ಮೂಡುಬೆಳ್ಳೆ: ಡಿ.26ರಂದು ಗಿರಿಜನ ಉತ್ಸವ
ಉಡುಪಿ, ಡಿ.23: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗಿರಿಜನ ಉತ್ಸವ-2021 ಗಿರಿಜನ ಉಪಯೋಜನೆಯಡಿ ಸಾಂಸ್ಕೃತಿಕ ಕಾರ್ಯಕ್ರಮವು ಡಿ.26ರಂದು ಸಂಜೆ 5 ಗಂಟೆಗೆ ಕಾಪು ತಾಲೂಕು ಮೂಡುಬೆಳ್ಳೆಯ ಬೆಳ್ಳೆ ಚರ್ಚ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬೆಳ್ಳೆ ಗ್ರಾಪಂ ಅಧ್ಯಕ್ಷ ಸುಧಾಕರ ಪೂಜಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.
Next Story





