ಡಿಸೆಂಬರ್ 25ರಿಂದ ಮೈಸೂರು ಅರಮನೆ ಆವರಣದಲ್ಲಿ ಫಲ ಪುಷ್ಪ ಪ್ರದರ್ಶನ

ಮೈಸೂರು,ಡಿ.23: ಮೈಸೂರು ಅರಮನೆ ಮಂಡಳಿಯ ವತಿಯಿಂದ ಡಿಸೆಂಬರ್ 25, 26, 27 ಹಾಗೂ 31 ರವರೆಗೆ ಮೈಸೂರು ಅರಮನೆ ಆವರಣದಲ್ಲಿ ಫಲ ಪುಷ್ಪ ಪ್ರದರ್ಶನದ ಜೊತೆಗೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಡಿಸೆಂಬರ್ 25 ರಂದು ಸಂಜೆ 4.30ಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸ್ಥಳೀಯ ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸುವರು.
ಮೈಸೂರು ಮಹಾನಗರ ಪಾಲಿಕೆ ಮೇಯರ್ ಸುನಂದಾ ಪಾಲನೇತ್ರ, ಸಂಸದರುಗಳಾದ ವಿ.ಶ್ರೀನಿವಾಸಪ್ರಸಾದ್,ಪ್ರತಾಪ್ ಸಿಂಹ, ಸುಮಲತಾ ಅಂಬರೀಷ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಉಪಸ್ಥಿತರಿರುವರು.
ಡಿಸೆಂಬರ್ 25 ರಂದು ಸಂಜೆ 6-30 ರಿಂದ 7-15 ಗಂಟೆಯವರೆಗೆ ಅರಮನೆ ಫಲ ಪುಷ್ಪ ಪ್ರದರ್ಶನದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಉದ್ಘಾಟನೆ ನಡೆಯಲಿದೆ. ಸಂಜೆ 6-30 ರಿಂದ 7-15 ಗಂಟೆಯವರೆಗೆ ಖ್ಯಾತ ಹಿನ್ನಲೆ ಗಾಯಕರಾದ ವಿಜಯ ಪ್ರಕಾಶ್ ಮತು ತಂಡದವರಿಂದ ಖ್ಯಾತ ಚಲನಚಿತ್ರ ನಟರಾದ ದಿ|| ಪುನೀತ್ ರಾಜ್‍ಕುಮಾರ್ ರವರ ಗೌರವಾರ್ಥ ಗೀತ ನಮನ ಕಾರ್ಯಕ್ರಮ ನಡೆಯಲಿದೆ.
ಡಿಸೆಂಬರ್ 26 ರಂದು ಸಂಜೆ 7-00 ರಿಂದ 9-00 ಗಂಟೆಯವರೆಗೆ ಖ್ಯಾತ ಹಿನ್ನಲೆ ಗಾಯಕರಾದ ಅಜ0iÀiï ವಾರಿಯರ್,ಶ್ರೀಹರ್ಷ, ವ್ಯಾಸರಾಜ್, ಅಂಕಿತ ಕುಂಡು, ಸುನೀತಾ ಜೋಗಿ ಹಾಗೂ ದಿವ್ಯರಾಮಚಂದ್ರ ರವರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಡಿಸೆಂಬರ್ 27 ರಂದು ಸಂಜೆ 7-00 ರಿಂದ 9-00 ಗಂಟೆಯವರೆಗೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಡಾ. ಶ್ರೀ ವಿದ್ಯಾಭೂಷಣರು ಅವರಿಂದ ಗಾಯನ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಷೃತರಾದ ಗಂಜೀಫಾ ರಘುಪತಿ ಭಟ್ ಅವರಿಂದ ಚಿತ್ರಣ ಮತ್ತು ಅಂತರರಾಷ್ಟ್ರೀಯ ಕಲಾವಿದರಾದ ವಿದ್ವಾನ್ ಶ್ರೀಧರ್ ಜೈನ್ ತಂಡದಿಂದ ನೃತ್ಯವೈಭವ ಕಾರ್ಯಕ್ರಮ ನಡೆಯಲಿದೆ.
ಡಿಸೆಂಬರ್ 31 ರಂದು ರಾತ್ರಿ 11-00 ರಿಂದ 12-00 ಗಂಟೆಯವರೆಗೆ ಪೆÇಲೀಸ್ ಇಲಾಖೆ ವತಿಯಿಂದ ಕರ್ನಾಟಕ ಮತ್ತು ಆಂಗ್ಲ ಬ್ಯಾಂಡ್ ಕಾರ್ಯಕ್ರಮ ನಡೆಯಲಿದೆ. ಮಧ್ಯರಾತ್ರಿ 12-00 ರಿಂದ 12-15 ಗಂಟೆಯವರೆಗೆ ಮೈಸೂರು ಅರಮನೆ ಮಂಡಳಿಯ ವತಿಯಿಂದ ಹೊಸ ವರ್ಷಾಚರಣೆ ಯ ಪ್ರಯುಕ್ತ ಬಣ್ಣಗಳ ಚಿತ್ತಾರ ಕೂಡಿದ ಶಬ್ಥರಹಿತ ಪಟಾಕಿ ಸಿಡಿಸುವ ಕಾರ್ಯಕ್ರಮ ನಡೆಯಲಿದೆ ಹಾಗೂ ಬೊಂಬೆಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಮೈಸೂರು ದಸರಾ ಮಹೋತ್ಸವದ ನವರಾತ್ರಿ ಸಂದರ್ಭದಲ್ಲಿ ಮನೆಗಳಲ್ಲಿ ಪ್ರದರ್ಶಿಸುವ ಬೊಂಬೆಗಳನ್ನು 4 ರಿಂದ 5 ಬ್ಲಾಕ್‍ಗಳಲ್ಲಿ ಪ್ರವಾಸಿಗರು ವೀಕ್ಷಿಸಲು ಅವಕಾಶ ಮಾಡಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







