ರಾಜ್ಯದಲ್ಲಿಂದು 405 ಕೊರೋನ ದೃಢ; 4 ಮಂದಿ ಮೃತ್ಯು

ಬೆಂಗಳೂರು, ಡಿ.24: ರಾಜ್ಯದಲ್ಲಿ ಶುಕ್ರವಾರ 405 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 4 ಜನರು ಸೋಂಕಿಗೆ ಬಲಿಯಾಗಿದ್ದು, 267 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 30,03,969ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,305ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 7251ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
4 ಸೋಂಕಿತರು ಬಲಿ: ಬೆಳಗಾವಿ 1, ಬೆಂಗಳೂರು ನಗರ 2, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 405 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 254, ಚಾಮರಾಜನಗರ 1, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 20, ಧಾರವಾಡ 3, ಹಾಸನ 9, ಕೊಡಗು 12, ಮಂಡ್ಯ 1, ಮೈಸೂರು 13, ಶಿವಮೊಗ್ಗ 1, ತುಮಕೂರು 16, ಉಡುಪಿ 13, ಉತ್ತರ ಕನ್ನಡ 32, ವಿಜಯಪುರ ಜಿಲ್ಲೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.
ರಾಜಧಾನಿಯಲ್ಲಿ 254 ಜನರಿಗೆ ಕೊರೋನ ದೃಢ
ರಾಜಧಾನಿಯಲ್ಲಿ ಶುಕ್ರವಾರ 254 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,61,156 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,381 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,38,908 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆ







