Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಷುಗರ್ ಟರ್ಬೈನ್ ಯಂತ್ರ ಸಾಗಣೆ ಪ್ರಕರಣ:...

ಮೈಷುಗರ್ ಟರ್ಬೈನ್ ಯಂತ್ರ ಸಾಗಣೆ ಪ್ರಕರಣ: ಪ್ರಗತಿಪರ ಸಂಘಟನೆಗಳಿಂದ ಮೈಷುಗರ್ ಅಧ್ಯಕ್ಷರಿಗೆ ತರಾಟೆ

ವಾರ್ತಾಭಾರತಿವಾರ್ತಾಭಾರತಿ22 Dec 2021 9:04 PM IST
share
ಮೈಷುಗರ್ ಟರ್ಬೈನ್ ಯಂತ್ರ ಸಾಗಣೆ ಪ್ರಕರಣ: ಪ್ರಗತಿಪರ ಸಂಘಟನೆಗಳಿಂದ ಮೈಷುಗರ್ ಅಧ್ಯಕ್ಷರಿಗೆ ತರಾಟೆ

ಮಂಡ್ಯ, ಡಿ.22: ಸರಕಾರಿ ಸ್ವಾಮ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯಿಂದ ನಿರಾಣಿ ಷುಗರ್ಸ್ ಗುತ್ತಿಗೆ ಪಡೆದಿರುವ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗೆ(ಪಿಎಸ್‍ಎಸ್‍ಕೆ) ಸಾಗಾಣೆ ಮಾಡುತ್ತಿದ್ದ ಪ್ರಕರಣ ಮಂಗಳವಾರ ಬೆಳಕಿಗೆ ಬಂದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪಿಎಸ್‍ಎಸ್‍ಕೆ ಸಿಬ್ಬಂದಿ ಮಂಗಳವಾರ ಅನಧಿಕೃತವಾಗಿ ಮಂಡ್ಯದ ಮೈಷುಗರ್ ಕಾರ್ಖಾನೆ ಆವರಣ ಪ್ರವೇಶ ಮಾಡಿ ದುಬಾರಿ ಮೌಲ್ಯದ ಟರ್ಬೈನ್ ಗವರ್ನರ್ ಯಂತ್ರವನ್ನು ಸಾಗಾಣೆ ಮಾಡುತ್ತಿದ್ದ ವೇಳೆ ಕರವೇ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಮು, ನಗರಾಧ್ಯಕ್ಷ ಟಿ.ಕೆ.ಸೋಮಶೇಖರ್, ಇತರ ಮುಖಂಡರು ತಡೆದು ಪ್ರತಿಭಟನೆ ವ್ಯಕ್ತಪಡಿಸಿದ್ದರು.

ಈ ವಿಷಯ ತಿಳಿಯುತ್ತಿದ್ದಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತ ನಾಯಕಿ ಸುನಂದಾ ಜಯರಾಂ, ರೈತಸಂಘದ ಚಂದ್ರಶೇಖರ್ ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ನಾಗೇಂದ್ರ, ಸಿಪಿಎಂನ ಟಿ.ಎಲ್.ಕೃಷ್ಣೇಗೌಡ, ಸಿ.ಕುಮಾರಿ, ಟಿ.ಯಶವಂತ್, ಕನ್ನಡಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಇತರೆ ಪ್ರಗತಿಪರ ಸಂಘಟನೆಗಳ ಮುಖಂಡರು ಕಾರ್ಖಾನೆಗೆ ದಾವಿಸಿ ಮೈಷುಗರ್ ಅಧ್ಯಕ್ಷ ಶಿವಲಿಂಗೇಗೌಡ ಅವರನ್ನು ತರಾಟೆಗೆ ತೆಗೆದುಕೊಂಡರು.

ಮೈಷುಗರ್ ಕಂಪನಿಯ ಸಹವಿದ್ಯುತ್ ಘಟಕದ ಟರ್ಬೈನ್ ಯಂತ್ರವನ್ನು ನಿರಾಣಿ ಷುಗರ್ಸ್‍ನ ಪಿಎಸ್‍ಎಸ್‍ಕೆಗೆ ಸಾಗಿಸಲು ಆ ಕಾರ್ಖಾನೆಯ ಸಿಬ್ಬಂದಿ ಶರಣಬಸಪ್ಪ ಎಂಬಾತನಿಗೆ ಸಹಕರಿಸಿದ ಮೈಷುಗರ್ ಕಾರ್ಖಾನೆಯ ಪ್ರಕಾಶ್ ಎಂಬ ಅಧಿಕಾರಿ ವಿರುದ್ಧ ಪೊಲೀಸರಿಗೆ ದೂರು ನೀಡಬೇಕು ಎಂದು ಅವರು ಅಧ್ಯಕ್ಷರಿಗೆ ಒತ್ತಾಯಿಸಿದರು.

ಮೈಷುಗರ್ ಕಾರ್ಖಾನೆ ಆರಂಭಕ್ಕೆ ಸರಕಾರ ಹಸಿರುನಿಶಾನೆ ತೋರಿಸಿದ್ದರೂ ತಾವು ಆ ನಿಟ್ಟಿನಲ್ಲಿ ಯಾವುದೇ ಕ್ರಮವಹಿಸಿಲ್ಲವೇಕೆ? ಎಂದು ಅಧ್ಯಕ್ಷರನ್ನು ಪ್ರಶ್ನಿಸಿದ ಅವರು, ಕಾರ್ಖಾನೆಯಲ್ಲಿರುವ ಯಂತ್ರೋಪಕರಣ ಸೇರಿದಂತೆ ಪ್ರತಿಯೊಂದು ವಸ್ತುಗಳನ್ನು ಕಾಪಾಡಬೇಕಾದ ಜವಾಬ್ಧಾರಿ ನಿಮ್ಮ ಮೇಲಿದೆ. ಜತೆಗೆ ಕಾರ್ಖಾನೆ ಆರಂಭಕ್ಕೆ ಕ್ರಮವಹಿಸಬೇಕು ಎಂದು ಅವರು ಅಧ್ಯಕ್ಷರಿಗೆ ತಾಕೀತು ಮಾಡಿದರು.

ಯಂತ್ರ ನೀಡುವಂತೆ ನನಗೆ ಪಿಎಸ್‍ಎಸ್‍ಕೆಯಿಂದ ಯಾವುದೇ ಪತ್ರ ಬಂದಿಲ್ಲ. ನನಗೆ ತಿಳಿಯದೇ ಇದು ನಡೆದು ಹೋಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿ ತನಿಖೆಗೆ ಕ್ರಮವಹಿಸುವೆ. ಕಾರ್ಖಾನೆಯ ವಸ್ತುಗಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವೆ ಎಂದು ಅಧ್ಯಕ್ಷ ಶಿವಲಿಂಗೇಗೌಡ ಭರವಸೆ ನೀಡಿದರು.

ಸಮಗ್ರ ತನಿಖೆಗೆ ಮಾಜಿ ಅಧ್ಯಕ್ಷರ ಆಗ್ರಹ

ಮೈಷುಗರ್ ಕಾರ್ಖಾನೆಯ ಯಂತ್ರ ಸಾಗಾಣೆ ಕುರಿತ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಬೇಕು. ಕಾರ್ಖಾನೆ ಅಧ್ಯಕ್ಷರು, ಎಂಡಿ, ಆಡಳಿತ ಮಂಡಳಿ, ಪಿಎಸ್‍ಎಸ್‍ಕೆ ಗುತ್ತಿಗೆ ಪಡೆದಿರುವ  ನಿರಾಣಿ ಷುಗರ್ಸ್ ಮುಖ್ಯಸ್ಥ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರನ್ನು ಪ್ರಕರಣದಲ್ಲಿ ಹೊಣೆಗಾರರನ್ನಾಗಿ ಮಾಡಬೇಕು. ಪ್ರಕರಣವನ್ನು ವಿಪಕ್ಷ ನಾಯಕರು ಸದನದಲ್ಲಿ ಪ್ರಸ್ತಾಪಿಸಬೇಕು. ಮುರುಗೇಶ್ ನಿರಾಣಿ ರಾಜೀನಾಮೆಗೆ ಆಗ್ರಹಿಸಬೇಕು ಎಂದು ಮೈಸೂರು ಸಕ್ಕರೆ ಕಾರ್ಖಾನೆ(ಮೈಷುಗರ್) ಮಾಜಿ ಅಧ್ಯಕ್ಷರುಗಳ ವೇದಿಕೆ ಸಂಚಾಲಕರಾದ ಸಿದ್ದರಾಮೇಗೌಡ, ಹಾಲಹಳ್ಳಿ ರಾಮಲಿಂಗಯ್ಯ ಹಾಗೂ ಬಿ.ಸಿ.ಶಿವಾನಂದ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X