Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಸರ್ಕಾರದ ಕಾಯ್ದೆಗೂ, ನಾವಿದ್ದಾಗ...

ಬಿಜೆಪಿ ಸರ್ಕಾರದ ಕಾಯ್ದೆಗೂ, ನಾವಿದ್ದಾಗ ರೂಪಿಸಿದ್ದ ಕಾಯ್ದೆಗೂ ಅಜಗಜಾಂತರ ವ್ಯತ್ಯಾಸಗಳಿವೆ: ಸಿದ್ದರಾಮಯ್ಯ

''ಈ ಕಾನೂನಿನ ಹಿಂದೆ ಕಾಣದ ಕೈಗಳಿದೆ''

ವಾರ್ತಾಭಾರತಿವಾರ್ತಾಭಾರತಿ23 Dec 2021 4:50 PM IST
share
ಬಿಜೆಪಿ ಸರ್ಕಾರದ ಕಾಯ್ದೆಗೂ, ನಾವಿದ್ದಾಗ ರೂಪಿಸಿದ್ದ ಕಾಯ್ದೆಗೂ ಅಜಗಜಾಂತರ ವ್ಯತ್ಯಾಸಗಳಿವೆ: ಸಿದ್ದರಾಮಯ್ಯ

ಬೆಳಗಾವಿ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೂಪಿಸಲಾಗಿದ್ದ ಮತಾಂತರ ನಿಷೇಧ ಕಾಯ್ದೆಯ ಕರಡನ್ನು ಸಚಿವ ಸಂಪುಟದ ಮುಂದೆ ತರುವಂತೆ ನಾನು ಸಹಿ ಹಾಕಿದ್ದೆ. ಆದರೆ ಬಿಜೆಪಿ ಸರ್ಕಾರದ ಕಾಯ್ದೆಗೂ, ನಾವಿದ್ದಾಗ ರೂಪಿಸಿದ್ದ ಕಾಯ್ದೆಗೂ ಅಜಗಜಾಂತರ ವ್ಯತ್ಯಾಸಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ, ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ ಎಂದು ತಿಳಿಸಿದರು.

ಮತ್ತೊಂದು ಪ್ರಮುಖ ಅಂಶವೆಂದರೆ ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಹೇಗಾಗುತ್ತದೆ? ಎಂದು ಪ್ರಶ್ನಿಸಿದರು. 

ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಇದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರಲು ನಾವು ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ ಎಂದರು.

ಮತಾಂತರ ನಿಷೇಧ ಕುರಿತ ಈ ಹಿಂದಿನ ಕರಡುಪ್ರತಿಗೂ, ಈಗಿನ ಮಸೂದೆಗೂ ಇರುವ ಪ್ರಮುಖ ವ್ಯತ್ಯಾಸಗಳೆಂದರೆ.
ಮೊದಲನೆಯದು ಹಿಂದಿನ ಕರಡು ಪ್ರತಿಯ ನಿಯಮ 3ರಲ್ಲಿ   ವಿವಾಹ ಎಂಬ ಪದ ಬಳಕೆ ಇರಲಿಲ್ಲ.
ಬಿಜೆಪಿ ಯವರು ತಮ್ಮ ಕಾಯ್ದೆಯಲ್ಲಿ ವಿವಾಹವನ್ನು ಹೊಸದಾಗಿ ಸೇರಿಸಿದ್ದಾರೆ ಎಂದು ಹೇಳಿದರು.

ಭಾರತೀಯ ದಂಡ ಸಂಹಿತೆಯ ಪ್ರಕಾರ ಸಾಕ್ಷಾಧಾರಗಳ ಕೊರತೆ ಕಂಡುಬಂದರೆ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಈ ಹೊಸ ಕಾಯ್ದೆಯ ನಿಯಮ 12 ರ ಪ್ರಕಾರ ಸಾಕ್ಷಾಧಾರ ಕೊರತೆ ಇದ್ದರೂ ಅದು ದೂರುದಾರನಿಗೆ ಅನುಕೂಲ ಮಾಡಿಕೊಡಲಿದೆ. ಹೀಗಾಗಿ ಕಾಯ್ದೆಯು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ ಎಂದರು.

ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ? ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಅಲ್ಲಿನ ಹೈಕೋರ್ಟ್, ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ತಿಳಿಸಿದರು.

ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೊ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಸರ್ಕಾರವೇ ಬಹಿರಂಗಪಡಿಸಬೇಕು? ಎಂದು ಒತ್ತಾಯಿಸಿದರು. 

ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ?
ಇದೇ ಕಾರಣಕ್ಕೆ ನಾವು ವಿರೋಧ ಮಾಡುತ್ತಿದ್ದೇವೆ ಎಂದರು. 

ದೇಶದಲ್ಲಿ ಶತಮಾನಗಳ ಹಿಂದಿನಿಂದಲೂ ಮತಾಂತರ ನಡೆದುಕೊಂಡು ಬಂದಿದೆ. ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದ ಪಂಪ, ರನ್ನರು ಜೈನ ಧರ್ಮಕ್ಕೆ ಮತಾಂತರ ಗೊಂಡರು. ಸಾಮ್ರಾಟ್ ಆಶೋಕ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಹೋಗಿಲ್ಲವೇ?
ಇದಕ್ಕೆ ಕಾರಣವೇನು ಎಂಬುದು ಯಾರಿಗೂ ತಿಳಿಯದ ವಿಷಯವಲ್ಲ.

ಕಾಯಕಯೋಗಿ ಬಸವೇಶ್ವರರು ಬ್ರಾಹ್ಮಣರಾಗಿ ಹುಟ್ಟಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿಲ್ಲವೇ? ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಲಕ್ಷಾಂತರ ಜನರ ಜೊತೆಗೆ ಬೌದ್ಧ ಧರ್ಮಕ್ಕೆ ಮತಾಂತರ ಆಗಿಲ್ಲವೇ? 
ಇವರ‌್ಯಾರು ಅಧಿಕಾರವೋ ಅಥವಾ ಇನ್ಯಾವುದೋ ಕಾರಣಕ್ಕೆ ಮತಾಂತರಗೊಂಡವರಲ್ಲ ಎಂದು ಉಲ್ಲೇಖಿಸಿದರು.

ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. 2001 ಮತ್ತು 2011 ರ ಜನಗಣತಿಯನ್ನು ನೋಡಿದರೆ ಸತ್ಯ ಏನೆಂದು ಅರಿವಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X