ದ.ಕ. ಜಿಲ್ಲೆ: 12 ಮಂದಿಗೆ ಕೋವಿಡ್ ಪಾಸಿಟಿವ್
![ದ.ಕ. ಜಿಲ್ಲೆ: 12 ಮಂದಿಗೆ ಕೋವಿಡ್ ಪಾಸಿಟಿವ್ ದ.ಕ. ಜಿಲ್ಲೆ: 12 ಮಂದಿಗೆ ಕೋವಿಡ್ ಪಾಸಿಟಿವ್](https://www.varthabharati.in/sites/default/files/images/articles/2021/12/23/318728-1640271162.jpg)
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಗುರುವಾರ 12 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 17 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.18 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 1,16,247 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,387 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,700 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 160 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 91,265 ಪ್ರಕರಣದಾಖಲಿಸಿ, 1,10,20,770 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story