Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಗರಿಕರ ಧಾರ್ಮಿಕ ಹಕ್ಕು ಸಂರಕ್ಷಣೆಗೆ...

ನಾಗರಿಕರ ಧಾರ್ಮಿಕ ಹಕ್ಕು ಸಂರಕ್ಷಣೆಗೆ ವಿಧೇಯಕ ತರಲಾಗಿದೆ: ಬಿ.ಎಸ್.ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ23 Dec 2021 7:35 PM IST
share
ನಾಗರಿಕರ ಧಾರ್ಮಿಕ ಹಕ್ಕು ಸಂರಕ್ಷಣೆಗೆ ವಿಧೇಯಕ ತರಲಾಗಿದೆ: ಬಿ.ಎಸ್.ಯಡಿಯೂರಪ್ಪ

ಬೆಳಗಾವಿ, ಡಿ.23: ಸಂವಿಧಾನದ 25ನೆ ಪರಿಚ್ಛೇದದಲ್ಲಿ ನಾಗರಿಕರ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಖಾತ್ರಿಗೊಳಿಸಲಾಗಿದೆ. ದೇಶದ ಯಾವುದೆ ವ್ಯಕ್ತಿ, ತಮ್ಮ ಆಯ್ಕೆಯ ಧರ್ಮ ಆಚರಿಸಲು, ಪ್ರಸಾರಿಸಲು ಮುಕ್ತ ಅವಕಾಶವಿದೆ. ಈ ವಿಧೇಯಕದಲ್ಲಿ ಸಂವಿಧಾನ ದತ್ತವಾದ ಧಾರ್ಮಿಕ ಹಕ್ಕು ಸಂರಕ್ಷಿಸಲಾಗಿದೆಯೇ ಹೊರತು, ಯಾವುದೆ ರೀತಿಯ ದಾಳಿ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗುರುವಾರ ವಿಧಾನಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸ್ನೇಹಿತರು ಗೊಂದಲದಲ್ಲಿರುವಂತೆ ಅವರಿಗೆ ತಪ್ಪು ಕಲ್ಪನೆಯಿದೆ. ನಿನ್ನೆ ಸದನದಲ್ಲಿ ವಿಧೇಯಕ ಮಂಡಿಸಿದ ತರುವಾಯ ಅವರ ವರ್ತನೆ ಗಮನಿಸಿದರೆ ಅವರಲ್ಲಿ ಗೊಂದಲ ಇರುವುದು ಖಚಿತ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಈ ಪ್ರಸ್ತಾವಕ್ಕೆ ತಮ್ಮದೇ ಆದ ರೀತಿಯಲ್ಲಿ ಅನುಮತಿ ನೀಡುವ ಮಟ್ಟಕ್ಕೆ ಹೋಗಿದ್ದರು. ಕ್ಯಾಬಿನೆಟ್‍ಗೆ ಹೋಗಿರಲಿಲ್ಲ. ಮತಾಂತರ ಆಗಬಾರದು ಎಂಬುದು ನಮ್ಮ ಉದ್ದೇಶ. ಈ ದೇಶದಲ್ಲಿ ಕ್ರೈಸ್ತರು, ಮುಸ್ಲಿಮರು, ಹಿಂದೂಗಳು ತಮ್ಮದೆ ಆದ ರೀತಿಯಲ್ಲಿ ಧಾರ್ಮಿಕ ಆಚರಣೆಗಳನ್ನು ಅನುಸರಿಸಲು ಮುಕ್ತರಾಗಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಇಲ್ಲಿರುವ ಪ್ರಶ್ನೆ ಬಲವಂತದ ಮತಾಂತರ ಬೇಡ ಅನ್ನೋದು. ಸಿದ್ದರಾಮಯ್ಯ ತರಲು ಮುಂದಾಗಿದ್ದ ಕಾನೂನಿಗೆ ನಾವು ಕೆಲವು ಮಾರ್ಪಾಡು ಮಾಡಿ ತಂದಿರುವುದು ಅವರ ಆಕ್ಷೇಪಕ್ಕೆ ಕಾರಣ ಇರಬಹುದು. ಆದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಧೇಯಕದ ಪ್ರತಿಯನ್ನು ಹರಿದು ಬಿಸಾಕಿದರು ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದ 400 ಎಂಪಿಗಳು ಇರುತ್ತಿದ್ದರು, ಈಗ 46ಕ್ಕೆ ಬಂದಿದ್ದಾರೆ. ಮಸೂದೆಯನ್ನು ಹರಿದು ಬಿಸಾಕಿದಂತೆ, ದೇಶದ ಜನ ಕಾಂಗ್ರೆಸ್ ಪಕ್ಷವನ್ನು ಬಿಸಾಕುತ್ತಾರೆ. ಅದಕ್ಕೆ ಅವಕಾಶ ಕೊಡಬೇಡಿ. ನಾವು ಮುಸ್ಲಿಮರ, ಕ್ರೈಸ್ತರ ವಿರೋಧಿಯಲ್ಲ. ಬಲವಂತದಿಂದ ಆಗುತ್ತಿರುವ ಮತಾಂತರವನ್ನು ತಡೆಯಲು ಕಠಿಣವಾದ ಕಾನೂನು ತೆಗೆದುಕೊಂಡು ಬಂದಿದ್ದೇನೆ. ಇದನ್ನು ಸರ್ವಾನುಮತದಿಂದ ಪಾಸ್ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X