Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೊರೋನ ಭೀತಿ ನಡುವೆ ಜಿಲ್ಲೆಯಲ್ಲಿ...

ಉಡುಪಿ: ಕೊರೋನ ಭೀತಿ ನಡುವೆ ಜಿಲ್ಲೆಯಲ್ಲಿ ಭಕ್ತಿ, ಶೃದ್ದೆಯಿಂದ ಕ್ರಿಸ್ಮಸ್ ಆಚರಣೆ

ವಾರ್ತಾಭಾರತಿವಾರ್ತಾಭಾರತಿ24 Dec 2021 9:18 PM IST
share
ಉಡುಪಿ: ಕೊರೋನ ಭೀತಿ ನಡುವೆ ಜಿಲ್ಲೆಯಲ್ಲಿ ಭಕ್ತಿ, ಶೃದ್ದೆಯಿಂದ ಕ್ರಿಸ್ಮಸ್ ಆಚರಣೆ

ಉಡುಪಿ, ಡಿ.24:ಕೊರೋನ ಭೀತಿಯ ನಡುವೆಯೂ ಏಸುಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಭಕ್ತಿ, ಶ್ರದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದರು.

ಶುಕ್ರವಾರ ರಾತ್ರಿ ಜಿಲ್ಲೆಯ ಎಲ್ಲಾ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್ಮಸ್ ಗೀತೆಗಳ ಗಾಯನ ಮುಂತಾದ ಕಾರ್ಯಕ್ರಮಗಳು ಜರುಗಿದವು.
ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರಾದ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ತಮ್ಮ ಅಧಿಕೃತ ಚರ್ಚ್ ಕಲ್ಯಾಣಪುರದ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಬಲಿಪೂಜೆ ಅರ್ಪಿಸಿ ಹಬ್ಬದ ಸಂದೇಶ ನೀಡಿದರು. ಈ ವೇಳೆ ಚರ್ಚ್‌ನ ರೆಕ್ಟರ್ ವಂ. ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ.ಜೋಯ್ ಅಂದ್ರಾದೆ ಉಪಸ್ಥಿತರಿದ್ದರು.

ದೇವಪುತ್ರ ಈ ಲೋಕದಲ್ಲಿ ಮುಗ್ಧ ಮಗುವಾಗಿ ಜನಿಸಿ, ಪಾಪವೊಂದನ್ನು ಬಿಟ್ಟು ಇನ್ನೆಲ್ಲದರಲ್ಲಿಯೂ ನಮ್ಮಂತೆಯೇ ಆಗಬಯಸಿದ ಯೇಸುಸ್ವಾಮಿ ಬಡವರಿಗೆ ಆಶಾಕಿರಣವಾಗಿ, ದುಃಖಿತರಿಗೆ ಸಾಂತ್ವನವಾಗಿ, ದೀನ ದಲಿತರ ಸಂಗಾತಿಯಾಗಿ, ನೊಂದವರ ಭರವಸೆಯಾಗಿ, ಬಹಿಷ್ಕೃತರ ಗೆಳೆಯನಾಗಿ ಮೂಡಿಬಂದರು ಎಂದರು.

ಕಳೆದೆರಡು ವರ್ಷಗಳಿಂದ ಇಡೀ ವಿಶ್ವವೇ ಕೊರೋನ ಸೋಂಕಿನ ಅಟ್ಟಹಾಸಕ್ಕೆ ನಲುಗಿಹೋಗಿದ್ದು, ಸಾವಿರಾರು ಜನರು ಈ ಸೋಂಕಿಗೆ ಒಳಗಾಗಿದ್ದಾರೆ. ಲಕ್ಷಾಂತರ ಕುಟುಂಬಗಳು ನಿರುದ್ಯೋಗ ಹಾಗೂ ಬಡತನಕ್ಕೆ ಬಲಿಯಾಗಿವೆ. ಬಸವಳಿದ ಈ ಲೋಕಕ್ಕೆ ಹೊಸ ಜೀವವನ್ನು ನೀಡುವ ಅಗತ್ಯವಿದೆ. ಕ್ರಿಸ್ತರ ಜನನದ ಕ್ರಿಸ್ಮಸ್ ಹಬ್ಬದ ಆಚರಣೆಯು ನಮ್ಮಲ್ಲಿ ಮಾನವೀಯತೆಯನ್ನು ಜೀವಂತಗೊಳಿಸಿ, ಮನುಷ್ಯನಿಗೆ ಮಾನವೀಯತೆಯು ಮರೀಚಿಕೆಯಾಗದೆ ಸ್ವಾತಂತ್ರ್ಯ, ಶಾಂತಿ, ಭಾವೈಕ್ಯತೆ, ಕ್ಷಮೆ, ಪ್ರೀತಿ, ಸಹನೆ, ಸಂಯಮ ಮತ್ತು ನೈತಿಕತೆಯನ್ನು ತನ್ನ ಉಸಿರಾಗಿಸಲಿ ಎಂದು ಬಿಷಪ್ ತಮ್ಮ ಸಂದೇಶದಲ್ಲಿ ತಿಳಿಸಿದರು.

ಬಲಿಪೂಜೆಗೆ ಮುನ್ನ ಯೇಸುವಿನ ಜನನ ವೃತ್ತಾಂತವನ್ನು ನಟನೆಯ ಮೂಲಕ ಚರ್ಚಿನ ಕಲಾವಿದರು ಆಕರ್ಷಕವಾಗಿ ಪ್ರಸ್ತುತ ಪಡಿಸಿದರು. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಇಡಿ ಜಿಲ್ಲೆಯ ಚರ್ಚ್‌ಗಳು ವರ್ಣಮಯ ವಿದ್ಯುತ್ ದೀಪಾಲಂಕಾರ ಹಾಗೂ ಬಗೆ ಬಗೆಯ ಚಿತ್ತಾಕರ್ಷಕ ನಕ್ಷತ್ರಗಳಿಂದ ಕಂಗೊಳಿಸುತ್ತಿದ್ದವು.

ಶುಕ್ರವಾರ ರಾತ್ರಿ ಪೂಜೆಯ ವೇಳೆ ಸಿಂಗರಿಸಿಟ್ಟ ಗೋದಲಿಯಲ್ಲಿ ಬಾಲಯೇಸು ಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗುಳದ ಮೂಲಕ ಭಕ್ತಾದಿಗಳು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿಸಿ ಹೂವು ಸುಗಂಧಗಳನ್ನು ಅರ್ಪಿಸುವುದರ ಮೂಲಕ ಯೇಸು ಸ್ವಾಮಿಯ ಜನನವನ್ನು ಸ್ವಾಗತಿಸಲಾಯಿತು.

ಜಿಲ್ಲೆಯ ಪ್ರಮುಖದ ಚರ್ಚುಗಳಾದ ಶಿರ್ವ ಆರೋಗ್ಯ ಮಾತೆಯ ದೇವಾಲಯದಲ್ಲಿ ಧರ್ಮಗುರು ವಂ.ಡೆನಿಸ್ ಡೇಸಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ವಂ.ಚಾಲ್ಸರ್ ಮಿನೇಜಸ್, ಕುಂದಾಪುರ ಹೋಲಿ ರೋಸರಿ ಚರ್ಚ್‌ನಲ್ಲಿ ವಂ.ಸ್ಟ್ಯಾನಿ ತಾವ್ರೊ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ. ಆಲ್ಬನ್ ಡಿಸೋಜಾ ಇವರ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆಯ ಬಲಿಪೂಜೆ ನೆರವೇರಿಸಲಾಯಿತು.

ಕೊರೋನ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸರಕಾರ ಅವಕಾಶ ನೀಡಿರುವುದರಿಂದ ಧರ್ಮಪ್ರಾಂತದ ಚರ್ಚುಗಳಲ್ಲಿ ಬಲಿಪೂಜೆಯ ಬಳಿಕ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ರದ್ದುಗೊಳಿಸಲಾಗಿತ್ತು. ಪೂಜೆಯ ಸಂದರ್ಭದಲ್ಲಿ ಎಲ್ಲಾ ಚರ್ಚುಗಳಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಲಾಗಿತ್ತು.

ಬಲಿಪೂಜೆಯ ಬಳಿಕ ಕ್ರೈಸ್ತ ಭಾಂಧವರು ಪರಸ್ಪರ ಕ್ರಿಸ್ಮಸ್ ಹಬ್ಬದ ಶುಭಾಶಯಗಳ ವಿನಿಮಯ ಮಾಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X