Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ...

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಬೆಳಗಾವಿ ಅಧಿವೇಶನ: ಸಿಎಂ ಬೊಮ್ಮಾಯಿ

''ವಿರೋಧ ಪಕ್ಷದವರಿಗೆ ಜನಪರ ನೀತಿಯೇ ಇಲ್ಲ''

ವಾರ್ತಾಭಾರತಿವಾರ್ತಾಭಾರತಿ24 Dec 2021 9:51 PM IST
share
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಬೆಳಗಾವಿ ಅಧಿವೇಶನ: ಸಿಎಂ ಬೊಮ್ಮಾಯಿ

ಬೆಳಗಾವಿ, ಡಿ. 24 :ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಬೆಳಗಾವಿ ಅಧಿವೇಶನವನ್ನು ಸಾರ್ಥಕಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶಯಕ್ರವಾರ ಸುವರ್ಣ ವಿಧಾನಸೌಧದಲ್ಲಿ ಅಧಿವೇಶ ಮುಂದೂಡಿಕಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಹಲವಾರು ಜ್ವಲಂತ ಸಮಸ್ಯೆಗಳಿಗೆ ಉತ್ತರ ದೊರೆತಿದೆ ಎಂದರು.

ಉತ್ತರ ಕರ್ನಾಟಕದ ನೀರಾವರಿ ಕ್ಷೇತ್ರದ ಅಭಿವೃದ್ಧಿ ಬದ್ಧವಾಗಿದೆ ಎಂದು ಸರಕಾರದ ನಿರೂಪಿಸಿದೆ. ಈ ನಿಟ್ಟಿನಲ್ಲಿ, ಉತ್ತರ ಕರ್ನಾಟಕದ ಭಾಗಕ್ಕೆ ರೈಲ್ವೆ ಯೋಜನೆಗಳು, ಹೆಸ್ಕಾಂನ ಆರ್ಥಿಕ ಪುನಶ್ಚೇತನ,  ಸಸಾಲಟ್ಟಿ ಮತ್ತು ಮಂಟೂರುಗಳಿಗೆ ನೀರಾವರಿ ಯೋಜನೆಗೆ ಅನುಮೋದನೆ, ಗುಲ್ಬರ್ಗಾ ಸೇಡಂ ನಲ್ಲಿ ಏತನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪೂರಕ ಅಂದಾಜಿನಲ್ಲಿ ಎಸ್ಸ್ಇ- ಎಸ್ಟಿ ಜನಾಂಗಕ್ಕೆ 500 ಕೋಟಿ ರೂ., ಕಲ್ಯಾಣ ಕರ್ನಾಟಕ ಶಿಕ್ಷಕರ ನೇಮಕಾತಿ, ಬೆಳಗಾವಿಯಲ್ಲಿ ಮೂಲಸೌಲಭ್ಯಗಳ ವೃದ್ಧಿಗೆ ಆದ್ಯತೆ ನೀಡಲಾಗುವುದು. ಜನವರಿ ತಿಂಗಳಲ್ಲಿ ಜಂಟಿ ಅಧಿವೇಶನವನ್ನು ಕರೆಯುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ರೈತರ ಸಂಕಷ್ಟಕ್ಕೆ ಸ್ಪಂದನೆ

ಅಕಾಲಿಕ ಮಳೆ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿದ್ದ ರೈತರು , ಬಡವರ ಪರಿಹಾರ ನೀಡಲು ಸುದೀರ್ಘ ಚರ್ಚೆಯಾಯಿತು.  ಬೆಳೆಹಾನಿ ಮತ್ತು ಮನೆಹಾನಿ , ನೀರು ನುಗ್ಗಿರುವ ಮನೆಗಳಿಗೆ ಪರಿಹಾರ ಮತ್ತು ತಂತ್ರಾಂಶದ ಬಳಕೆಯಿಂದ ಸರ್ವೇ ಕಾರ್ಯ ಅಪಲೋಡ್ ಆದ 48 ಗಂಟೆಗಳೊಳಗೆ ಪರಿಹಾರ ನೀಡುವ ಕೆಲಸವಾಗಿದೆ.  ಬೆಳೆಹಾನಿಯಾದ ಒಂದೇ ತಿಂಗಳಲ್ಲಿ 700 ಕೋಟಿ ರೂ.ಗೂ ಹೆಚ್ಚು ಪರಿಹಾರವನ್ನು 14 ಲಕ್ಷ ರೈತರಿಗೆ ಈಗಾಗಲೇ ನೀಡಲಾಗಿದೆ. ಇದು ದೇಶದಲ್ಲೇ ದಾಖಲೆ ನಿರ್ಮಿಸಿದ ಮಾದರಿ ಕಾರ್ಯಕ್ರಮ ಎಂದು ಅವರು ಹೇಳಿದರು.

ಬೆಳೆಹಾನಿಗೆ ದುಪ್ಪಟ್ಟು ಪರಿಹಾರ:

ರಾಜ್ಯ ಸರಕಾರ ಸಕಾಲದಲ್ಲಿ ರೈತರಿಗೆ ಸ್ಪಂದಿಸಿದೆ. ಒಣಬೇಸಾಯದ ಪ್ರತಿ ಹೆಕ್ಟೇರ್ ಗೆ 6,800 ರೂ. ಪರಿಹಾರವನ್ನು, 13,600 ರೂ.ಗಳನ್ನು ನೀರಾವರಿ ಜಮೀನಿನ ಪ್ರತಿ ಹೆಕ್ಟೇರ್ ಬೆಳೆಹಾನಿಗೆ ಪರಿಹಾರವನ್ನು ಹಾಗೂ 25ಸಾವಿರ ರೂ. ಗಳನ್ನು ಹಾಗೂ ತೋಟಗಾರಿಕೆ ಬೆಳೆಯ ಪ್ರತಿ ಹೆಕ್ಟೇರ್ ಬೆಳೆಹಾನಿಗೆ  18,000 ರೂ. ಪರಿಹಾರವನ್ನು 28,000 ರೂ.ಗಳಿಗೆ ಹೆಚ್ಚಿಸಿ ನೀಡಲು ತೀರ್ಮಾನಿಸಲಾಗಿದೆ. ಇದು ಐತಿಹಾಸಿಕವಾದ ತೀರ್ಮಾನ. 12 ರಿಂದ 14 ಸಾವಿರ ಹೆಕ್ಟೇರ್ ಪ್ರದೇಶ ನಾಶವಾಗಿದೆ. ಸರ್ಕಾರದ ಆರ್ಥಿಕ ಇತಿಮಿತಿಯೊಳಗೆ ರೈತಪರ ನಿಲುವನ್ನು ತಳೆಯಲಾಗಿದೆ. ರೈತ ಸ್ನೇಹಿ ಸರ್ಕಾರ ಎಂದು ಸದನದಲ್ಲಿ ನಿರೂಪಿಸಲಾಯಿತು. 

ಮತಾಂತರ ನಿಷೇಧ ಕಾಯ್ದೆ :

ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಸ್ಪಷ್ಟ ನಿಲುವಿನಿಂದ ವಿಧಾನಸಭೆಯಲ್ಲಿ ಪಾಸ್ ಮಾಡಲಾಯಿತು. ಕಾಂಗ್ರೆಸ್ ದ್ವಿಮುಖ ನೀತಿ ಸ್ಪಷ್ಟವಾಗಿ ಗೋಚರಿಸಿತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಪಿಎಂಸಿ ಕಾಯ್ದೆಯಡಿ ಖಾಸಗಿ ಮಾರುಕಟ್ಟೆಗೆ ಅನುಮತಿ ನೀಡಿತ್ತು. ಆದರೆ  ವಿರೋಧ ಪಕ್ಷದಲ್ಲಿದ್ದಾಗ ಅದನ್ನು ವಿರೋಧಿಸುತ್ತಿದ್ದಾರೆ. ದ್ವಿಮುಖ ನೀತಿಯನ್ನು ಕಾಂಗ್ರೆಸ್ ನಿರಂತರವಾಗಿ ಮಾಡುತ್ತಿದೆ ಎಂದು ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ಮತಾಂತರ ನಿಷೇದ ಕಾಯ್ದೆ ಪಾಸ್ ಆಗದ ಬಗ್ಗೆ ಪ್ರತಿಕ್ರಯಿಸಿ, ಕಾಯ್ದೆ ಒಪ್ಪಲು ಯಾವುದೇ ಒತ್ತಾಯ, ಒತ್ತಡ ಹೇರುವುದಿಲ್ಲ. ವಿಷಯಗಳನ್ನು ಮನದಟ್ಟು ಮಾಡಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಯ್ದೆಯನ್ನು ಅಂಗೀಕರಿಸಲು ಈ ಕಾಯ್ದೆಯನ್ನು ಮುಂದಿನ ಅಧಿವೇಶನದಲ್ಲಿ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಜನಪರ ನೀತಿಯಿಲ್ಲದ ವಿರೋಧ ಪಕ್ಷ : 

ವಿಧೇಯಕಗಳನ್ನು ಅಂಗೀಕರಿಸಲು ಅಧಿವೇಶನ ಕರೆಯಲಾಗಿದೆ ಎಂಬ ಕಾಂಗ್ರೆಸ್‍ನ ಆರೋಪಕ್ಕೆ ಪ್ರತಿಕ್ರಿಯಿಸಿ ವಿಷಯಗಳನ್ನು ಚರ್ಚಿಸಲು ವಿರೋಧ ಪಕ್ಷಗಳಿಗೆ ಸಾಕಷ್ಟು ಕಾಲಾವಕಾಶ ನೀಡಿದ್ದರೂ, ಧರಣಿ ಮಾಡುವುದಷ್ಟೇ ಅವರ ಧ್ಯೇಯವಾಗಿತ್ತು. ಕೇವಲ ಮಾತನಾಡದೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿತ್ತು. ವಿರೋಧ ಪಕ್ಷದವರಿಗೆ ಜನಪರ ನೀತಿಯೇ ಇಲ್ಲ. ಜವಾಬ್ದಾರಿಯುತವಾದ ನಡೆಯಲ್ಲ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X