ಮ್ಯಾನುಯಲ್ ಸ್ಕಾವೆಂಜಿಂಗ್ ನಡೆಸಿದರೆ, ಕಾನೂನು ಕ್ರಮ ಜರುಗಿಸಲಾಗುವುದು: ಎಂ.ಶಿವಣ್ಣ
ಬೆಂಗಳೂರು, ಡಿ.23: 2013ರಿಂದ ಮ್ಯಾನುಯಲ್ ಸ್ಕಾವೆಂಜಿಂಗ್ ಅನ್ನು ನಿಷೇಧಿಸಿದ್ದರೂ, ಇಂತಹ ಅಮಾನುಷ ಘಟನೆಗಳು ನಡೆಯುತ್ತಿವೆ. ಆದುದರಿಂದ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ತಿಳಿಸಿದ್ದಾರೆ.
ಗುರುವಾರ ಚಿನ್ಮಯ ಮಿಷನ್ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಮ್ಯಾನುಯಲ್ ಸ್ಕಾವೆಂಜಿಂಗ್‍ನಂತಹ ಅಮಾನುಷ ಘಟನೆ ನಡೆದಿದೆ ಎಂದು ದೂರು ನೀಡಲಾಗಿದೆ. ಆದುದರಿಂದ ಆಡಳಿತ ಮಂಡಳಿ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಿ ಕಾನೂನು ಕ್ರಮ ವಹಿಸಲಾಗುವುದು ಎಂದರು.
ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿದ್ದರೂ, ಮ್ಯಾನುಯಲ್ ಸ್ಕಾವೆಂಜಿಂಗ್ ಘಟನೆಗಳು ನಡೆಯುತ್ತಿರುವುದು ತುಂಬಾ ದುಃಖದ ವಿಷಯವಾಗಿದೆ. ಹಲಾವಾರು ವಿಶೇಷತೆಗಳಿಗೆ ಹೆಸರಾಗಿರುವ ಬೆಂಗಳೂರು ನಗರದಲ್ಲಿ ಇಂತಹ ದುರ್ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದರು.
Next Story





