ಪತ್ನಿ, ಮಗಳಿಗೆ ಕೊರೋನ: ರ‍್ಯಾಲಿಯಿಂದ ದೂರ ಉಳಿದ ಅಖಿಲೇಶ್ ಯಾದವ್

ಲಕ್ನೊ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪಶ್ಚಿಮ ಉತ್ತರ ಪ್ರದೇಶದಲ್ಲಿ ಗುರುವಾರ ತಮ್ಮ ರ್ಯಾಲಿಯನ್ನು ರದ್ದುಗೊಳಿಸಿದ್ದಾರೆ. ಯಾದವ್ ಅವರ ಪತ್ನಿ ಹಾಗೂ ಪುತ್ರಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳಲ್ಲಿ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಇರುವುದಾಗಿ ಹೇಳಿದ್ದಾರೆ.
ಯಾದವ್ ಅವರು ತಮ್ಮ ಕೋವಿಡ್ ನೆಗೆಟಿವ್ ವರದಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಕುಟುಂಬ ಸದಸ್ಯರು ಸೋಂಕಿಗೆ ಒಳಗಾಗಿರುವುದರಿಂದ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವಿರುತ್ತೇನೆ ಎಂದು ಹೇಳಿದರು.
ಅವರು ತಮ್ಮ ಟ್ವೀಟ್‌ನಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತರಿಗೆ ಶುಭ ಹಾರೈಸಿದ್ದಾರೆ ಹಾಗೂ ರಾಷ್ಟ್ರೀಯ ಲೋಕದಳದೊಂದಿಗೆ ಜಂಟಿ ರ್ಯಾಲಿಯಲ್ಲಿ ಪೂರ್ಣ ಹುರುಪಿನಿಂದ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
Next Story





