನಿವಾರ್ಯ ಕಾರಣ ಮಾತನಾಡಬೇಕಿದೆ. ಉತ್ತರ ಕರ್ನಾಟಕ ಚರ್ಚೆ ಮಾಡಿದರೆ, ನೆರೆ ಎನ್ನುತ್ತಾರೆ. ನೆರೆ ಬಿಟ್ಟರೆ ಬಿಟ್ ಕಾಯಿನ್ ಪ್ರಸ್ತಾಪ ಮಾಡಲಿಲ್ಲ, ಸರಕಾರದ ಜೊತೆಗೆ ಹೊಂದಾಣಿಕೆ ಎಂಬ ಆರೋಪ ಮಾಡುತ್ತಾರೆ. ಸದನದ ಬಗ್ಗೆ ದೂಷಣೆ ಮಾಡುವವರಿಗೆ ಉತ್ತರ ನೀಡಲು ಆಗುವುದಿಲ್ಲ.  ಸಂಸದೀಯ ನಡಾವಳಿಗಳನ್ನು ಅರಿತು ಸದಸ್ಯರು ಸದನಕ್ಕೆ ಘನತೆ ಬರುವಂತೆ ನಡೆದುಕೊಳ್ಳಬೇಕು. ಮುಂದಿನ ವರ್ಷ ಚುನಾವಣೆ ಬರಲಿದೆ ಎಂದು ರಮೇಶ್ ಕುಮಾರ್ ಸಲಹೆ ಮಾಡಿದರು.

ನಮ್ಮ ಜವಾಬ್ದಾರಿ ಹೆಚ್ಚಿದೆ: ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಕಾಗೇರಿ, ಈ ವ್ಯವಸ್ಥೆಗೆ ಶಕ್ತಿ ತುಂಬಲು ನಮ್ಮ ಜವಾಬ್ದಾರಿ ಹೆಚ್ಚಿದೆ. ನಾವೆಲ್ಲರೂ ಜವಾಬ್ದಾರಿ ಮರೆತು ಅರಾಜಕತೆ ನಿರ್ಮಾಣ ಮಾಡುವುದು ಸಲ್ಲ. ನಮ್ಮ ಮುಂದಿನ ಪೀಳಿಗೆ ನಮ್ಮನ್ನು ಕ್ಷಮಿಸಲ್ಲ. ಈ ವ್ಯವಸ್ಥೆಗೆ ಇನ್ನಷ್ಟು ಶಕ್ತಿ ಕೊಡಬೇಕು ಎಂಬ ಬದ್ಧತೆ ಇದ್ದರೆ, ನಮಗೆ ನಾವೆ ಜವಾಬ್ದಾರರಾಗಬೇಕು ಎಂದು ಹೇಳಿದರು.

ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್ ಸದಸ್ಯ ಕೃಷ್ಣ ಭೈರೇಗೌಡ, ನಿಯಮಗಳ ಅನ್ವಯ ಸದನ ನಡೆಯಬೇಕು. ಆದರೆ, ಆಡಳಿತದಲ್ಲಿ ಒಂದು ರೀತಿ, ಪ್ರತಿಪಕ್ಷದಲ್ಲಿ ಮತ್ತೊಂದು ರೀತಿಯ ನಡವಳಿಕೆ ಸಲ್ಲ. ಜೊತೆಗೆ ಎಲ್ಲ ಸದಸ್ಯರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಅಧಿವೇಶನದ ಅವಧಿ ಹೆಚ್ಚಿಸಬೇಕು. ವಾರ್ಷಿಕ 60 ದಿನಗಳ ಕಾಲ ಅಧಿವೇಶನ ನಡೆಸಬೇಕೆಂದು ನಿಯಮ ರೂಪಿಸಿದ್ದರೂ, ಕೇವಲ 30-35ದಿನಗಳ ಕಾಲವೂ ಕಲಾಪ ನಡೆಯುತ್ತಿಲ್ಲ ಎಂದು ದೂರಿದರು.

ನಿಯಂತ್ರಿಸಿ: ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಸಿಎಂ ಯಡಿಯೂರಪ್ಪ, ಯಾವ ವಿಚಾರಕ್ಕೆ ಅವಕಾಶ ಕೊಡಬೇಕು, ಯಾವುದಕ್ಕೆ ಅವಕಾಶ ನೀಡಬಾರದೆಂಬ ತೀರ್ಮಾನ ಮಾಡಬೇಕಾದವರು ನೀವು(ಸ್ಪೀಕರ್) ಮತ್ತು ಸಂಸದೀಯ ಸಚಿವರು. ಕೇಳಿದವರಿಗೆಲ್ಲ ಅವಕಾಶ ಕೊಟ್ಟು, ಈ ರೀತಿಯ ಗೊಂದಲ ಸೃಷ್ಟಿಗೆ ಕಾರಣ ಯಾರು? ನೀವು ಬಿಗಿಯಾದ ನಿಲುವನ್ನು ತೆಗೆದುಕೊಳ್ಳಬೇಕು. ಉಪದೇಶ ನೀಡುವುದರಿಂದ ಪ್ರಯೋಜನ ಆಗುವುದಿಲ್ಲ ಎಂದು ತಿಳಿಸಿದರು.

‘ಸದನದಲ್ಲಿ ನಡೆಯುವ ಪ್ರಸಂಗಗಳ ಬಗ್ಗೆ ನೀವು ಮೌನ ಪ್ರೇಕ್ಷಕರಾಗಿ ಸಂತೋಷ ಪಡುವ ರೀತಿಯಲ್ಲಿ ನೀವು ಇದ್ದರೆ ಹೇಗೆ ಕಲಾಪ ನಡೆಸಲು ಸಾಧ್ಯ? ಎಲ್ಲ ಹಿರಿಯರು, ಸಚಿವರು ಹಾಗೂ ಪ್ರತಿಪಕ್ಷ ನಾಯಕರು ಹೊಣೆ. ಸ್ಪೀಕರ್ ನಿರ್ಣಯ, ಸರಿ-ತಪ್ಪಿನ ಬಗ್ಗೆ ಇದುವರೆಗೂ ಯಾರು ಮಾತಾಡಿದ್ದೀರಿ? ಹೀಗಾಗಿ ಈ ವ್ಯವಸ್ಥೆಯನ್ನು ಚೆನ್ನಾಗಿ ನಡೆಸಲು, ಹಿರಿಯರ ಮಾರ್ಗದರ್ಶನದೊಂದಿಗೆ ನಡೆಸಬೇಕು’

-ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪೀಕರ್

‘ಸಾಮಾನ್ಯರ ಅಭಿವೃದ್ಧಿ ವಿಷಯಗಳನ್ನು ಬದಿಗಿಟ್ಟು ಈ ಸದನ ರಾಜಕೀಯ ಮೇಲಾಟಕ್ಕೆ ವೇದಿಕೆಯಾಗಿದೆ. ಸ್ವರ್ಗ ಸೃಷ್ಟಿಸುವುದು ಸುಳ್ಳು. ಆಡಳಿತ ವ್ಯವಸ್ಥೆ ಸುಧಾರಣೆ, ತೆರಿಗೆ ಸೋರಿಕೆ ತಡೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಲಾಪದಲ್ಲಿ ಚರ್ಚೆಯಾಗಿಲ್ಲ, ಯಾರೂ ಅಸಹಾಯಕರಾಗಬೇಕಿಲ್ಲ. ಜನರ ದೃಷ್ಟಿಯಲ್ಲಿ ನಗೆಪಾಟಲಿಗೆ ಈಡಾಗಬೇಕಾಗುತ್ತದೆ. ಈ ಸದನದ ಇತಿಹಾಸಕ್ಕೆ ಏಳ್ಳು ನೀರು ಬಿಟ್ಟಂತೆ ಆಗಿದೆ’

-ಎ.ಟಿ.ರಾಮಸ್ವಾಮಿ ಜೆಡಿಎಸ್ ಹಿರಿಯ ಸದಸ್ಯ

'ಮುಂಬರುವ ದಿನಗಳಲ್ಲಿ ಜಂಟಿ ಅಧಿವೇಶನ, ಬಜೆಟ್ ಅಧಿವೇಶನ ಸೇರಿದಂತೆ ಅಧಿವೇಶನ ಕಲಾಪದ ಅವಧಿ ಹೆಚ್ಚಿಗೆ ನಿಗದಿಪಡಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಇದರಿಂದ ಸದನದಲ್ಲಿ ಅರ್ಥಪೂರ್ಣ ಚರ್ಚೆ ಹೆಚ್ಚಿನ ಸಮಯ ನಡೆಯಲು ಸಾಧ್ಯ. ಸದನದ ನಿಯಮಗಳನ್ನು ಪಾಲಿಸಿದರೆ ಸಮಸ್ಯೆಗೆ ಪರಿಹಾರ ಸಿಗುತ್ತದೆ’ 

-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X