Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ರಿಸ್‌ಮಸ್ ಆಚರಣೆ ಮಾನವೀಯತೆಯನ್ನು...

ಕ್ರಿಸ್‌ಮಸ್ ಆಚರಣೆ ಮಾನವೀಯತೆಯನ್ನು ಜೀವಂತಗೊಳಿಸಲಿ: ಉಡುಪಿ ಬಿಷಪ್

ವಾರ್ತಾಭಾರತಿವಾರ್ತಾಭಾರತಿ23 Dec 2021 9:47 PM IST
share
ಕ್ರಿಸ್‌ಮಸ್ ಆಚರಣೆ ಮಾನವೀಯತೆಯನ್ನು ಜೀವಂತಗೊಳಿಸಲಿ: ಉಡುಪಿ ಬಿಷಪ್

ಉಡುಪಿ, ಡಿ.23: ಸ್ವರ್ಗ ಭುವಿಗಳಿಗೆ ಮಹದಾನಂದವನ್ನು ತಂದ ಸುದಿನವೇ ಕ್ರಿಸ್‌ಮಸ್. ದೇವಪುತ್ರ ಈ ಲೋಕದಲ್ಲಿ ಮುಗ್ಧ ಮಗುವಾಗಿ ಜನಿಸಿ, ಪಾಪ ವೊಂದನ್ನು ಬಿಟ್ಟು ಇನ್ನೆಲ್ಲದರಲ್ಲಿಯೂ ನಮ್ಮಂತೆಯೇ ಆಗಬಯಸಿದ ಯೇಸು ಸ್ವಾಮಿ ಬಡವರಿಗೆ ಆಶಾಕಿರಣವಾಗಿ, ದುಃಖಿತರಿಗೆ ಸಾಂತ್ವನವಾಗಿ, ದೀನ ದಲಿತರ ಸಂಗಾತಿಯಾಗಿ, ನೊಂದವರ ಭರವಸೆಯಾಗಿ, ಬಹಿಷ್ಕೃತರ ಗೆಳೆಯನಾಗಿ ಬಂದರು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ತಮ್ಮ ಕ್ರಿಸ್ಮ್ ಹಬ್ಬದ ಸಂದೇಶದಲ್ಲಿ ತಿಳಿಸಿದ್ದಾರೆ.

ಕಳೆದೆರಡು ವರ್ಷಗಳಿಂದ ಇಡೀ ವಿಶ್ವವೇ ಕೊರೋನ ಸೋಂಕಿನ ಅಟ್ಟಹಾಸಕ್ಕೆ ನಲುಗಿ ಹೋಗಿದೆ. ಸಾವಿರಾರು ಜನರು ಈ ಸೋಂಕಿಗೆ ಒಳಗಾಗಿದ್ದಾರೆ. ಲಕ್ಷಾಂತರ ಕುಟುಂಬಗಳು ನಿರುದ್ಯೋಗ ಹಾಗೂ ಬಡತನಕ್ಕೆ ಬಲಿಯಾಗಿವೆ. ಬಸವಳಿದ ಈ ಲೋಕಕ್ಕೆ ಹೊಸ ಜೀವವನ್ನು ನೀಡುವ ಅಗತ್ಯವಿದೆ. ಕ್ರಿಸ್ತರ ಜನನದ ಕ್ರಿಸ್‌ಮಸ್ ಹಬ್ಬದ ಆಚರಣೆಯು ನಮ್ಮಲ್ಲಿ ಮಾನವೀಯತೆಯನ್ನು ಜೀವಂತಗೊಳಿಸಬೇಕು. ಮನುಷ್ಯನಿಗೆ ಮಾನವೀಯತೆಯು ಮರೀಚಿಕೆಯಾಗದೆ ಸ್ವಾತಂತ್ರ, ಶಾಂತಿ, ಭಾವೈಕ್ಯತೆ, ಕ್ಷಮೆ, ಪ್ರೀತಿ, ಸಹನೆ, ಸಂಯಮ ಮತ್ತು ನೈತಿಕತೆ ಯನ್ನು ತನ್ನ ಉಸಿರಾಗಿಬೇಕಿದೆ ಎಂದು ಅವರು ಹೇಳಿದರು.

ಕ್ರಿಸ್‌ಮಸ್ ಶಾಂತಿ-ಪ್ರೀತಿಯ ಉತ್ಸವ. ಈ ಉತ್ಸವವನ್ನು ಯೋಗ್ಯವಾಗಿ ಆಚರಿಸಲು ಶಕ್ತರಲ್ಲದ ಸಾವಿರಾರು ಜನರು ಮತ್ತು ಕುಟುಂಬಗಳು ನಮ್ಮ ನೆರೆಹೊರೆಯಲ್ಲಿವೆ. ಕ್ರಿಸ್‌ಮಸ್‌ನ ಭಾವವಾದ ಶಾಂತಿ, ಪ್ರೀತಿಯು ಹಂಚಿಕೊಳ್ಳು ವುದರಲ್ಲಿ ಕಂಡುಬರಬೇಕು. ನಮ್ಮಲ್ಲಿ ಇರುವ ಸಂಪನ್ಮೂಲಗಳನ್ನು ಇಲ್ಲದವ ರೊಡನೆ ಕಿಂಚಿತ್ತಾದರೂ ಹಂಚಿಕೊಂಡರೆ ಕ್ರಿಸ್‌ಮಸ್‌ನ ಮೂಲ ಅರ್ಥ ನಮಗೆ ಸ್ಪಷ್ಟವಾಗಬಹುದು.

ಶಾಂತಿ ದೇವನೊಲಿದ ಮನುಜರಿಗೆ ಎಂಬ ದೇವ ದೂತರ ಹಾಡು ನಮಗೆ ಅರ್ಥಪೂರ್ಣವಾಗಿ ಕೇಳಿಸಲಿ. ಈ ವರ್ಷದಕ್ರಿಸ್‌ಮಸ್ ನಮಗೆ ಸೋಂಕಿನ ಭೀತಿಯಿಂದ, ಅನಾರೋಗ್ಯದಿಂದ, ನಿರಾಶೆ-ದುಖಗಳಿಂದ ಬಿಡುಗಡೆಗೊಳಿಸಿ ಸ್ವರ್ಗದ ಶಾಂತಿ ಪ್ರೀತಿಯಿಂದ ನಮ್ಮನ್ನು ತುಂಬಲಿ. ಸಮಸ್ತ ಸಹೋದರ ಸಹೋದರಿಯರಿಗೆ ಕ್ರಿಸ್‌ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X