Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧಾರ್ಮಿಕ ಚಟುವಟಿಕೆ, ಹಬ್ಬ, ಆಚರಣೆಗಳಲ್ಲಿ...

ಧಾರ್ಮಿಕ ಚಟುವಟಿಕೆ, ಹಬ್ಬ, ಆಚರಣೆಗಳಲ್ಲಿ ಸ್ವಯಂ ನಿಯಂತ್ರಣ ಪಾಲಿಸಿ: ದ.ಕ. ಜಿಲ್ಲಾಧಿಕಾರಿ ಸೂಚನೆ

"ಜಿಲ್ಲೆಯಲ್ಲಿ 1.15 ಲಕ್ಷ ಮಂದಿ ಇನ್ನೂ ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ"

ವಾರ್ತಾಭಾರತಿವಾರ್ತಾಭಾರತಿ23 Dec 2021 3:08 PM IST
share
ಧಾರ್ಮಿಕ ಚಟುವಟಿಕೆ, ಹಬ್ಬ, ಆಚರಣೆಗಳಲ್ಲಿ ಸ್ವಯಂ ನಿಯಂತ್ರಣ ಪಾಲಿಸಿ: ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಡಿ.23: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿದ್ದರೂ, ಜನರು ಹಬ್ಬ, ಧಾರ್ಮಿಕ ಚಟುವಟಿಕೆ ಸೇರಿದಂತೆ ಜನ ಸೇರುವ ಕಾರ್ಯಕ್ರಮಗಳಲ್ಲಿ ಸ್ವಯಂ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸದ್ಯಕ್ಕೆ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 0.26ರಷ್ಟಿದೆ, ಕೋವಿಡ್ ಪ್ರಕರಣ ಇಳಿಕೆಯಾಗಿದೆ, 35 ಮಂದಿ ಮಾತ್ರವೇ ಆಸ್ಪತ್ರೆಯಲ್ಲಿದ್ದಾರೆ, ಒಟ್ಟು ಸಕ್ರಿಯ ಪ್ರಕರಣ 164 ಇದೆ, ಹಾಗಿದ್ದರೂ ಒಮೈಕ್ರಾನ್ ಪ್ರಭೇದದ ವೈರಸ್ ತೀರಾ ವೇಗವಾಗಿ ಪ್ರಸರಿಸುವ ಕಾರಣದಿಂದ ಜನರು ಮೈಮರೆಯದೆ ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸುವುದು, ಕಾರ್ಯಕ್ರಮ ಆಯೋಜಿಸುವಲ್ಲಿ ಸ್ವಯಂ ನಿಯಂತ್ರಣ ಹೇರಿಕೊಳ್ಳುವ ಅತೀ ಅಗತ್ಯ ಎಂದರು.

ಹಬ್ಬ, ಬ್ರಹ್ಮ ರಥೋತ್ಸವ, ಲಕ್ಷ ದೀಪೋತ್ಸವ, ಧಾರ್ಮಿಕ ಚಟುವಟಿಕೆಗಳು, ಕ್ರಿಸ್‌ಮಸ್ ಆಚರಣೆ, ಉರೂಸ್ ಸಂಭ್ರಮಾಚರಣೆ ನಡೆಯುತ್ತಿದ್ದು, ಸರಕಾರದ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ಹೊರಡಿಸಿರುವ ನಿರ್ದೇಶಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸಹಕರಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಕಂಡುಬಂದಿರುವ ಒಮೈಕ್ರಾನ್ ಪ್ರಕರಣಗಳ ಮೂಲ ಇನ್ನೂ ಪತ್ತೆಯಾಗಿಲ್ಲ, ಆದರೆ ಸೋಂಕಿತರೆಲ್ಲರೂ ಆರೋಗ್ಯವಾಗಿದ್ದಾರೆ, ಎಲ್ಲರಿಗೂ 10 ದಿನಗಳ ಬಳಿಕ ಎರಡು ಬಾರಿ ಆರ್‌ಟಿ-ಪಿಸಿಆರ್ ಟೆಸ್ಟ್ ಮಾಡಿಸಿ ನೆಗೆಟಿವ್ ಬಂದ ಕೂಡಲೇ ಅವರನ್ನು ಐಸೊಲೇಶನ್‌ನಿಂದ ಬಿಡುಗಡೆ ಮಾಡಲಾಗುತ್ತದೆ ಎಂದರು.

ಪ್ರಸಕ್ತ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಕೇರಳ ಮೂಲದವರು ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ರಜೆಗಾಗಿ ಊರಿಗೆ ತೆರಳುತ್ತಿದ್ದಾರೆ, ಅಂತಹವರು ಮರಳಿ ಬರುವಾಗ ಅವರು ಆರ್‌ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ತರುವುದು ಕಡ್ಡಾಯ ಮಾಡಲಾಗಿದೆ. ಅವರ ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್‌ಗಳಿಗೂ ಅವರನ್ನು ಪ್ರತ್ಯೇಕವಾಗಿ ಏಳು ದಿನ ಇರಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಲಸಿಕೆ ಅಭಿಯಾನಕ್ಕೆ ವಿನೂತನ ರೂಪು ನೀಡುವ ಉದ್ದೇಶದಿಂದ 1,75,000 ಮಕ್ಕಳಿಗೆ ಅವರ ಹೆತ್ತವರು, ಪೋಷಕರು ಲಸಿಕೆ ತೆಗೆದುಕೊಂಡಿದ್ದಾರೆಯೇ ? ಇಲ್ಲವಾದರೆ ಯಾಕಿಲ್ಲ ಎಂಬ ಪತ್ರಗಳನ್ನು ನೀಡಲಾಗಿತ್ತು, ಇದರ ಮೂಲಕ ನಮಗೆ ಕೆಲವರು ಹೆದರಿಕೆ, ಯಾವುದೋ ಕಾಯಿಲೆ ಇದ್ದ ಕಾರಣ ಜನ ಲಸಿಕೆ ತೆಗೆದುಕೊಳ್ಳದಿರುವುದು ಗೊತ್ತಾಗಿದೆ ಎಂದು ಜಿ.ಪಂ ಸಿಇಒ ಡಾ.ಕುಮಾರ್ ತಿಳಿಸಿದರು.

ಈ ವಿವರಗಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಲಾಗಿದ್ದು ಸಿಬ್ಬಂದಿ ಮೂಲಕ ಜನರ ಮನವೊಲಿಸುವ ಕೆಲಸ ಮನೆಮನೆಗೆ ತೆರಳಿ ಮಾಡಲಾಗುತ್ತಿದೆ ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಪ್ರಭಾರ ಆರೋಗ್ಯಾಧಿಕಾರಿ ಡಾ.ರಾಜೇಶ್, ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ಹಾಜರಿದ್ದರು.


*ಜೆನೋಮ್ ಸೀಕ್ವೆನ್ಸ್ ಲ್ಯಾಬ್‌ಗೆ ಯತ್ನ

ಪ್ರಸಕ್ತ  ಜಿಲ್ಲೆಯಲ ಶಂಕಿತ  ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸುತ್ತಿದ್ದು, ವರದಿ ಬರುವಾಗ ತಡವಾಗುತ್ತಿದೆ, ಅದಕ್ಕಾಗಿ ಮಂಗಳೂರಿನಲ್ಲೇ ಜೆನೋಮ್ ಸೀಕ್ವೆನ್ಸ್ ಲ್ಯಾಬ್ ಪ್ರಾರಂಭಿಸುವ ಬಗ್ಗೆ ಪ್ರಸ್ತಾವವನ್ನು ಸರಕಾರಕ್ಕೆ ಕಳುಹಿಸಲಾಗಿದೆ. ಇಲ್ಲಿ ಲ್ಯಾಬ್ ಮಾಡಿದರೆ ಅನೇಕ ಜಿಲ್ಲೆಗಳಿಗೂ ಸಹಾಯವಾಗಬಹುದು. ಇದುವರೆಗೆ ಒಮೈಕ್ರಾನ್ ಕುರಿತು 120 ಸ್ಯಾಂಪಲ್ ಕಳಿಸಿದ್ದು, ಅದರಲ್ಲಿ 33ರ ವರದಿ ಬಂದಿದೆ, 87ರ ವರದಿ ಬರುವುದು ಬಾಕಿ ಇದೆ.

-ಡಾ. ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿ, ದ.ಕ.


ದ.ಕ.: 1.15 ಲಕ್ಷ ಮಂದಿ ಇನ್ನೂ ಪ್ರಥಮ ಡೋಸ್ ಪಡೆದಿಲ್ಲ

ಕೋವಿಡ್ ಸೋಂಕಿತರ ಸಂಖ್ಯೆ, ಪಾಸಿಟಿವಿಟಿ ದರವೇನೋ ಇಳಿಯುತ್ತಿದೆ. ಆದರೆ ಒಮೈಕ್ರಾನ್‌ನಂತಹ ಸೂಕ್ಷ್ಮ ಸಂದರ್ಭದಲ್ಲಿ ನಾವಿದ್ದೇವೆ, ನಮಗೆ ಲಸಿಕೆ ಗುರಿ ಪೂರೈಸುವುದು ಈಗಿನ ಸಂದರ್ಭದಲ್ಲಿ ಅತ್ಯಗತ್ಯ. ಆದರೆ ಇನ್ನೂ ಯುವಜನತೆ ಹಾಗೂ ಒಂದು ವರ್ಗದ ಜನ ಕೋವಿಡ್ ಮೊದಲ ಡೋಸ್ ಹಾಕಿಸಲು ಮುಂದೆ ಬರುತ್ತಿಲ್ಲ. ಜಿಲ್ಲೆಯಲ್ಲಿ ಸುಮಾರು 1.15 ಲಕ್ಷ ಜನರು ಇನ್ನೂ ಪ್ರಥಮ ಡೋಸ್ ಪಡೆದಿಲ್ಲ. ಕೇರಳ ಗಡಿಭಾಗವಾದ ಉಳ್ಳಾಲ ಸೇರಿದಂತೆ ಕೆಲವು ಭಾಗದಲ್ಲಿ ಕೆಲ ಸಮುದಾಯದ ಜನರಿಂದ ಲಸಿಕೆಗೆ ನಿರಾಸಕ್ತಿಯಿದ್ದು, ಈ ಬಗ್ಗೆ ಸ್ಥಳೀಯ ಶಾಸಕರು, ದರ್ಗಾ ಆಡಳಿತ ಸಮಿತಿಗೂ ಮನವರಿಕೆ ಮಾಡಲಾಗಿದೆ. ಉಳ್ಳಾಲ ದರ್ಗಾದಲ್ಲಿ ಉರೂಸ್ ಕೂಡಾ ನಡೆಯಲಿರುವುದರಿಂದ ಕೇರಳದ ಭಾಗದಿಂದಲೂ ಅಲ್ಲಿಗೆ ಹೆಚ್ಚಾಗಿ ಯಾತ್ರಿಕರು ಬರುತ್ತಾರೆ. ಹಾಗಾಗಿ ಅಲ್ಲಿನ ಜನರು ಲಸಿಕೆ ಪಡೆಯುವುದು ಅಗತ್ಯವಾಗಿದೆ. ಆದ್ಯತೆ ಮೇರೆಗೆ ಅಲ್ಲಿ ಲಸಿಕೆ ಹಾಕಿಸುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X